Karnataka Dam Water Level: ಎಲ್ಲೆಡೆ ಭಾರೀ ಮಳೆ, ಜು.27ರ ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಜುಲೈ 27ರ ನೀರಿನ ಮಟ್ಟ: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಮಾಹಿತಿ ಇಲ್ಲಿದೆ.

Karnataka Dam Water Level: ಎಲ್ಲೆಡೆ ಭಾರೀ ಮಳೆ, ಜು.27ರ ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ
ತುಂಬಿ ಹರಿಯುತ್ತಿರುವ ಕಾರಂಜಾ ಡ್ಯಾಂ
Follow us
ಆಯೇಷಾ ಬಾನು
| Updated By: ವಿವೇಕ ಬಿರಾದಾರ

Updated on:Jul 29, 2023 | 6:42 AM

ತಡವಾದರೂ ರಾಜ್ಯದಲ್ಲಿ ಮುಂಗಾರು(Monsoon) ಮಳೆ ಚುರುಕುಗೊಂಡಿದೆ. ಭರ್ಜರಿ ಮಳೆಯಿಂದಾಗಿ ರಾಜ್ಯದ ಬಹುತೇಕ ಡ್ಯಾಂಗಳು ತುಂಬಿ ಹರಿಯುತ್ತಿವೆ. ಕೆಲವು ಕಡೆ ಪ್ರವಾಹ ಭೀತಿ ಎದುರಾಗಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳ ಜೀವನಾಡಿ ಆಗಿರುವ ಆಲಮಟ್ಟಿ ಜಲಾಶಯ(Almatti Dam) ತುಂಬಿ ಹರಿಯುತ್ತಿದ್ದು ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ಇನ್ನು ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಹಾಲಹಳ್ಳಿ ಬಳಿ ಇರುವ ಕಾರಂಜಾ ಡ್ಯಾಂ(Karanja Dam) ಬರ್ತಿಯಾಗಿದೆ. ತೆಲಂಗಾಣದಲ್ಲಿ ಸುರಿದ ಮಳೆಯಿಂದ ಡ್ಯಾಂಗೆ ಒಳಹರಿವು ಜಾಸ್ತಿಯಾಗಿದ್ದು ನೀರನ್ನ ಹರಿಬಿಡಲಾಗುತ್ತಿದೆ. ಡ್ಯಾಂಗೆ ಒಳಹರಿವು ಹೆಚ್ಚಾಗಿದ್ದರಿಂದ ಡ್ಯಾಂ ನ 6 ಗೇಟ್ ಗಳ ಪೈಕಿ 2 ಕ್ರಸ್ಟ್ ಗೇಟ್ ಗಳ ಮೂಲಕ 35 ಸಾವಿರ ಕ್ಯೂಸೆಕ್ ನೀರನ್ನ ಹರಿಬಿಡಲಾಗುತ್ತಿದೆ. ವಾರದ ಹಿಂದೆ ಬತ್ತಿ ಹೋಗಿದ್ದ ಜಲಾಶಯಗಳು ಅಪಾಯದ ಮಟ್ಟ ಮೀರಿವೆ. ವಿಜಯನಗರ, ಚಿಕ್ಕಮಗಳೂರು, ಉಡುಪಿ ಸೇರಿ 7 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗುತ್ತಿದೆ(Karnataka Rain). ಹಾಗಾದ್ರೆ ಬನ್ನಿ ಇಂದಿನ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ (Karnataka Dam Water Level) ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 82.51 102.26 138473 14690
ತುಂಗಭದ್ರಾ ಜಲಾಶಯ (Tungabhadra Dam) 497.71 105.79 40.14 104.78 98357 227
ಮಲಪ್ರಭಾ ಜಲಾಶಯ (Malaprabha Dam) 633.80 37.73 15.77 24.52 16872 194
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 58.63 91.73 68645 0
ಕಬಿನಿ ಜಲಾಶಯ (Kabini Dam) 696.13 19.52 18.16 19.39 26873 17396
ಭದ್ರಾ ಜಲಾಶಯ (Bhadra Dam) 657.73 71.54 38.65 70.28 24704 179
ಘಟಪ್ರಭಾ ಜಲಾಶಯ (Ghataprabha Dam) 662.91 51.00 26.50 36.04 33250 109
ಹೇಮಾವತಿ ಜಲಾಶಯ (Hemavathi Dam) 890.58 37.10 25.94 37.10 23281 200
ವರಾಹಿ ಜಲಾಶಯ (Varahi Dam) 594.36 31.10 9.16 14.45 6704 0
ಹಾರಂಗಿ ಜಲಾಶಯ (Harangi Dam)​​ 871.38 8.50 6.61 7.60 12861 12625
ಸೂಫಾ (Supa Dam) 564.00 145.33 64.78 66.62 44576 0

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:04 am, Thu, 27 July 23

ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ