Karnataka Dam Water Level: KRS ನೀರು ಹೆಚ್ಚಳ, ಜು.04ರ ರಾಜ್ಯದ ಡ್ಯಾಂಗಳ ನೀರಿನ ಮಟ್ಟ ವಿವರ ಹೀಗಿದೆ

ಕರ್ನಾಟಕದ ಜಲಾಶಯಗಳ ಜು. 04ರ ನೀರಿನ ಮಟ್ಟ: ರ್ನಾಟಕದ ಪ್ರಮುಖ ಜಲಾಶಯಗಳಾದ ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾದ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: KRS ನೀರು ಹೆಚ್ಚಳ, ಜು.04ರ ರಾಜ್ಯದ ಡ್ಯಾಂಗಳ ನೀರಿನ ಮಟ್ಟ ವಿವರ ಹೀಗಿದೆ
ಕೆಆರ್​ಎಸ್​ ಜಲಾಶಯ
Follow us
ಆಯೇಷಾ ಬಾನು
|

Updated on:Jul 04, 2024 | 9:40 AM

ರಾಜ್ಯದಲ್ಲಿ ಮಳೆ ಅಬ್ಬರ ಜೋರಾಗಿದ್ದು ಜಲಾಶಯಗಳಿಗೆ ಜೀವ ಕಳೆ ಬಂದಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ ಹಿನ್ನೆಲೆ ಕೃಷ್ಣರಾಜಸಾಗರ ಡ್ಯಾಂನ ನೀರಿನ ಮಟ್ಟ ನೂರು ಅಡಿ ಸನಿಹಕ್ಕೆ ಬಂದಿದೆ. ಒಂದೇ ವಾರದಲ್ಲಿ ಕೆಆರ್​ಎಸ್​​ ಡ್ಯಾಂಗೆ 12 ಅಡಿಯಷ್ಟು ನೀರು ಬಂದಿದ್ದು ಸದ್ಯ 99.30 ಅಡಿ ತಲುಪಿದೆ. ನೀರಿನ ಮಟ್ಟ ಹೆಚ್ಚಳದಿಂದ ರೈತರಲ್ಲಿ ಸಂತಸ ಮನೆಮಾಡಿದೆ. ಇನ್ನು ಮತ್ತೊಂದೆಡೆ ಕಬಿನಿ ಜಲಾಶಯದ ನೀರಿನ ಮಟ್ಟ 80 ಅಡಿ ತಲುಪಿದ್ದು ಇನ್ನು 2-3 ದಿನದಲ್ಲಿ ಕಬಿನಿ ಜಲಾಶಯ ಭರ್ತಿ ಆಗುವ ಸಾಧ್ಯತೆ ಇದೆ. ಕಬಿನಿ ಡ್ಯಾಂ ಸಂಪೂರ್ಣ ಭರ್ತಿಗೆ 4 ಅಡಿ ಮಾತ್ರ ಬಾಕಿ ಇದೆ. ಹಾಗಾದರೆ ಕೆಆರ್​ಎಸ್​ ಸೇರಿದಂತೆ ಕರ್ನಾಟಕದ ಡ್ಯಾಂಗಳಿಗೆ (Karnataka Dam Water Level) ಜು.04 ರಂದು ಒಳ, ಹೊರ ಹರಿವು ಮತ್ತು ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ಓದಿ

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 41.41 19.34 27385 430
ತುಂಗಭದ್ರಾ ಜಲಾಶಯ (Tungabhadra Dam) 497.71 105.79 8.78 3.00 10503 392
ಮಲಪ್ರಭಾ ಜಲಾಶಯ (Malaprabha Dam) 633.80 37.73 6.34 6.96 1000 194
ಕೆ.ಆರ್.ಎಸ್ (KRS Dam) 38.04 49.45 21.36 10.02 14135 532
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 22.59 11.72 19950 2055
ಕಬಿನಿ ಜಲಾಶಯ (Kabini Dam) 696.13 19.52 16.78 4.72 9807 2917
ಭದ್ರಾ ಜಲಾಶಯ (Bhadra Dam) 657.73 71.54 18.59 24.82 5324 347
ಘಟಪ್ರಭಾ ಜಲಾಶಯ (Ghataprabha Dam) 662.91 51.00 11.24 4.04 7311 105
ಹೇಮಾವತಿ ಜಲಾಶಯ (Hemavathi Dam) 890.58 37.10 15.31 13.97 8055 250
ವರಾಹಿ ಜಲಾಶಯ (Varahi Dam) 594.36 31.10 4.65 2.49 2441 0
ಹಾರಂಗಿ ಜಲಾಶಯ (Harangi Dam)​​ 871.38 8.50 4.40 2.82 1649 200
ಸೂಫಾ (Supa Dam) 564.00 145.33 32.47 30.40 15627 1485
ನಾರಾಯಣಪುರ ಜಲಾಶಯ (Narayanpura Dam) 492.25 33.31 21.17 14.29 217 217
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 18.12 24.90 0 147

ರಾಜ್ಯದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದ ತುಂಗಭದ್ರಾ ಅಣೆಕಟ್ಟಿಗೆ ಕಳೆದ ಒಂದು ವಾರದಿಂದ ಹೆಚ್ಚಿನ ಒಳಹರಿವು ಪ್ರಾರಂಭವಾಗಿದೆ. ಎರಡು ತಿಂಗಳ ಹಿಂದೆ ಅಣೆಕಟ್ಟೆಯಲ್ಲಿ 3 ಟಿಎಂಸಿ ಅಡಿ ಇದ್ದ ನೀರಿನ ಮಟ್ಟ ಈಗ 8 ಟಿಎಂಸಿ ಅಡಿಗೆ ಏರಿಕೆಯಾಗಿದ್ದು, ಕಳೆದ ಎರಡು ದಿನಗಳಿಂದ 10,503 ಕ್ಯೂಸೆಕ್ ಒಳಹರಿವು ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:37 am, Thu, 4 July 24

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?