Karnataka Dam Water Level: ಜ.26ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಕರ್ನಾಟಕದ ಜಲಾಶಯಗಳ ಜನವರಿ 26ರ ನೀರಿನ ಮಟ್ಟ: ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ರಾಜ್ಯಾದ್ಯಂತ ಮುಂದಿನ 48 ಗಂಟೆಗಳ ಕಾಲ ಒಣ ಹವೆ ಬೀಸಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ತಾಪಮಾನದಲ್ಲಿ ಅಧಿಕ ಪ್ರಮಾಣದಲ್ಲಿ ಬದಲಾವಣೆಯಾಗುವುದಿಲ್ಲ. ಇನ್ನು ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ 12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಜನವರಿ 26 ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಜಲಾಶಯಗಳ ನೀರಿನ ಮಟ್ಟ | ||||||
ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
ಆಲಮಟ್ಟಿ ಜಲಾಶಯ (Almatti Dam) | 519.60 | 123.08 | 52.64 | 79.20 | 0 | 1747 |
ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 9.97 | 56.40 | 0 | 691 |
ಮಲಪ್ರಭಾ ಜಲಾಶಯ (Malaprabha Dam) | 633.80 | 37.73 | 15.19 | 21.84 | 0 | 3094 |
ಕೆ.ಆರ್.ಎಸ್ (KRS Dam) | 38.04 | 49.45 | 17.16 | 37.08 | 498 | 1002 |
ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 49.42 | 87.93 | 0 | 3778 |
ಕಬಿನಿ ಜಲಾಶಯ (Kabini Dam) | 696.13 | 19.52 | 13.22 | 12.70 | 118 | 300 |
ಭದ್ರಾ ಜಲಾಶಯ (Bhadra Dam) | 657.73 | 71.54 | 32.55 | 61.48 | 92 | 3275 |
ಘಟಪ್ರಭಾ ಜಲಾಶಯ (Ghataprabha Dam) | 662.91 | 51.00 | 33.77 | 33.34 | 0 | 119 |
ಹೇಮಾವತಿ ಜಲಾಶಯ (Hemavathi Dam) | 890.58 | 37.10 | 14.95 | 22.91 | 136 | 220 |
ವರಾಹಿ ಜಲಾಶಯ (Varahi Dam) | 594.36 | 31.10 | 09.74 | 13.71 | 0 | 158 |
ಹಾರಂಗಿ ಜಲಾಶಯ (Harangi Dam) | 871.38 | 8.50 | 3.42 | 3.28 | 130 | 100 |
ಸೂಫಾ (Supa Dam) | 564.00 | 145.33 | 66.39 | 85.33 | 42 | 3727 |
ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆಗಳಿರುತ್ತದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:00 am, Fri, 26 January 24