Karnataka Dam Water Level: ಏ.13ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಏಪ್ರಿಲ್​ 13ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಏ.13ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಸುಫಾ ಡ್ಯಾಂ
Follow us
ವಿವೇಕ ಬಿರಾದಾರ
|

Updated on: Apr 13, 2024 | 7:12 AM

ಬಿಸಿಲಿನಿಂದ ಕೆಂಗೆಟ್ಟದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಉತ್ತರ ಕರ್ನಾಟಕ, ಮಲೆನಾಡು ಸೇರಿ ರಾಜ್ಯದ 12 ಜಿಲ್ಲೆಗಳಲ್ಲಿ ಶುಕ್ರವಾರವೂ ಮಳೆಯಾಗಿದೆ. ಬೆಳಗಾವಿ, ವಿಜಯಪುರ, ಕೊಡಗು, ಚಿಕ್ಕಮಗಳೂರು, ಬಾಗಲಕೋಟೆ, ದಕ್ಷಿಣ ಕನ್ನಡ, ಶಿವಮೊಗ್ಗ, ಗದಗ, ಹಾವೇರಿ, ಉತ್ತರಕನ್ನಡ, ವಿಜಯನಗರ, ಕೊಪ್ಪಳ ಜಿಲ್ಲೆಗಳಲ್ಲಿ ಮಳೆಯಾಗಿದೆ. ಹಾಗಾದರೆ ರಾಜ್ಯದ ​ಆಲಮಟ್ಟಿ, ಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ 12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಏಪ್ರಿಲ್​ ​07ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 33.93 28.11 0 1556
ತುಂಗಭದ್ರಾ ಜಲಾಶಯ (Tungabhadra Dam) 497.71 105.79 4.01 3.31 0 267
ಮಲಪ್ರಭಾ ಜಲಾಶಯ (Malaprabha Dam) 633.80 37.73 09.07 11.29 0 1482
ಕೆ.ಆರ್.ಎಸ್ (KRS Dam) 38.04 49.45 12.55 18.30 87 775
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 25.74 41.67 0 3016
ಕಬಿನಿ ಜಲಾಶಯ (Kabini Dam) 696.13 19.52 8.64 5.97 34 800
ಭದ್ರಾ ಜಲಾಶಯ (Bhadra Dam) 657.73 71.54 17.94 37.96 171 414
ಘಟಪ್ರಭಾ ಜಲಾಶಯ (Ghataprabha Dam) 662.91 51.00 22.28 13.26 0 3324
ಹೇಮಾವತಿ ಜಲಾಶಯ (Hemavathi Dam) 890.58 37.10 10.13 19.34 6 470
ವರಾಹಿ ಜಲಾಶಯ (Varahi Dam) 594.36 31.10 5.59 5.91 0 0
ಹಾರಂಗಿ ಜಲಾಶಯ (Harangi Dam)​​ 871.38 8.50 3.15 2.82 161 200
ಸೂಫಾ (Supa Dam) 564.00 145.33 45.50 62.47 89 3255

ಮುಂದಿನ‌ ಕೆಲ‌ ಗಂಟೆಗಳ‌ ಕಾಲ ದಾವಣಗೆರೆ ಜಿಲ್ಲೆಯಲ್ಲಿ ಮಳೆ ಸುರಿಯುವ ಮೂನ್ಸೂಚನೆ ದೊರೆತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ ಘೋಷಣೆ ಮಾಡಲಾಗಿದೆ. ಬಿಸಿಲಿ ಪ್ರಖರತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ದಾವಣಗೆರೆ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ಈಗಾಗಲೇ ದಾವಣಗೆರೆ, ಚನ್ನಗಿರಿ ಸೇರಿದಂತೆ ಕೆಲ ತಾಲೂಕುಗಳಲ್ಲಿ ಅಲ್ಲಲ್ಲಿ ಮಳೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ