Karnataka Dam Water Level: ಆ.19ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಆಗಸ್ಟ್ 19ರ ನೀರಿನ ಮಟ್ಟ: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಮಾಹಿತಿ ಇಲ್ಲಿದೆ.

Karnataka Dam Water Level: ಆ.19ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ
ಕೆಆರ್​ಎಸ್​ ಜಲಾಶಯ
Follow us
ವಿವೇಕ ಬಿರಾದಾರ
|

Updated on:Aug 19, 2023 | 7:53 AM

ರಾಜ್ಯದಲ್ಲಿ ಕಳೆದ ಮೂರು ವಾರಗಳಿಂದ ಮಳೆಯ ಪ್ರಮಾಣ ತಗ್ಗಿದ ಪರಿಣಾಮ ಬಿಸಿಲಿನ ಧಗೆ ಹೆಚ್ಚಾಗುತ್ತಲೇ ಇದೆ. ಅಲ್ಲದೆ ಜಲಾಶಯಗಳಲ್ಲಿ ಕೂಡ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಕುಸಿಯುತ್ತಿದೆ.  ಹಾಗಾದರೆ ಆಗಸ್ಟ್‌ 18ರ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಯಾವ ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 123.08 115.71 901 901
ತುಂಗಭದ್ರಾ ಜಲಾಶಯ (Tungabhadra Dam) 497.71 105.79 86.80 105.79 1526 10313
ಮಲಪ್ರಭಾ ಜಲಾಶಯ (Malaprabha Dam) 633.80 37.73 22.91 34.58 194 194
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 73.74 131.90 4071 6378
ಕಬಿನಿ ಜಲಾಶಯ (Kabini Dam) 696.13 19.52 16.31 19.21 1935 7325
ಭದ್ರಾ ಜಲಾಶಯ (Bhadra Dam) 657.73 71.54 49.07 68.78 771 3225
ಘಟಪ್ರಭಾ ಜಲಾಶಯ (Ghataprabha Dam) 662.91 51.00 43.63 49.93 2776 3946
ಹೇಮಾವತಿ ಜಲಾಶಯ (Hemavathi Dam) 890.58 37.10 29.84 36.96 1891 6755
ವರಾಹಿ ಜಲಾಶಯ (Varahi Dam) 594.36 31.10 10.81 19.93 586 1316
ಹಾರಂಗಿ ಜಲಾಶಯ (Harangi Dam)​​ 871.38 8.50 8.26 7.62 1195 1750
ಸೂಫಾ (Supa Dam) 564.00 145.33 79.84 86.00 2277 4751
ಕೆ.ಆರ್.ಎಸ್ (KRS Dam) 38.04 49.45 30.59 47.63 2219 15611

ಮಹಾರಾಷ್ಟ್ರದ ಪಶ್ಚಿಮಘಟದಲ್ಲಿ ಭಾರಿ ಮಳೆಯಾದ ಹಿನ್ನಲೆಯಲ್ಲಿ ಕೃಷ್ಣಾ ನದಿಗೆ ಒಳಹರಿವು ಹೆಚ್ಚಾಗಿತ್ತು. ಈ ಹಿನ್ನೆಲೆ ಆಲಮಟ್ಟಿ ಜಲಾಶಯ ಭರ್ತಿಯಾಗಿದೆ. ಹಾಗೇ ಮಲಪ್ರಭಾ, ಘಟಪ್ರಭಾ ಜಲಾಶಯಗಳು ಬಹುತೇಕ ಭರ್ತಿಯಾಗಿದ್ದು, ಉತ್ತರ ಕರ್ನಾಟಕದ ಭಾಗದ ಜನರಲ್ಲಿ ಸಂತಸ ಮೂಡಿದೆ. ಇನ್ನೂ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ 15 ದಿನಗಳ ಹಿಂದೆಯಷ್ಟೆ ಭರ್ತಿಯಾಗಿತ್ತು. ಜಲಾಶಯ ಭರ್ತಿಯಾದಾಗ ಮುಖ್ಯಮಂತ್ರಿಗಳು  ಬಾಗಿನ ಅರ್ಪಿಸುತ್ತಿದ್ದರು. 84 ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 78.50 ಅಡಿಯಷ್ಟು ನೀರಿದೆ. ತಮಿಳುನಾಡಿಗೆ ನೀರು ಹರಿಸುತ್ತಿರುವುದರಿಂದ 5.5 ಅಡಿಯಷ್ಟು ನೀರು ಖಾಲಿಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:40 am, Sat, 19 August 23