Karnataka Dam Water Level: ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ

ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು ನದಿಗಳು ಉಕ್ಕಿ ಹರಿಯುತ್ತಿವೆ. ಜಲಾಶಯಗಳಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿ ಬರುತ್ತಿರುವುದರಿಂದ ರಾಜ್ಯದ ಬಹುತೇಕ ಡ್ಯಾಂಗಳು ಭರ್ತಿಯಾಗುತ್ತಿವೆ. ಜುಲೈ 25ರಂದು ಯಾವ್ಯಾವ ಜಲಾಶಯಗಳ ನೀರಿನ ಮಟ್ಟ ಯಾವ ರೀತಿ ಇದೆ ಎಂಬ ಬಗ್ಗೆ ಇಲ್ಲಿ ತಿಳಿಯಿರಿ.

Karnataka Dam Water Level: ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ
ಆಲಮಟ್ಟಿ ಜಲಾಶಯ
Follow us
ಆಯೇಷಾ ಬಾನು
|

Updated on:Jul 25, 2024 | 7:47 AM

ಕರಾವಳಿ ಸೇರಿದಂತೆ ಇಡೀ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದೆ. ರಾಜ್ಯದ ಬಹುತೇಕ ಜಲಾಶಯಗಳಿಗೆ ಜೀವ ಕಳೆ ಬಂದಿದೆ.  ಜಲಾಶಯಗಳು ತುಂಬಿರುವುದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.  ಹಾಗಾದ್ರೆ ಬನ್ನಿ ರಾಜ್ಯದ ಕೆಆರ್​ಎಸ್ ಡ್ಯಾಂ, ಆಲಮಟ್ಟಿ ಡ್ಯಾಂ, ಸುಫಾ ಡ್ಯಾಂ ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ (Karnataka Dam Water Level) ಇಂದಿನ (ಜು.25) ನೀರಿನ ಮಟ್ಟ ವಿವರ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 91.93 62.53 1,59,812 1,59,812
ತುಂಗಭದ್ರಾ ಜಲಾಶಯ (Tungabhadra Dam) 497.71 105.79 96.91 25.42 84,115 14,962
ಮಲಪ್ರಭಾ ಜಲಾಶಯ (Malaprabha Dam) 633.80 37.73 21.84 12.70 16,386 194
ಕೆ.ಆರ್.ಎಸ್ (KRS Dam) 38.04 49.45 48.48 19.14 31,852 11,911
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 98.50 46.89 58,619 1,895
ಕಬಿನಿ ಜಲಾಶಯ (Kabini Dam) 696.13 19.52 18.46 16.09 18,147 25,000
ಭದ್ರಾ ಜಲಾಶಯ (Bhadra Dam) 657.73 71.54 52.27 33.83 15,383 197
ಘಟಪ್ರಭಾ ಜಲಾಶಯ (Ghataprabha Dam) 662.91 51.00 43.23 20.63 31,153 2,534
ಹೇಮಾವತಿ ಜಲಾಶಯ (Hemavathi Dam) 890.58 37.10 36.16 21.73 23,363 22,532
ವರಾಹಿ ಜಲಾಶಯ (Varahi Dam) 594.36 31.10 13.12 7.93 4,880 0
ಹಾರಂಗಿ ಜಲಾಶಯ (Harangi Dam)​​ 871.38 8.50 7.58 6.76 9,288 7,104
ಸೂಫಾ (Supa Dam) 564.00 145.33 80.20 57.15 42,445 0
ನಾರಾಯಣಪುರ ಜಲಾಶಯ (Narayanpura Dam) 492.25 33.31 27.61 15.59 1,57,360 1,61,058
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 17.91 24.69 0 147

ಇನ್ನು ಭಾರೀ ಮಳೆಗೆ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಎರಡು ವರ್ಷಗಳ ಬಳಿಕ ಡ್ಯಾಂ ತುಂಬಿದ್ದು, ರೈತರಲ್ಲಿ ಸಂತಸ ಮನೆ ಮಾಡಿದೆ. ಇನ್ನು ಬೃಂದಾವನದಲ್ಲಿರುವ ತೋಟಗಾರಿಕೆ ಇಲಾಖೆಗೆ ನೀರು ನುಗ್ಗದಂತೆ ನಿರ್ಮಿಸಿದ್ದ ತಡೆಗೋಡೆ ಜಲಾಶಯದಿಂದ ಹೊರ ಬಿಟ್ಟ ನೀರಿನ ರಭಸಕ್ಕೆ ಕುಸಿದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:42 am, Thu, 25 July 24