Karnataka Dam Water Level: ಮಾ.19ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

|

Updated on: Mar 19, 2024 | 7:09 AM

ಕರ್ನಾಟಕದ ಜಲಾಶಯಗಳ ಮಾರ್ಚ 19ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಮಾ.19ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಭದ್ರಾ ಜಲಾಶಯ
Follow us on

ಪ್ರಸ್ತುತ ಹವಾಮಾನ ಪರಿಸ್ಥಿತಿಗಳ ಅನ್ವಯ, 2024ರ 21ನೇ ಮಾರ್ಚ್ ರಿಂದ 24ನೇ ಮಾರ್ಚ್ ಅವಧಿಯಲ್ಲಿ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಕೆಆರ್​ಎಸ್​ ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಭದ್ರಾ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ 12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಮಾರ್ಚ್ ​19 ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 42.16 43.71 34 1804
ತುಂಗಭದ್ರಾ ಜಲಾಶಯ (Tungabhadra Dam) 497.71 105.79 5.85 16.28 0 925
ಮಲಪ್ರಭಾ ಜಲಾಶಯ (Malaprabha Dam) 633.80 37.73 10.93 12.88 0 194
ಕೆ.ಆರ್.ಎಸ್ (KRS Dam) 38.04 49.45 14.54 25.05 134 749
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 33.77 56.25 83 3356
ಕಬಿನಿ ಜಲಾಶಯ (Kabini Dam) 696.13 19.52 10.39 07.99 64 500
ಭದ್ರಾ ಜಲಾಶಯ (Bhadra Dam) 657.73 71.54 24.67 45.38 165 628
ಘಟಪ್ರಭಾ ಜಲಾಶಯ (Ghataprabha Dam) 662.91 51.00 25.97 16.39 0 99
ಹೇಮಾವತಿ ಜಲಾಶಯ (Hemavathi Dam) 890.58 37.10 11.96 20.58 40 2010
ವರಾಹಿ ಜಲಾಶಯ (Varahi Dam) 594.36 31.10 6.93 7.77 0 0
ಹಾರಂಗಿ ಜಲಾಶಯ (Harangi Dam)​​ 871.38 8.50 3.32 3.19 195 200
ಸೂಫಾ (Supa Dam) 564.00 145.33 53.15 70.68 0 649

ರಾಯಚೂರು ಜಿಲ್ಲೆಯ ಹಡಗನಹಾಳ್ ಹೋಬಳಿಯಲ್ಲಿ ಮಾರ್ಚ್​​ 18 ರಂದು ಅತ್ಯಧಿಕ 42.9 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದೆ. ರಾಯಚೂರು, ಬೀದರ್, ಬಳ್ಳಾರಿ ಮತ್ತು ಕಲಬುರಗಿ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಸೋಮವಾರ 40 ಡಿಗ್ರಿ ಸೆಲ್ಸಿಯಸ್​​ ನಿಂದ 42.9 ಡಿಗ್ರಿ ಸೆಲ್ಸಿಯಸ್​ ನಡುವೆ ಗರಿಷ್ಠ ತಾಪಮಾನ ದಾಖಲಾಗಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯವಾಗಿದೆ.

ಮುಂದಿನ 48 ಗಂಟೆಗಳ ತಾಪಮಾನದ ಮುನ್ಸೂಚನೆ: ಕರ್ನಾಟಕದ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗರಿಷ್ಠ ತಾಪಮಾನವು ವಾಡಿಕೆಗಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ