ರಾಜ್ಯದಲ್ಲಿ ಕಳೆದ ಮೂರು ವಾರಗಳಿಂದ ಮಳೆಯ ಪ್ರಮಾಣ ತಗ್ಗಿದ ಪರಿಣಾಮ ಬಿಸಿಲಿನ ಧಗೆ ಹೆಚ್ಚಾಗುತ್ತಲೇ ಇದೆ. ಅಲ್ಲದೆ ಜಲಾಶಯಗಳಲ್ಲಿ ಕೂಡ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಹಾಗಾದರೆ ಆಗಸ್ಟ್ 18ರ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಯಾವ ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಜಲಾಶಯಗಳ ನೀರಿನ ಮಟ್ಟ | ||||||
ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
ಆಲಮಟ್ಟಿ ಜಲಾಶಯ (Almatti Dam) | 519.60 | 123.08 | 123.08 | 115.71 | 901 | 901 |
ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 86.80 | 105.79 | 1526 | 10313 |
ಮಲಪ್ರಭಾ ಜಲಾಶಯ (Malaprabha Dam) | 633.80 | 37.73 | 22.91 | 34.58 | 194 | 194 |
ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 73.74 | 131.90 | 4071 | 6378 |
ಕಬಿನಿ ಜಲಾಶಯ (Kabini Dam) | 696.13 | 19.52 | 16.31 | 19.21 | 1935 | 7325 |
ಭದ್ರಾ ಜಲಾಶಯ (Bhadra Dam) | 657.73 | 71.54 | 49.07 | 68.78 | 771 | 3225 |
ಘಟಪ್ರಭಾ ಜಲಾಶಯ (Ghataprabha Dam) | 662.91 | 51.00 | 43.63 | 49.93 | 2776 | 3946 |
ಹೇಮಾವತಿ ಜಲಾಶಯ (Hemavathi Dam) | 890.58 | 37.10 | 29.84 | 36.96 | 1891 | 6755 |
ವರಾಹಿ ಜಲಾಶಯ (Varahi Dam) | 594.36 | 31.10 | 10.81 | 19.93 | 586 | 1316 |
ಹಾರಂಗಿ ಜಲಾಶಯ (Harangi Dam) | 871.38 | 8.50 | 8.26 | 7.62 | 1195 | 1750 |
ಸೂಫಾ (Supa Dam) | 564.00 | 145.33 | 79.84 | 86.00 | 2277 | 4751 |
ಕೆ.ಆರ್.ಎಸ್ (KRS Dam) | 38.04 | 49.45 | 30.59 | 47.63 | 2219 | 15611 |
ಮಹಾರಾಷ್ಟ್ರದ ಪಶ್ಚಿಮಘಟದಲ್ಲಿ ಭಾರಿ ಮಳೆಯಾದ ಹಿನ್ನಲೆಯಲ್ಲಿ ಕೃಷ್ಣಾ ನದಿಗೆ ಒಳಹರಿವು ಹೆಚ್ಚಾಗಿತ್ತು. ಈ ಹಿನ್ನೆಲೆ ಆಲಮಟ್ಟಿ ಜಲಾಶಯ ಭರ್ತಿಯಾಗಿದೆ. ಹಾಗೇ ಮಲಪ್ರಭಾ, ಘಟಪ್ರಭಾ ಜಲಾಶಯಗಳು ಬಹುತೇಕ ಭರ್ತಿಯಾಗಿದ್ದು, ಉತ್ತರ ಕರ್ನಾಟಕದ ಭಾಗದ ಜನರಲ್ಲಿ ಸಂತಸ ಮೂಡಿದೆ. ಇನ್ನೂ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ 15 ದಿನಗಳ ಹಿಂದೆಯಷ್ಟೆ ಭರ್ತಿಯಾಗಿತ್ತು. ಜಲಾಶಯ ಭರ್ತಿಯಾದಾಗ ಮುಖ್ಯಮಂತ್ರಿಗಳು ಬಾಗಿನ ಅರ್ಪಿಸುತ್ತಿದ್ದರು. 84 ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 78.50 ಅಡಿಯಷ್ಟು ನೀರಿದೆ. ತಮಿಳುನಾಡಿಗೆ ನೀರು ಹರಿಸುತ್ತಿರುವುದರಿಂದ 5.5 ಅಡಿಯಷ್ಟು ನೀರು ಖಾಲಿಯಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:40 am, Sat, 19 August 23