Karnataka Dam Water Level: ಜ.20ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಕರ್ನಾಟಕದ ಜಲಾಶಯಗಳ ಜನವರಿ 20ರ ನೀರಿನ ಮಟ್ಟ: ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ರಾಜ್ಯದಲ್ಲಿ ಮುಂಗಾರು ಮತ್ತು ಹಿಂಗಾರು ಮಳೆ ಸಮರ್ಪಕವಾಗಿ ಆಗಿಲ್ಲ. ಇದರಿಂದ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಪರದಾಡವಂತ ಪರಿಸ್ಥಿತಿ ಉದ್ಭವಿಸುವ ಸಾಧ್ಯತೆ ಇದೆ. ಇನ್ನು ಕಾವೇರಿ ಹಾಗೂ ಕೃಷ್ಣ ಜಲಾಯನ ಪ್ರದೇಶದ ಪ್ರಮುಖ ಜಲಾಶಯಗಳಲ್ಲಿನ ನೀರು ದಿನದಿಂದ ಕಡಿಮೆಯಾಗುತ್ತಿದೆ. ಕಾವೇರಿ ಜಲಾಯನ ಪ್ರದೇಶದ ಹಾರಂಗಿ, ಹೇಮಾವತಿ, ಕಬಿನಿ ಮತ್ತು ಕೃಷ್ಣರಾಜ ಸಾಗರ (KRS) ನಂತಹ ಪ್ರಮುಖ ಜಲಾಶಯಗಳಲ್ಲಿ 49 ಟಿಎಂಸಿ ಮಾತ್ರ ನೀರು ಇದೆ. ಇನ್ನು ಭದ್ರಾ, ವಾಣಿ ವಿಲಾಸ, ತುಂಗಭದ್ರಾ, ಘಟಪ್ರಭಾ, ಮಲಪ್ರಭಾ, ಆಲಮಟ್ಟಿ ಮತ್ತು ನಾರಾಯಣಪುರ ಸೇರಿದಂತೆ ಏಳು ಜಲಾಶಯಗಳಲ್ಲಿ 167 ಟಿಎಂಟಸಿ ನೀರಿದೆ. ಹಾಗಾದರೆ ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ 12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಜನವರಿ 20 ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಜಲಾಶಯಗಳ ನೀರಿನ ಮಟ್ಟ | ||||||
ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
ಆಲಮಟ್ಟಿ ಜಲಾಶಯ (Almatti Dam) | 519.60 | 123.08 | 53.55 | 79.70 | 0 | 1759 |
ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 10.13 | 61.05 | 0 | 89 |
ಮಲಪ್ರಭಾ ಜಲಾಶಯ (Malaprabha Dam) | 633.80 | 37.73 | 15.82 | 22.95 | 0 | 194 |
ಕೆ.ಆರ್.ಎಸ್ (KRS Dam) | 38.04 | 49.45 | 17.48 | 39.91 | 1153 | 3814 |
ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 51.40 | 91.14 | 168 | 3052 |
ಕಬಿನಿ ಜಲಾಶಯ (Kabini Dam) | 696.13 | 19.52 | 13.33 | 12.84 | 3oo | 300 |
ಭದ್ರಾ ಜಲಾಶಯ (Bhadra Dam) | 657.73 | 71.54 | 34.14 | 63.09 | 161 | 3228 |
ಘಟಪ್ರಭಾ ಜಲಾಶಯ (Ghataprabha Dam) | 662.91 | 51.00 | 34.17 | 34.12 | 0 | 2753 |
ಹೇಮಾವತಿ ಜಲಾಶಯ (Hemavathi Dam) | 890.58 | 37.10 | 15.03 | 23.44 | 260 | 260 |
ವರಾಹಿ ಜಲಾಶಯ (Varahi Dam) | 594.36 | 31.10 | 09.87 | 14.37 | 0 | 680 |
ಹಾರಂಗಿ ಜಲಾಶಯ (Harangi Dam) | 871.38 | 8.50 | 3.42 | 3.27 | 100 | 100 |
ಸೂಫಾ (Supa Dam) | 564.00 | 145.33 | 67.80 | 86.50 | 198 | 2376 |
ಜನವರಿ 21ರ ವರೆಗೆ ರಾಜ್ಯಾದ್ಯಂತ ಒಂ ಹವೆ ಬೀಸಲಿದೆ. ಹಾಗೇ ಬೆಂಗಳೂರು ಮತ್ತು ಸುತ್ತಮುತ್ತಿಲಿನ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು/ದಟ್ಟ ಮಂಜು ಮುಸುಕವ ಸಾಧ್ಯತೆಗಳಿರುತ್ತದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ