Karnataka Dam Water Level: ಜ.04ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

|

Updated on: Jan 04, 2024 | 7:01 AM

ಕರ್ನಾಟಕದ ಜಲಾಶಯಗಳ ಜನವರಿ 04ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಜ.04ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಸೂಪಾ ಡ್ಯಾಂ
Follow us on

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಚಳಿ ಪ್ರಮಾಣ ಹೆಚ್ಚಾಗುತ್ತಿದೆ. ಮುಂಜಾನೆ ಹೊತ್ತಿಗೆ ಮಂಜು ಕವಿದ ವಾತಾವರಣವಿರುತ್ತದೆ. ಜನವರಿ 5 ಮತ್ತು 6ರಂದು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ. ಹಾಗೂ ಜನವರಿ 8ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ. ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ  12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಜನವರಿ 04 ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 55.63 94.09 0 914
ತುಂಗಭದ್ರಾ ಜಲಾಶಯ (Tungabhadra Dam) 497.71 105.79 10.26 73.75 0 94
ಮಲಪ್ರಭಾ ಜಲಾಶಯ (Malaprabha Dam) 633.80 37.73 16.08 25.98 0 194
ಕೆ.ಆರ್.ಎಸ್ (KRS Dam) 38.04 49.45 20.32 41.45 916 974
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 54.25 99.15 234 3273
ಕಬಿನಿ ಜಲಾಶಯ (Kabini Dam) 696.13 19.52 13.29 12.47 180 300
ಭದ್ರಾ ಜಲಾಶಯ (Bhadra Dam) 657.73 71.54 35.37 67.04 70 464
ಘಟಪ್ರಭಾ ಜಲಾಶಯ (Ghataprabha Dam) 662.91 51.00 38.01 37.66 0 2992
ಹೇಮಾವತಿ ಜಲಾಶಯ (Hemavathi Dam) 890.58 37.10 14.94 25.26 179 200
ವರಾಹಿ ಜಲಾಶಯ (Varahi Dam) 594.36 31.10 10.12 16.12 0 175
ಹಾರಂಗಿ ಜಲಾಶಯ (Harangi Dam)​​ 871.38 8.50 3.38 3.25 154 100
ಸೂಫಾ (Supa Dam) 564.00 145.33 70.28 91.23 120 1717

ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಡ್ಯಾಂಗಳ ನೀರಿನ ಮಟ್ಟ ಕುಸಿದಿದೆ. ದಿನೇ ದಿನೇ ಡ್ಯಾಂನ ನೀರು ಕಡಿಮೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಎದುರಾಗುವ ಬಹುತೇಕ ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ