Karnataka Dam Water Level: ಜ.24ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಜನವರಿ 24ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಜ.24ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಆಲಮಟ್ಟಿ ಡ್ಯಾಂ
Follow us
ವಿವೇಕ ಬಿರಾದಾರ
|

Updated on:Jan 24, 2024 | 7:02 AM

ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಒಣ ಹವೆ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರದ ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆಗಳಿರುತ್ತವೆ. ಗರಿಷ್ಠ ಉಷ್ಣಾಂಶ 20 ಮತ್ತು ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್​ ಇರುವ ಸಾಧ್ಯತೆ ಇದೆ.  ಇನ್ನು ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ  12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಜನವರಿ 24 ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 52.95 79.55 0 1747
ತುಂಗಭದ್ರಾ ಜಲಾಶಯ (Tungabhadra Dam) 497.71 105.79 10.07 57.87 0 449
ಮಲಪ್ರಭಾ ಜಲಾಶಯ (Malaprabha Dam) 633.80 37.73 15.67 22.30 0 1115
ಕೆ.ಆರ್.ಎಸ್ (KRS Dam) 38.04 49.45 17.25 37.70 498 1002
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 50.21 89.12 0 3218
ಕಬಿನಿ ಜಲಾಶಯ (Kabini Dam) 696.13 19.52 13.26 12.75 118 300
ಭದ್ರಾ ಜಲಾಶಯ (Bhadra Dam) 657.73 71.54 33.10 62.02 205 3226
ಘಟಪ್ರಭಾ ಜಲಾಶಯ (Ghataprabha Dam) 662.91 51.00 33.80 33.85 0 245
ಹೇಮಾವತಿ ಜಲಾಶಯ (Hemavathi Dam) 890.58 37.10 14.97 23.07 130 280
ವರಾಹಿ ಜಲಾಶಯ (Varahi Dam) 594.36 31.10 09.75 13.94 0 0
ಹಾರಂಗಿ ಜಲಾಶಯ (Harangi Dam)​​ 871.38 8.50 3.42 3.28 142 100
ಸೂಫಾ (Supa Dam) 564.00 145.33 66.98 85.90 27 3421

ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ 5 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗುವ ಸಾಧ್ಯತೆ ಇದೆ. ಇನ್ನು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಉಷ್ಣಾಂಶ 3 ಡಿಗ್ರಿ ಸೆಲ್ಸಿಯಸ್​​ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ನಿನ್ನೆ (ಜ.23) 10.6 ಡಿಗ್ರಿ ಸೆಲ್ಸಿಯಸ್​ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:01 am, Wed, 24 January 24