Karnataka Dam Water Level: ಜ.10ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

|

Updated on: Jan 10, 2024 | 6:34 AM

ಕರ್ನಾಟಕದ ಜಲಾಶಯಗಳ ಜನವರಿ 10ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಜ.10ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಹೇಮಾವತಿ ಜಲಾಶಯ
Follow us on

ರಾಜ್ಯದಾದ್ಯಂತ ಇಂದು (ಜ.10) ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡು, ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ  12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಜನವರಿ 10 ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 55.23 90.33 0 914
ತುಂಗಭದ್ರಾ ಜಲಾಶಯ (Tungabhadra Dam) 497.71 105.79 10.22 69.96 0 94
ಮಲಪ್ರಭಾ ಜಲಾಶಯ (Malaprabha Dam) 633.80 37.73 16.00 24.83 0 194
ಕೆ.ಆರ್.ಎಸ್ (KRS Dam) 38.04 49.45 20.26 41.29 1245 973
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 53.30 96.55 527 1608
ಕಬಿನಿ ಜಲಾಶಯ (Kabini Dam) 696.13 19.52 13.31 12.61 1046 300
ಭದ್ರಾ ಜಲಾಶಯ (Bhadra Dam) 657.73 71.54 35.20 66.08 201 201
ಘಟಪ್ರಭಾ ಜಲಾಶಯ (Ghataprabha Dam) 662.91 51.00 36.71 35.28 0 3000
ಹೇಮಾವತಿ ಜಲಾಶಯ (Hemavathi Dam) 890.58 37.10 14.96 24.80 894 200
ವರಾಹಿ ಜಲಾಶಯ (Varahi Dam) 594.36 31.10 10.18 15.48 0 0
ಹಾರಂಗಿ ಜಲಾಶಯ (Harangi Dam)​​ 871.38 8.50 3.40 3.26 201 100
ಸೂಫಾ (Supa Dam) 564.00 145.33 69.58 89.78 237 237

ಉಡುಪಿ ಜಿಲ್ಲೆಯ ಕಾಪು ಮತ್ತು ಮಲ್ಲರು ಗ್ರಾಮಗಳಲ್ಲಿ ಕಳೆದ 24 ಗಂಟೆಯಲ್ಲಿ ಅತ್ಯಧಿಕ 96.5 ಮಿಮೀ ಮಳೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ