Karnataka Dam Water Level: ಸೆ.29ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

|

Updated on: Sep 29, 2023 | 6:41 AM

ಕರ್ನಾಟಕದ ಜಲಾಶಯಗಳ ಸೆಪ್ಟೆಂಬರ್​​​ 29ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಸೆ.29ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಕೆಆರ್​ಎಸ್
Follow us on

ರಾಜ್ಯದಾದ್ಯಂತ ಇಂದು (ಸೆ.29) ಅಲ್ಲಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹಾಗಾದರೆ ಸೆಪ್ಟೆಂಬರ್​​​ 29 ರಂದು ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 107.41 123.08 2257 11308
ತುಂಗಭದ್ರಾ ಜಲಾಶಯ (Tungabhadra Dam) 497.71 105.79 58.00 105.78 881 9919
ಮಲಪ್ರಭಾ ಜಲಾಶಯ (Malaprabha Dam) 633.80 37.73 20.89 37.73 0 981
ಕೆ.ಆರ್.ಎಸ್ (KRS Dam) 38.04 49.45 20.75 48.14 5183 2696
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 67.81 141.42 4349 5735
ಕಬಿನಿ ಜಲಾಶಯ (Kabini Dam) 696.13 19.52 13.44 18.69 1236 2000
ಭದ್ರಾ ಜಲಾಶಯ (Bhadra Dam) 657.73 71.54 43.15 70.17 708 2965
ಘಟಪ್ರಭಾ ಜಲಾಶಯ (Ghataprabha Dam) 662.91 51.00 44.21 51.00 4719 173
ಹೇಮಾವತಿ ಜಲಾಶಯ (Hemavathi Dam) 890.58 37.10 18.50 36.99 2378 1300
ವರಾಹಿ ಜಲಾಶಯ (Varahi Dam) 594.36 31.10 10.83 23.33 389 145
ಹಾರಂಗಿ ಜಲಾಶಯ (Harangi Dam)​​ 871.38 8.50 6.84 7.77 940 2200
ಸೂಫಾ (Supa Dam) 564.00 145.33 76.96 105.18 3798 3113

ಸೆ.27ರ ಬೆಳಿಗ್ಗೆ 8:30 ರಿಂದ 28ರ ಬೆಳಿಗ್ಗೆ 8:30ರ ವರಗೆ 133ಮಿಮೀ ಮಳೆಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

 

Published On - 6:40 am, Fri, 29 September 23