Karnataka Dam Water Level: ಮೇ 17ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

|

Updated on: May 17, 2024 | 7:23 AM

ಕರ್ನಾಟಕದ ಜಲಾಶಯಗಳ ಮೇ 17ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಮೇ 17ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ತುಂಗಭದ್ರ ಡ್ಯಾಂ
Follow us on

ಬೆಂಗಳೂರಿನಲ್ಲಿ ಶುಕ್ರವಾರ ಬೆಳ್ಳಂ ಬೆಳಗ್ಗೆ ವರುಣನ ಸಿಂಚನವಾಗಿದೆ. ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಇದರಿಂದ ಕೆಲವು ಕಡೆ ಹಾನಿಯಾಗಿದ್ದರೆ, ಇನ್ನು ಕೆಲವು ಕಡೆ ಮಳೆಯಿಂದ ಶುಭವಾಗಿದೆ. ನೀರಿನ ಮೂಲಗಳಿಗೆ ಜೀವ ಕಳೆ ಬಂದಿದೆ. ಜಲಾಶಯಗಳಿಗೆ ಒಳ ಹರಿವು ಅಲ್ಪ ಪ್ರಮಾಣದಲ್ಲಿ ಅಧಿಕವಾಗಿದೆ. ಹಾಗಾದರೆ ಕೆಆರ್​ಎಸ್​ ಆಲಮಟ್ಟಿ, ಭದ್ರಾ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ರಾಜ್ಯದ 12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಮೇ 17 ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 26.27 24.00 0 4594
ತುಂಗಭದ್ರಾ ಜಲಾಶಯ (Tungabhadra Dam) 497.71 105.79 3.41 3.58 0 45
ಮಲಪ್ರಭಾ ಜಲಾಶಯ (Malaprabha Dam) 633.80 37.73 7.69 9.46 0 1394
ಕೆ.ಆರ್.ಎಸ್ (KRS Dam) 38.04 49.45 10.78 13.73 1771 153
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 16.57 23.79 388 2064
ಕಬಿನಿ ಜಲಾಶಯ (Kabini Dam) 696.13 19.52 6.32 4.83 43 300
ಭದ್ರಾ ಜಲಾಶಯ (Bhadra Dam) 657.73 71.54 13.39 27.56 467 375
ಘಟಪ್ರಭಾ ಜಲಾಶಯ (Ghataprabha Dam) 662.91 51.00 13.11 7.91 0 3026
ಹೇಮಾವತಿ ಜಲಾಶಯ (Hemavathi Dam) 890.58 37.10 9.08 17.48 63 250
ವರಾಹಿ ಜಲಾಶಯ (Varahi Dam) 594.36 31.10 4.29 3.23 0 0
ಹಾರಂಗಿ ಜಲಾಶಯ (Harangi Dam)​​ 871.38 8.50 2.94 2.66 172 200
ಸೂಫಾ (Supa Dam) 564.00 145.33 36.87 48.70 5 2361

ಬೆಂಗಳೂರು ಮತ್ತು ಮೈಸೂರು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ