Karnataka Dam Water Level: ಆ.22ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಆಗಸ್ಟ್ 22ರ ನೀರಿನ ಮಟ್ಟ: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಮಾಹಿತಿ ಇಲ್ಲಿದೆ.

Karnataka Dam Water Level: ಆ.22ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ವಿವರ ಇಲ್ಲಿದೆ
ತುಂಗಭದ್ರಾ ಜಲಾಶಯ
Follow us
ಆಯೇಷಾ ಬಾನು
|

Updated on: Aug 22, 2023 | 7:22 AM

ರಾಜ್ಯದಲ್ಲಿ ನೀರಿನ ಕೊರತೆ ಇದ್ದರೂ, ಕರ್ನಾಟಕ ಸರ್ಕಾರವು ತಮಿಳುನಾಡು ಸರ್ಕಾರದ ಒತ್ತಡಕ್ಕೆ ಮಣಿದು ಕೆಆರ್​ಎಸ್ ಜಲಾಶಯದಿಂದ(KRS Dam) ತಮಿಳುನಾಡಿಗೆ ನೀರು ಹರಿಸಿದೆ. ಇದಿರಂದ ಕೆಆರ್​ಎಸ್ ನೀರಿನ ಮಟ್ಟ ಕಡಿಮೆ ಇದೆ. ಸದ್ಯ ಈ ಸಂಬಂಧ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್​ ತ್ರಿಸದಸ್ಯ ಪೀಠ ರಚಿಸಿದ್ದು ಮುಂದಿನ ವಾರ ವಿಚಾರಣೆ ನಡೆಯಲಿದೆ. ರಾಜ್ಯದಲ್ಲಿ ತಕ್ಕ ಮಟ್ಟಿಗೆ ಮುಂಗಾರು ಮಳೆ ಆಗದ ಕಾರಣ ಕರ್ನಾಟಕದ ಜಲಾಶಯಗಳಲ್ಲಿ ಸಾಕಷ್ಟು ಪ್ರಮಾಣದ ನೀರಿಲ್ಲ. ಅಲ್ಲದೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದೆ. ಹಾಗಾದರೆ ಆಗಸ್ಟ್‌ 22ರ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಯಾವ ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 123.08 122.13 901 901
ತುಂಗಭದ್ರಾ ಜಲಾಶಯ (Tungabhadra Dam) 497.71 105.79 84.27 105.79 874 10643
ಮಲಪ್ರಭಾ ಜಲಾಶಯ (Malaprabha Dam) 633.8 37.73 23.01 35.25 194 194
ಕೆ.ಆರ್.ಎಸ್ (KRS Dam) 38.04 49.45 27.62 48.56 4983 15247
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 74.06 132.83 5649 5487
ಕಬಿನಿ ಜಲಾಶಯ (Kabini Dam) 696.13 19.52 15.15 19.15 3868 7325
ಭದ್ರಾ ಜಲಾಶಯ (Bhadra Dam) 657.73 71.54 48.74 69.24 3224 3224
ಘಟಪ್ರಭಾ ಜಲಾಶಯ (Ghataprabha Dam) 662.91 51 43.23 50.76 2206 3665
ಹೇಮಾವತಿ ಜಲಾಶಯ (Hemavathi Dam) 890.58 37.10 28.66 37.01 2596 6580
ವರಾಹಿ ಜಲಾಶಯ (Varahi Dam) 594.36 31.10 10.79 20.11 741 253
ಹಾರಂಗಿ ಜಲಾಶಯ (Harangi Dam)​​ 871.38 8.50 8.40 7.94 2446 2100
ಸೂಫಾ (Supa Dam) 564.00 145.33 80.06 87.56 5353 4646

ಇನ್ನು ಕರ್ನಾಟಕದ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿರುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂಬ ಮಾಹಿತಿ ಸಿಕ್ಕಿದೆ. ಹೀಗಾಗಿ ಈ ಜಿಲ್ಲೆಗಳಿಗೆ ಹೊಂದುಕೊಂಡಿರುವ ಜಲಾಶಯಗಳ ನೀರಿನ ಮಟ್ಟ ಹೆಚ್ಚಾಗುವ ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ