ರಾಜ್ಯದ ಕರಾವಳಿ ಮತ್ತು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಇದು ಭೀಕರ ಬಿಸಿಲಿನಿಂದ ರೋಸಿ ಹೋಗಿದ್ದ ಜನರಿಗೆ ಸಂತಸ ತಂದಿದೆ. ಬೀದರ, ವಿಜಯಪುರ, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಜನರ ಸಂತೋಷಕ್ಕೆ ಕಾರಣವಾಗಿದೆ. ಇನ್ನು ರಾಜ್ಯದ ಪ್ರಮುಖ 12 ಜಲಾಶಯಗಳ ನೀರಿನ ಮಟ್ಟ (Karnataka Dam Water Level) ಏಪ್ರಿಲ್ 16ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಜಲಾಶಯಗಳ ನೀರಿನ ಮಟ್ಟ | ||||||
ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
ಆಲಮಟ್ಟಿ ಜಲಾಶಯ (Almatti Dam) | 519.60 | 123.08 | 33.55 | 27.83 | 0 | 1556 |
ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 3.95 | 3.21 | 0 | 249 |
ಮಲಪ್ರಭಾ ಜಲಾಶಯ (Malaprabha Dam) | 633.80 | 37.73 | 08.70 | 10.93 | 0 | 1394 |
ಕೆ.ಆರ್.ಎಸ್ (KRS Dam) | 38.04 | 49.45 | 12.34 | 18.16 | 82 | 770 |
ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 24.89 | 39.79 | 416 | 3245 |
ಕಬಿನಿ ಜಲಾಶಯ (Kabini Dam) | 696.13 | 19.52 | 8.41 | 5.82 | 17 | 800 |
ಭದ್ರಾ ಜಲಾಶಯ (Bhadra Dam) | 657.73 | 71.54 | 17.87 | 37.10 | 171 | 414 |
ಘಟಪ್ರಭಾ ಜಲಾಶಯ (Ghataprabha Dam) | 662.91 | 51.00 | 21.30 | 13.22 | 0 | 3869 |
ಹೇಮಾವತಿ ಜಲಾಶಯ (Hemavathi Dam) | 890.58 | 37.10 | 10.00 | 19.26 | 5 | 470 |
ವರಾಹಿ ಜಲಾಶಯ (Varahi Dam) | 594.36 | 31.10 | 5.43 | 5.66 | 0 | 0 |
ಹಾರಂಗಿ ಜಲಾಶಯ (Harangi Dam) | 871.38 | 8.50 | 3.14 | 2.80 | 173 | 200 |
ಸೂಫಾ (Supa Dam) | 564.00 | 145.33 | 44.81 | 61.09 | 0 | 1819 |
ಉಡುಪಿ ಜಿಲ್ಲೆ ಕಾರ್ಕಳದ ಮಾಳದಲ್ಲಿ ಏಪ್ರಿಲ್ 14 ರಿಂದ ಏಪ್ರಿಲ್ 15ರ ಬೆಳಗಿನ ಜಾವ 8:30ರ ವರೆಗೆ ಅತ್ಯಧಿಕ 13.5 ಮಿಮೀ ಮಳೆಯಾಗಿದೆ. ಇನ್ನು ಕೊಪ್ಪಳ, ಬಳ್ಳಾರಿ, ರಾಯಚೂರು, ಕಲಬುರಗಿ, ಬಾಗಲಕೋಟ, ಉತ್ತರ ಕನ್ನಡ, ಬೆಳಗಾವಿ, ಗದಗ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಏಪ್ರಿಲ್ 15 ರಂದು 40 ರಿಂದ 42 ಡಿಗ್ರಿ ಸೆಲ್ಸಿಯಸ್ ಮಧ್ಯೆ ತಾಪಮಾನ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ