Karnataka Dam Water Level: ಮೇ 18ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

|

Updated on: May 18, 2024 | 7:09 AM

ಕರ್ನಾಟಕದ ಜಲಾಶಯಗಳ ಮೇ 18ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಮೇ 18ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಕೆಆರ್​ಎಸ್​ ಡ್ಯಾಂ
Follow us on

ರಾಜ್ಯದಲ್ಲಿ ಕೃತ್ತಿಕಾ ಮಳೆಯಾಗುತ್ತಿದ್ದು, ನೀರಿನ ಮೂಲಗಳಾದ ಕೆರೆ, ಕಟ್ಟೆ, ಹಳ್ಳ, ನದಿಗಳಿಗೆ ಜೀವ ಕಳೆ ಬರುತ್ತಿದೆ. ಕಾವೇರಿ ಜಲಾಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕಾವೇಕಿ ನದಿ ಮೈದುಂಬಿಕೊಳ್ಳುತ್ತಿದ್ದು, ಕೆಆರ್​ಎಸ್​ ಜಲಾಶಯಕ್ಕೆ ಒಳಹರಿವು ಹೆಚ್ಚಿದೆ. ಹಾಗಾದರೆ ಕೆಆರ್​ಎಸ್​ ಆಲಮಟ್ಟಿ, ಭದ್ರಾ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ರಾಜ್ಯದ 12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಮೇ 18 ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 25.88 23.84 0 4548
ತುಂಗಭದ್ರಾ ಜಲಾಶಯ (Tungabhadra Dam) 497.71 105.79 3.40 3.72 0 45
ಮಲಪ್ರಭಾ ಜಲಾಶಯ (Malaprabha Dam) 633.80 37.73 7.69 9.44 0 1294
ಕೆ.ಆರ್.ಎಸ್ (KRS Dam) 38.04 49.45 10.90 13.76 1560 155
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 16.42 23.19 0 1628
ಕಬಿನಿ ಜಲಾಶಯ (Kabini Dam) 696.13 19.52 6.29 4.78 83 300
ಭದ್ರಾ ಜಲಾಶಯ (Bhadra Dam) 657.73 71.54 13.39 27.32 467 375
ಘಟಪ್ರಭಾ ಜಲಾಶಯ (Ghataprabha Dam) 662.91 51.00 13.11 7.91 0 3026
ಹೇಮಾವತಿ ಜಲಾಶಯ (Hemavathi Dam) 890.58 37.10 9.08 17.48 63 250
ವರಾಹಿ ಜಲಾಶಯ (Varahi Dam) 594.36 31.10 4.29 3.23 0 0
ಹಾರಂಗಿ ಜಲಾಶಯ (Harangi Dam)​​ 871.38 8.50 2.94 2.66 172 200
ಸೂಫಾ (Supa Dam) 564.00 145.33 36.79 48.30 141 1082

ಕೊಡಗು, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಹಲವು ಕಡೆ ನೀರಿಲ್ಲದೆ ಬತ್ತಿ ಹೋಗಿದ್ದ ಜೀವನದಿ ಕಾವೇರ ಮರುಜೀವ ಪಡೆದುಕೊಂಡಿದ್ದು, ನಿಧಾನವಾಗಿ ಹರಿಯಲು ಆರಂಭಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ