Karnataka Dam Water Level: ಫೆ.08ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಕರ್ನಾಟಕದ ಜಲಾಶಯಗಳ ಫೆಬ್ರವರಿ 08ರ ನೀರಿನ ಮಟ್ಟ: ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಬೆಂಗಳೂರು, ಫೆ.08: ಬೇಸಿಗೆಗೂ ಮುನ್ನ ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದೆ. ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಸೆಕೆ ವಿಪರೀತವೆನಿಸಿದೆ. ಇದರಿಂದ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಕುಸಿಯುತ್ತಿದೆ. ಈಗಾಗಲೇ ಬೆಂಗಳೂರು ಸೇರಿದಂತೆ ಕೆಲ ಕಡೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಇನ್ನು ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ 12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಫೆಬ್ರವರಿ 08 ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಜಲಾಶಯಗಳ ನೀರಿನ ಮಟ್ಟ | ||||||
ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
ಆಲಮಟ್ಟಿ ಜಲಾಶಯ (Almatti Dam) | 519.60 | 123.08 | 51.41 | 69.16 | 0 | 1344 |
ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 9.51 | 46.27 | 0 | 359 |
ಮಲಪ್ರಭಾ ಜಲಾಶಯ (Malaprabha Dam) | 633.80 | 37.73 | 12.83 | 19.06 | 0 | 194 |
ಕೆ.ಆರ್.ಎಸ್ (KRS Dam) | 38.04 | 49.45 | 17.03 | 34.61 | 405 | 607 |
ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 45.87 | 80.76 | 494 | 3585 |
ಕಬಿನಿ ಜಲಾಶಯ (Kabini Dam) | 696.13 | 19.52 | 12.72 | 12.25 | 125 | 900 |
ಭದ್ರಾ ಜಲಾಶಯ (Bhadra Dam) | 657.73 | 71.54 | 31.84 | 57.49 | 175 | 2300 |
ಘಟಪ್ರಭಾ ಜಲಾಶಯ (Ghataprabha Dam) | 662.91 | 51.00 | 33.64 | 27.93 | 0 | 126 |
ಹೇಮಾವತಿ ಜಲಾಶಯ (Hemavathi Dam) | 890.58 | 37.10 | 14.75 | 22.21 | 93 | 500 |
ವರಾಹಿ ಜಲಾಶಯ (Varahi Dam) | 594.36 | 31.10 | 08.88 | 12.21 | 0 | 760 |
ಹಾರಂಗಿ ಜಲಾಶಯ (Harangi Dam) | 871.38 | 8.50 | 3.42 | 3.29 | 207 | 200 |
ಸೂಫಾ (Supa Dam) | 564.00 | 145.33 | 63.47 | 81.99 | 70 | 3956 |
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ