AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಕಬಿನಿ, ಹೇಮಾವತಿ ಜಲಾಶಯಗಳು ಖಾಲಿ ಖಾಲಿ!

ಕಾವೇರಿ ಕೊಳ್ಳದ ಕಬಿನಿ, ಕೆಆರ್‌ಎಸ್ ಹಾಗೂ ಹೇಮಾವತಿ ಜಲಾಶಯಗಳಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ನೀರಿನ ಸಂಗ್ರಹ ಮತ್ತು ಒಳಹರಿವು ಗಣನೀಯವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಮೂಡಿಸಿದೆ. ಉತ್ತರ ಕರ್ನಾಟಕದ ಆಲಮಟ್ಟಿ ಮತ್ತು ತುಂಗಭದ್ರಾ ಜಲಾಶಯಗಳ ಇಂದಿನ ಒಳಹರಿವು, ಹೊರಹರಿವು ಹಾಗೂ ಇಂದಿನ ನಿಖರ ನೀರಿನ ಸಂಗ್ರಹದ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಕಬಿನಿ, ಹೇಮಾವತಿ ಜಲಾಶಯಗಳು ಖಾಲಿ ಖಾಲಿ!
ಕಬಿನಿ ಡ್ಯಾಮ್Image Credit source: wikipedia
ಭಾವನಾ ಹೆಗಡೆ
|

Updated on:Jul 18, 2026 | 10:41 AM

Share

ಮುಖ್ಯಾಂಶಗಳು

  • ಕಾವೇರಿ ಕೊಳ್ಳದ ಜಲಾಶಯಗಳ ನೀರಿನ ಮಟ್ಟ ಕಳೆದ ವರ್ಷಕ್ಕಿಂತ ಗಣನೀಯವಾಗಿ ಕುಸಿದಿದೆ.
  • ಕಬಿನಿ ಒಳಹರಿವು ಕಳೆದ ವರ್ಷಕ್ಕಿಂತ ತೀವ್ರವಾಗಿ ಇಳಿಕೆ ಕಂಡು ಆತಂಕ ಮೂಡಿಸಿದೆ.
  • ಆಲಮಟ್ಟಿ ಮತ್ತು ತುಂಗಭದ್ರಾ ಜಲಾಶಯಗಳಿಗೆ ಸಾಧಾರಣ ಒಳಹರಿವು ಮುಂದುವರಿದಿದೆ.

ಬೆಂಗಳೂರು, ಜುಲೈ 18: ರಾಜ್ಯದ ಹಲವೆಡೆ ಮುಂಗಾರು ಮಳೆಯ ಕೊರತೆ ಎದುರಾಗಿದ್ದು, ಕಬಿನಿ, ಹೇಮಾವತಿ ಸೇರಿದಂತೆ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಕಳೆದ ವರ್ಷದಷ್ಟು ಏರಿಕೆ ಕಾಣುತ್ತಿಲ್ಲ. ಬೆಂಗಳೂರಿಗೆ ನೀರು ಪೂರೈಸುವ ಪ್ರಮುಖ ಡ್ಯಾಂ ಕೆಆರ್​​ಎಸ್​ಗೂ ಸಹ ಒಳಹರಿವು ಇಳಿಕೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

1. ಕಬಿನಿ ಜಲಾಶಯ (ಮೈಸೂರು)

ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ನೀರಿನ ಮಟ್ಟ ಗಣನೀಯವಾಗಿ ಕುಸಿದಿದೆ. ಕಳೆದ 24 ಗಂಟೆಗಳಲ್ಲಿ ಜಲಾಶಯದ ಕಾವಲು ಪ್ರದೇಶದಲ್ಲಿ 10 ಮಿ.ಮೀ. ಮಳೆ ದಾಖಲಾಗಿದೆ.

  • ಇಂದಿನ ನೀರಿನ ಮಟ್ಟ: 71.16 ಅಡಿ (ಕಳೆದ ವರ್ಷ ಇದೇ ದಿನ: 81.51 ಅಡಿ)
  • ಇಂದಿನ ನೀರಿನ ಸಂಗ್ರಹ: 12.25 ಟಿಎಂಸಿ (ಕಳೆದ ವರ್ಷ: 18.55 ಟಿಎಂಸಿ)
  • ಒಳಹರಿವು: 1,354 ಕ್ಯೂಸೆಕ್ (ಕಳೆದ ವರ್ಷ: 24,180 ಕ್ಯೂಸೆಕ್)
  • ಹೊರಹರಿವು: 500 ಕ್ಯೂಸೆಕ್ (ಕಳೆದ ವರ್ಷ: 17,292 ಕ್ಯೂಸೆಕ್)

2. ಹೇಮಾವತಿ ಜಲಾಶಯ (ಹಾಸನ)

ಹಾಸನ ತಾಲ್ಲೂಕಿನ ಗೊರೂರು ಸಮೀಪದ ಹೇಮಾವತಿ ಜಲಾಶಯದಲ್ಲೂ ಕಳೆದ ವರ್ಷಕ್ಕಿಂತ ಕಡಿಮೆ ನೀರಿದೆ.

  • ಗರಿಷ್ಠ ಮಟ್ಟ: 2922 ಅಡಿ (ಸಾಮರ್ಥ್ಯ: 37 ಟಿಎಂಸಿ)
  • ಇಂದಿನ ನೀರಿನ ಮಟ್ಟ: 2904.04 ಅಡಿ
  • ಇಂದಿನ ನೀರಿನ ಸಂಗ್ರಹ: 22.402 ಟಿಎಂಸಿ (ಕಳೆದ ವರ್ಷ ಇದೇ ದಿನ: 2920.97 ಅಡಿ, 36.108 ಟಿಎಂಸಿ)
  • ಒಳಹರಿವು: 1,387 ಕ್ಯೂಸೆಕ್ (ಕಳೆದ ವರ್ಷ: 9,491 ಕ್ಯೂಸೆಕ್)
  • ಹೊರಹರಿವು: 300 ಕ್ಯೂಸೆಕ್ (ಕಳೆದ ವರ್ಷ: 6,200 ಕ್ಯೂಸೆಕ್)

3. ಕೆ.ಆರ್.ಎಸ್ ಜಲಾಶಯ (ಮಂಡ್ಯ)

ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಕೃಷ್ಣರಾಜಸಾಗರ (KRS) ಜಲಾಶಯದ ಇಂದಿನ ಮಟ್ಟ ಹೀಗಿದೆ:

  • ಗರಿಷ್ಠ ಮಟ್ಟ: 124.80 ಅಡಿ (ಸಾಮರ್ಥ್ಯ: 49.452 ಟಿಎಂಸಿ)
  • ಇಂದಿನ ನೀರಿನ ಮಟ್ಟ: 92.88 ಅಡಿ
  • ಇಂದಿನ ನೀರಿನ ಸಂಗ್ರಹ: 17.727 ಟಿಎಂಸಿ
  • ಒಳಹರಿವು: 1,144 ಕ್ಯೂಸೆಕ್
  • ಹೊರಹರಿವು: 1,344 ಕ್ಯೂಸೆಕ್

4. ಆಲಮಟ್ಟಿ ಜಲಾಶಯ (ವಿಜಯಪುರ)

ವಿಜಯಪುರ ಜಿಲ್ಲೆಯ ನಿಡಗುಂದಿ ತಾಲ್ಲೂಕಿನ ಆಲಮಟ್ಟಿ ಬಳಿ ಕೃಷ್ಣಾ ನದಿಗೆ ನಿರ್ಮಿಸಲಾಗಿರುವ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರದಲ್ಲಿ ಒಳಹರಿವು ಸಾಧಾರಣವಾಗಿದೆ.

  • ಗರಿಷ್ಠ ಮಟ್ಟ: 519.60 ಮೀಟರ್
  • ಇಂದಿನ ನೀರಿನ ಮಟ್ಟ: 517.42 ಮೀಟರ್
  • ಒಳಹರಿವು: 6,091 ಕ್ಯೂಸೆಕ್
  • ಹೊರಹರಿವು: 3,012 ಕ್ಯೂಸೆಕ್

5. ತುಂಗಭದ್ರಾ ಜಲಾಶಯ (ಹೊಸಪೇಟೆ)

ಹೊಸಪೇಟೆಯ ತುಂಗಭದ್ರಾ ಜಲಾಶಯದ ಇಂದಿನ ನಿಖರ ಮಾಹಿತಿ ಇಲ್ಲಿದೆ:

  • ಗರಿಷ್ಠ ಮಟ್ಟ (F.R.L): 1633.00 ಅಡಿ (ಸಾಮರ್ಥ್ಯ: 105.788 ಟಿಎಂಸಿ)
  • ಇಂದಿನ ನೀರಿನ ಮಟ್ಟ: 1603.37 ಅಡಿ
  • ಇಂದಿನ ನೀರಿನ ಸಂಗ್ರಹ: 26.199 ಟಿಎಂಸಿ
  • ಲೈವ್ ಒಳಹರಿವು: 2,850 ಕ್ಯೂಸೆಕ್ (ಕಳೆದ 24 ಗಂಟೆಗಳ ಸರಾಸರಿ ಒಳಹರಿವು: 3,212 ಕ್ಯೂಸೆಕ್)
  • ಹೊರಹರಿವು: ಕಾಲುವೆಗಳಿಗೆ 2,166 ಕ್ಯೂಸೆಕ್ ನೀರು ಬಿಡಲಾಗುತ್ತಿದ್ದು, ನದಿಗೆ ಸದ್ಯ ಶೂನ್ಯ (0) ಹೊರಹರಿವು ಇದೆ.

ಪ್ರಮುಖ ಜಲಾಶಯಗಳಾದ ಕಬಿನಿ ಮತ್ತು ಹೇಮಾವತಿಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಒಳಹರಿವು ತೀವ್ರವಾಗಿ ಕುಸಿದಿರುವುದು ಆತಂಕ ಮೂಡಿಸಿದೆ. ಮುಂಗಾರು ಮಳೆ ಚುರುಕುಗೊಂಡರೆ ಮಾತ್ರ ಜಲಾಶಯಗಳಿಗೆ ಹೆಚ್ಚಿನ ನೀರು ಹರಿದುಬರಲಿದ್ದು, ರೈತರು ಮಳೆಯ ನಿರೀಕ್ಷೆಯಲ್ಲಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:09 am, Sat, 18 July 26

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ