Karnataka Dam Water Level: ಮೇ 14ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

|

Updated on: May 14, 2024 | 7:18 AM

ಕರ್ನಾಟಕದ ಜಲಾಶಯಗಳ ಮೇ 14ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಮೇ 14ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಆಲಮಟ್ಟಿ ಡ್ಯಾಂ
Follow us on

ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಇದರಿಂದ ಬಿಸಿಲಿನಿಂದ ಹೈರಾಣಾಗಿದ್ದ ಜನರು ವರುಣರಾಯನ ಕೃಪೆಯಿಂದ ತಣ್ಣಗಾಗಿದ್ದಾರೆ. ಕೃಷಿ ಚಟುವಟಿಕೆಗಳು ಆರಂಭವಾಗಿವೆ. ರೈತನ ಮೊಗದಲ್ಲಿ ಸಂತಸ ಮೂಡಿದೆ. ಇನ್ನು ಮಳೆಯಾಗುತ್ತಿರುವುದರಿಂದ ನೀರಿನ ಮೂಲಗಳಿಗೆ ಕಳೆ ಬರುತ್ತಿದೆ. ಆಲಮಟ್ಟಿ ಜಲಾಶಯದಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ 3 ಟಿಎಂಸಿಯಷ್ಟು ನೀರು ಹೆಚ್ಚಾಗಿದೆ. ಹಾಗಾದರೆ ಕೆಆರ್​ಎಸ್​ ಆಲಮಟ್ಟಿ, ಭದ್ರಾ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ರಾಜ್ಯದ 12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಮೇ 14 ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 27.83 24.32 0 9583
ತುಂಗಭದ್ರಾ ಜಲಾಶಯ (Tungabhadra Dam) 497.71 105.79 3.42 3.19 0 90
ಮಲಪ್ರಭಾ ಜಲಾಶಯ (Malaprabha Dam) 633.80 37.73 7.94 9.50 0 194
ಕೆ.ಆರ್.ಎಸ್ (KRS Dam) 38.04 49.45 10.62 13.57 250 541
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 16.96 25.14 0 2067
ಕಬಿನಿ ಜಲಾಶಯ (Kabini Dam) 696.13 19.52 6.43 4.78 42 500
ಭದ್ರಾ ಜಲಾಶಯ (Bhadra Dam) 657.73 71.54 13.37 28.33 467 374
ಘಟಪ್ರಭಾ ಜಲಾಶಯ (Ghataprabha Dam) 662.91 51.00 14.15 7.93 0 5354
ಹೇಮಾವತಿ ಜಲಾಶಯ (Hemavathi Dam) 890.58 37.10 9.11 17.49 253 250
ವರಾಹಿ ಜಲಾಶಯ (Varahi Dam) 594.36 31.10 4.41 3.34 0 0
ಹಾರಂಗಿ ಜಲಾಶಯ (Harangi Dam)​​ 871.38 8.50 2.95 2.67 262 300
ಸೂಫಾ (Supa Dam) 564.00 145.33 37.26 49.59 0 688

ಮೇ 21ರವರೆಗೆ ರಾಜ್ಯಾದ್ಯಂತ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮೇ 19 ಮತ್ತು 20 ರಂದು ಮಳೆ ಹೆಚ್ಚಾಗುವ ಸಾದ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ