Karnataka Dam Water Level: ಮಾ.02ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಮಾರ್ಚ 2ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಮಾ.02ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ತುಂಗಭದ್ರಾ ಡ್ಯಾಂ
Follow us
ವಿವೇಕ ಬಿರಾದಾರ
|

Updated on:Mar 02, 2024 | 7:24 AM

ಬರಗಾಲದಿಂದ ರಾಜ್ಯದಲ್ಲಿ ಕುಡಿಯಲು, ನಿತ್ಯ ಬಳಕೆ ಮತ್ತು ಕೃಷಿಗೆ ನೀರಿಲ್ಲದೆ ಪರದಾಡುವಂತ ಪರಿಸ್ಥಿತಿ ಎದುರಾಗಿದೆ. ಈ ಬಾರಿ ಸರಿಯಾಗಿ ಮಳೆಯಾಗದ ಹಿನ್ನೆಲೆಯಲ್ಲಿ ನೀರಿನ ಮೂಲಗಳು ಬತ್ತುತ್ತಿವೆ. ಕೆಎಸ್​ಆರ್​ಎಸ್​ ಡ್ಯಾಂನಲ್ಲಿ ನೀರಿನ ಮಟ್ಟ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು, ಬೆಂಗಳೂರಿಗೆ ಜಲ ಕಂಟಕ ಶುರುವಾಗಿದೆ. ಹಾಗಾದರೆ ಕೆಆರ್​ಎಸ್​ ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಭದ್ರಾ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ 12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಮಾರ್ಚ್​ 02 ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 48.70 49.97 0 1620
ತುಂಗಭದ್ರಾ ಜಲಾಶಯ (Tungabhadra Dam) 497.71 105.79 8.65 28.69 0 979
ಮಲಪ್ರಭಾ ಜಲಾಶಯ (Malaprabha Dam) 633.80 37.73 11.66 14.68 0 194
ಕೆ.ಆರ್.ಎಸ್ (KRS Dam) 38.04 49.45 15.97 28.05 276 752
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 39.07 66.15 0 3467
ಕಬಿನಿ ಜಲಾಶಯ (Kabini Dam) 696.13 19.52 11.66 10.56 59 500
ಭದ್ರಾ ಜಲಾಶಯ (Bhadra Dam) 657.73 71.54 25.20 51.53 200 2946
ಘಟಪ್ರಭಾ ಜಲಾಶಯ (Ghataprabha Dam) 662.91 51.00 27.89 24.01 0 2794
ಹೇಮಾವತಿ ಜಲಾಶಯ (Hemavathi Dam) 890.58 37.10 13.38 21.50 64 400
ವರಾಹಿ ಜಲಾಶಯ (Varahi Dam) 594.36 31.10 7.92 09.02 0 0
ಹಾರಂಗಿ ಜಲಾಶಯ (Harangi Dam)​​ 871.38 8.50 3.38 3.25 195 200
ಸೂಫಾ (Supa Dam) 564.00 145.33 58.04 74.60 228 1961

ಮಾರ್ಚ್​ 1 ರಂದು ರಾಜ್ಯದಲ್ಲಿ ದಾಖಲಾದ ತಾಪಮಾನ

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಹೋಬಳಿ ಮತ್ತು ರಾಯಚೂರು ಜಿಲ್ಲೆಯ ಹಡಗನಾಳ ಹೋಬಳಿಯಲ್ಲಿ ರಾಜ್ಯದಲ್ಲಿಯೇ ಗರಿಷ್ಠ 39.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ರಾಯಚೂರು ಮತ್ತು ಕಲಬುರಗಿ ಜಿಲ್ಲೆಯ ಹಲವೆಡೆ, ದಕ್ಷಿಣ ಕನ್ನಡ, ಬೆಳಗಾವಿ, ಬಳ್ಳಾರಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳು ಮತ್ತು ಬಾಗಲಕೋಟೆ, ದಾವಣಗೆರೆ, ಶಿವಮೊಗ್ಗ, ಬೆಳಗಾವಿ, ಧಾರವಾಡ, ತುಮಕೂರು, ಉಡುಪಿ ಮತ್ತು ಯಾದಗಿರಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ 38° ಸೆಲ್ಸಿಯಸ್​​ನಿಂದ 39° ಸೆಲ್ಸಿಯಸ್​​ವರೆಗೆ ಗರಿಷ್ಠ ತಾಪಮಾನ ದಾಖಲಾಗಿದೆ.

ಕೆಎಸ್‌ಎನ್‌ಡಿಎಂಸಿ ಪ್ರಕಾರ  ರಾಯಚೂರು ಜಿಲ್ಲೆಯಲ್ಲಿ 10 ಸ್ಥಳಗಳು, ಕಲಬುರಗಿ ಜಿಲ್ಲೆಯಲ್ಲಿ 8 ಸ್ಥಳಗಳು, ದಕ್ಷಿಣ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ 4 ಸ್ಥಳಗಳು, ಬಳ್ಳಾರಿ ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ 3 ಸ್ಥಳಗಳು, ಬಾಗಲಕೋಟೆ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ 2 ಸ್ಥಳಗಳು, ಬೆಳಗಾವಿ, ಧಾರವಾಡ, ತುಮಕೂರು, ಉಡುಪಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ 1 ಸ್ಥಳಗಳಲ್ಲಿ ರಾಜ್ಯದಲ್ಲಿ 37.5° ಸೆಲ್ಸಿಯಸ್​ಗಿಂತ ಹೆಚ್ಚಿನ ತಾಪಮಾನ ದಾಖಲಾಗಿದೆ.

ಶುಕ್ರವಾರ ಕರಾವಳಿ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ (1.6 ° C ನಿಂದ 3.0 ° C) ಮತ್ತು ರಾಜ್ಯದ ಉಳಿದ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿತ್ತು.

ಮುಂದಿನ 48 ಗಂಟೆಗೆ ತಾಪಮಾನ ಮುನ್ಸೂಚನೆ: ರಾಜ್ಯದ ಕೆಲವು ಸ್ಥಳಗಳಲ್ಲಿ ಗರಿಷ್ಠ ತಾಪಮಾನವು 2 ರಿಂದ 3° ಸೆಲ್ಸಿಯಸ್​​ ಹೆಚ್ಚಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:24 am, Sat, 2 March 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ