AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಹೇಮಾವತಿಗೆ 11 ಟಿಎಂಸಿ ನೀರು ಸೇರ್ಪಡೆ, ಆಲಮಟ್ಟಿ, ತುಂಗಾ ಜಲಾಶಯಗಳು ಭರ್ತಿ!

ಬರಗಾಲದ ಭೀತಿಯ ನಡುವೆಯೂ ಹಾಸನದ ಹೇಮಾವತಿ ಜಲಾಶಯಕ್ಕೆ ಕಳೆದ ಒಂದೂವರೆ ತಿಂಗಳಲ್ಲಿ 11 ಟಿಎಂಸಿ ನೀರು ಹರಿದುಬಂದಿದ್ದು, ಜಲಾಶಯದ ಸಂಗ್ರಹ ಮಟ್ಟ ಶೇ. 65ಕ್ಕೆ ಏರಿಕೆಯಾಗಿದೆ. ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಗಾಜನೂರಿನ ತುಂಗಾ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, 22 ಗೇಟ್‌ಗಳ ಮೂಲಕ ನದಿಗೆ ನೀರು ಹರಿಸಲಾಗಿದೆ. ಜೊತೆಗೆ ಆಲಮಟ್ಟಿ ಹಾಗೂ ಕಬಿನಿ ಜಲಾಶಯಗಳಿಗೂ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ.

Karnataka Dam Water Level: ಹೇಮಾವತಿಗೆ 11 ಟಿಎಂಸಿ ನೀರು ಸೇರ್ಪಡೆ, ಆಲಮಟ್ಟಿ, ತುಂಗಾ ಜಲಾಶಯಗಳು ಭರ್ತಿ!
ತುಂಗಾ ಜಲಾಶಯ
ಭಾವನಾ ಹೆಗಡೆ
|

Updated on:Aug 01, 2026 | 10:35 AM

Share

ಮುಖ್ಯಾಂಶಗಳು

  • ಬರಗಾಲದ ನಡುವೆಯೂ ಹಾಸನದ ಹೇಮಾವತಿ ಜಲಾಶಯಕ್ಕೆ ಹರಿದುಬಂದ 11 ಟಿಎಂಸಿ ನೀರು.
  • ಧಾರಾಕಾರ ಮಳೆಯಿಂದಾಗಿ ಭರ್ತಿಯಾದ ಗಾಜನೂರಿನ ತುಂಗಾ ಜಲಾಶಯದ 22 ಗೇಟ್‌ಗಳು ಓಪನ್.
  • ಆಲಮಟ್ಟಿ ಜಲಾಶಯ ಭರ್ತಿ ಹಂತಕ್ಕೆ; ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ.

ಬೆಂಗಳೂರು, ಆಗಸ್ಟ್ 01: ಹಾಸನ ಜಿಲ್ಲೆಯಲ್ಲಿ ಬರಗಾಲದ ಭೀತಿಯ ನಡುವೆಯೂ ಕಳೆದ ಒಂದೂವರೆ ತಿಂಗಳಿನಿಂದ ಸುರಿದ ಸಾಧಾರಣ ಮಳೆಗೆ ಗೊರೂರಿನ ಹೇಮಾವತಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದುಬಂದಿದೆ. ಕಳೆದ ಒಂದೂವರೆ ತಿಂಗಳಲ್ಲಿ ಬರೋಬ್ಬರಿ 11 ಟಿಎಂಸಿ (TMC) ನೀರು ಜಲಾಶಯವನ್ನು ಸೇರಿದ್ದು, ಜೂನ್ ಆರಂಭದಲ್ಲಿದ್ದ ನೀರಿನ ಮಟ್ಟಕ್ಕೆ ಹೋಲಿಸಿದರೆ ಪ್ರಸ್ತುತ ಜಲಾಶಯದ ನೀರು 19 ಅಡಿಗಳಷ್ಟು ಏರಿಕೆಯಾಗಿದೆ.

1. ಕಬಿನಿ ಜಲಾಶಯ (ಮೈಸೂರು)

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆ ತಾಲೂಕಿನ ಕಬಿನಿ ಜಲಾಶಯಕ್ಕೆ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ.

  • ಇಂದಿನ ನೀರಿನ ಮಟ್ಟ: 80.08 ಅಡಿ (ಕಳೆದ ವರ್ಷ: 81.51 ಅಡಿ)
  • ಒಟ್ಟು ನೀರು ಸಂಗ್ರಹ: 17.09 ಟಿಎಂಸಿ (ಬಳಕೆಗೆ ಲಭ್ಯ: 7.28 ಟಿಎಂಸಿ)
  • ಒಳಹರಿವು: 11,747 ಕ್ಯೂಸೆಕ್
  • ಹೊರಹರಿವು (ನದಿಗೆ):500 ಕ್ಯೂಸೆಕ್

ಕಳೆದ 24 ಗಂಟೆಗಳಲ್ಲಿ ಕಬಿನಿ ಜಲಾಶಯ ವ್ಯಾಪ್ತಿಯಲ್ಲಿ 60 ಮಿ.ಮೀ. ಮಳೆ ದಾಖಲಾಗಿದೆ.

2. ಆಲಮಟ್ಟಿ ಜಲಾಶಯ (ವಿಜಯಪುರ)

ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನಲ್ಲಿರುವ ಕೃಷ್ಣಾ ನದಿಗೆ ನಿರ್ಮಿಸಲಾದ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರ (ಆಲಮಟ್ಟಿ) ಜಲಾಶಯ ಭರ್ತಿ ಹಂತ ತಲುಪಿದೆ.

  • ಗರಿಷ್ಠ ಮಟ್ಟ: 519.60 ಮೀಟರ್
  • ಇಂದಿನ ಮಟ್ಟ: 519.00 ಮೀಟರ್
  • ಒಳಹರಿವು: 92,500 ಕ್ಯೂಸೆಕ್
  • ಹೊರಹರಿವು: 1,11,308 ಕ್ಯೂಸೆಕ್ (ನದಿಗೆ ನೀರು ಬಿಡುಗಡೆ)

3. ತುಂಗಾ ಜಲಾಶಯ (ಶಿವಮೊಗ್ಗ – ಗಾಜನೂರು)

ಮಲೆನಾಡು ಭಾಗದಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಗಾಜನೂರಿನ ತುಂಗಾ ಡ್ಯಾಂ ಸಂಪೂರ್ಣ ಭರ್ತಿಯಾಗಿದೆ. ಡ್ಯಾಂನ 22 ಕ್ರಸ್ಟ್ ಗೇಟ್‌ಗಳನ್ನು ತೆಗೆದು 55,000 ಕ್ಯೂಸೆಕ್ ನೀರನ್ನು ತುಂಗಾ ನದಿಗೆ ಹರಿಬಿಡಲಾಗಿದೆ. ಕೃಷಿ ಚಟುವಟಿಕೆಗೆ ಮಳೆ ಕೊರತೆಯಿಂದ ಆತಂಕದಲ್ಲಿದ್ದ ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ಹಾವೇರಿ ಹಾಗೂ ಗದಗ ಜಿಲ್ಲೆಯ ರೈತರಿಗೆ ಜಲಾಶಯ ಭರ್ತಿಯಾಗಿರುವುದು ಬೃಹತ್ ನೆಮ್ಮದಿ ತಂದಿದೆ.

4. ಹೇಮಾವತಿ ಜಲಾಶಯ

ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಹೇಮಾವತಿ ಜಲಾಶಯಕ್ಕೆ 11,686 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ಜಲಾಶಯದ ನೀರಿನ ಮಟ್ಟ 2,890 ಅಡಿಯಿಂದ 2,909 ಅಡಿಗೆ ಏರಿಕೆಯಾಗಿದೆ. ಒಟ್ಟು 37 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 25.986 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಶೇ 65 ರಷ್ಟು ಭರ್ತಿಯಾಗಿದೆ. ಕಾವೇರಿ ಜಲವಿವಾದದ ನಡುವೆಯೂ ಗೊರೂರು ಜಲಾಶಯಕ್ಕೆ ನೀರು ಸಮೃದ್ಧವಾಗಿ ಹರಿದುಬರುತ್ತಿರುವುದು ಹಾಸನದ ಜನತೆ ಹಾಗೂ ರೈತರಲ್ಲಿ ಸಂತಸ ತಂದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:35 am, Sat, 1 August 26

Follow Us
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ