Karnataka Dam Water Level: ಮಾ.07ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

|

Updated on: Mar 07, 2024 | 7:23 AM

ಕರ್ನಾಟಕದ ಜಲಾಶಯಗಳ ಮಾರ್ಚ 7ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಮಾ.07ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಕೆಆರ್​ಎಸ್​ ಡ್ಯಾಂ
Follow us on

ರಾಜ್ಯದಲ್ಲಿ ಬರಗಾಲ ಆವರಿಸಿದ್ದರಿಂದ ಜಲ ಮೂಲಗಳು ಬರಿದಾಗುತ್ತಾವೆ. ಇದರಿಂದ ಕುಡಿಯಲು ನೀರು ಸಿಗದಂತಾಗಿದೆ. ಬೆಂಗಳೂರಿನಲ್ಲಂತೂ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಹನಿ ನೀರಿಗಾಗಿ ಪರದಾಡುವಂತಾಗಿದೆ. ಕೆಆರ್​ಎಸ್​ ಅಣೆಕಟ್ಟಿನಲ್ಲಿ ನೀರಿನ ಮಟ್ಟ ಬಹಳ ಕುಸಿತಗೊಂಡಿದ್ದು, ಬೆಂಗಳೂರು ನಗರಕ್ಕೆ ನೀರು ಪೂರೈಕೆ ತಲೆನೋವಾಗಿದೆ. ಹಾಗಾದರೆ ಕೆಆರ್​ಎಸ್​ ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಭದ್ರಾ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ 12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಮಾರ್ಚ್​ 07 ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 47.94 45.96 0 2372
ತುಂಗಭದ್ರಾ ಜಲಾಶಯ (Tungabhadra Dam) 497.71 105.79 8.01 25.27 0 1306
ಮಲಪ್ರಭಾ ಜಲಾಶಯ (Malaprabha Dam) 633.80 37.73 11.38 13.77 0 194
ಕೆ.ಆರ್.ಎಸ್ (KRS Dam) 38.04 49.45 15.73 26.69 292 747
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 37.63 63.32 268 3477
ಕಬಿನಿ ಜಲಾಶಯ (Kabini Dam) 696.13 19.52 11.36 09.70 79 700
ಭದ್ರಾ ಜಲಾಶಯ (Bhadra Dam) 657.73 71.54 25.07 50.12 75 399
ಘಟಪ್ರಭಾ ಜಲಾಶಯ (Ghataprabha Dam) 662.91 51.00 26.70 21.83 0 2716
ಹೇಮಾವತಿ ಜಲಾಶಯ (Hemavathi Dam) 890.58 37.10 13.21 21.12 35 370
ವರಾಹಿ ಜಲಾಶಯ (Varahi Dam) 594.36 31.10 7.66 8.63 0 567
ಹಾರಂಗಿ ಜಲಾಶಯ (Harangi Dam)​​ 871.38 8.50 3.36 3.23 189 200
ಸೂಫಾ (Supa Dam) 564.00 145.33 56.81 73.87 354 4375

ಇಂದು ರಾಜ್ಯದಾದ್ಯಂತ ಒಣ ಹವೆ ಬೀಸಲಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ. ಬೆಂಗಳೂರು ನಗರದಲ್ಲಿ ಇಂದು ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಡ್ತಾಂಶ 20 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ