AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಕೆಆರ್​ಎಸ್, ಕಬಿನಿ, ಆಲಮಟ್ಟಿ ಡ್ಯಾಂ ಒಳಹರಿವು ಹೆಚ್ಚಳ, ಕರ್ನಾಟಕದ ಜಲಾಶಯಗಳ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದಲ್ಲಿ ಅವಧಿಪೂರ್ವ ಮುಂಗಾರು ಮಳೆಯಿಂದಾಗಿ ಕೆಆರ್‌ಎಸ್, ಕಬಿನಿ, ಆಲಮಟ್ಟಿ, ತುಂಗಭದ್ರಾ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಹೆಚ್ಚಾಗಿದೆ. ಮೇ ತಿಂಗಳಲ್ಲೇ ಜಲಾಶಯಗಳು ತುಂಬುತ್ತಿರುವುದು ರೈತರಿಗೆ ಸಂತಸ ತಂದಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಿದೆ. ರಾಜ್ಯದ ಜಲಾಶಯಗಳ ನೀರಿನ ಮಟ್ಟ, ಒಳಹರಿವಿನ ವಿವರ ಇಲ್ಲಿದೆ.

Karnataka Dam Water Level: ಕೆಆರ್​ಎಸ್, ಕಬಿನಿ, ಆಲಮಟ್ಟಿ ಡ್ಯಾಂ ಒಳಹರಿವು ಹೆಚ್ಚಳ, ಕರ್ನಾಟಕದ ಜಲಾಶಯಗಳ ಮಟ್ಟದ ವಿವರ ಇಲ್ಲಿದೆ
ಕೊಪ್ಪಳದ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ ಒಳಹರಿವು
ದಿಲೀಪ್​, ಚೌಡಹಳ್ಳಿ
| Updated By: Ganapathi Sharma|

Updated on: May 27, 2025 | 11:15 AM

Share

ಬೆಂಗಳೂರು, ಮೇ 27: ಅವಧಿಗೂ ಮುನ್ನವೇ ಮುಂಗಾರು ಮಳೆ (Monsoonಕರ್ನಾಟಕಕ್ಕೆ ಕಾಲಿಟ್ಟಿದ್ದು, ರಾಜ್ಯದಾದ್ಯಂತ ಹೆಚ್ಚಿನ ಕಡೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಪರಿಣಾಮವಾಗಿ ಕೆಆರ್​ಎಸ್ (KRS Dam), ಕಬಿನಿ, ಆಲಮಟ್ಟಿ (Lal Bahadur Shastri Dam), ತುಂಗಭದ್ರಾ ಜಲಾಶಯಗಳ ಒಳಹರಿವು ಹೆಚ್ಚಾಗಿದೆ. ಮಾಮೂಲಿಯಾಗಿ ಜೂನ್ ತಿಂಗಳಲ್ಲಿ ಏರಿಕೆಯಾಗುತ್ತಿದ್ದ ಜಲಾಶಯಗಳ ಮಟ್ಟ ಮೇ ಕೊನೆಯ ವಾರದಲ್ಲೇ ಹೆಚ್ಚಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂಗೆ 19 ಸಾವಿರ ಕ್ಯೂಸೆಕ್​ ನೀರು ಒಳಹರಿದಿದೆ. ಸೋಮವಾರ ಬೆಳಗ್ಗೆ ಕೆಆರ್​ಎಸ್​ ಡ್ಯಾಂನ ನೀರಿನ ಮಟ್ಟ 89 ಅಡಿ ಇತ್ತು. ಮಂಗಳವಾರ ಬೆಳಗ್ಗೆ 92 ಅಡಿಗೆ ತಲುಪಿದೆ.

ಕೆಆರ್​ಎಸ್​ ಜಲಾಶಯ 124.80 ಅಡಿ‌ ಗರಿಷ್ಠ ಮಟ್ಟ ಹೊಂದಿದೆ.ಕೇವಲ 24 ಗಂಟೆಯಲ್ಲೇ ಡ್ಯಾಂನಲ್ಲಿ 2 ಟಿಎಂಸಿ ನೀರು ಸಂಗ್ರಹವಾಗಿದೆ.

Krs Dam

ಕೆಆರ್​ಎಸ್ ಜಲಾಶಯ

ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಕಾರಣ ಮೈಸೂರು ಜಿಲ್ಲೆ ಹೆಚ್​ಡಿ ಕೋಟೆ ತಾಲೂಕಿನ ಬೀಚನಹಳ್ಳಿ ಬಳಿಯ ಕಬಿನಿ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ದಿಢೀರ್ ಹೆಚ್ಚಳವಾಗಿದೆ. ಕಬಿನಿ ಜಲಾಶಯಕ್ಕೆ 21,946 ಕ್ಯೂಸೆಕ್ ನೀರು ಒಳಹರಿವು ಉಂಟಾಗಿದೆ. ಕಬಿನಿ ಜಲಾಶಯದ ಗರಿಷ್ಠ ನೀರಿನ ಮಟ್ಟ 84 ಅಡಿ ಆಗಿದ್ದು, ಈಗ 67.75 ಅಡಿ ನೀರು ಸಂಗ್ರಹವಾಗಿದೆ.

ಇದನ್ನೂ ಓದಿ
Image
ಅವೈಜ್ಞಾನಿಕವಾಗಿ ಸವಾರರನ್ನು ತಡೆಯಬೇಡಿ: ಪೊಲೀಸರಿಗೆ ಪರಮೇಶ್ವರ್ ಎಚ್ಚರಿಕೆ
Image
ಇಂದು ಕರ್ನಾಟಕದ ಕರಾವಳಿ, ಕೊಡಗು, ಶಿವಮೊಗ್ಗ ಸೇರಿ ಹಲವೆಡೆ ಭಾರಿ ಮಳೆ
Image
ಭೂಕುಸಿತ ಭೀತಿ: ಉತ್ತರ ಕನ್ನಡದಲ್ಲಿ ಹೆದ್ದಾರಿಯ 19 ಕಡೆ ವಾಹನ ನಿಲುಗಡೆ ಬಂದ್
Image
ವಾಡಿಕೆಗಿಂತ ಮೊದಲೇ ಮುಂಗಾರು ಆಗಮನ, ಕರ್ನಾಟಕ, ಕೇರಳದಲ್ಲಿ ಭಾರಿ ಮಳೆ

ಆಲಮಟ್ಟಿ ಡ್ಯಾಂಗೆ 48,807 ಕ್ಯೂಸೆಕ್ ಒಳ ಹರಿವು

ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿಯ ಲಾಲ್ ಬಹಾದ್ದೂರ್ ಶಾಸ್ತ್ರೀ ಸಾಗರ ಡ್ಯಾಂಗೆ ಒಳ ಹರಿವು ಮುಂದುವರೆದಿದ್ದು, ಒಂದೇ ದಿನ 48,807 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ಡ್ಯಾಂನಿಂದ 555 ಕ್ಯೂಸೆಕ್ ಹೊರ ಹರಿವು ಇದೆ. 519.60 ಮೀಟರ್ ಎತ್ತರದ ಡ್ಯಾಂನಲ್ಲಿ 511.160 ಮೀಟರ್ ನೀರು ಸಂಗ್ರಹವಾಗಿದೆ. ಇದು 1230 ಟಿಎಂಸಿ ನೀರು ಸಂಗ್ರಹಣ ಸಾಮರ್ಥ್ಯದ ಡ್ಯಾಂ ಆಗಿದ್ದು, ಸದ್ಯ 35.954 ಟಿಎಂಸಿ ನೀರು ಸಂಗ್ರಹವಾಗಿದೆ.

ಮೇ ತಿಂಗಳಲ್ಲಿಯೇ ತುಂಗಭದ್ರಾ ಜಲಾಶಯಕ್ಕೆ ಜೀವಕಳೆ

ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾದ ಕಾರಣ ಮೇ ತಿಂಗಳಲ್ಲಿಯೇ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯಕ್ಕೆ ಜೀವಕಳೆ ಬಂದಿದೆ.ಜಲಾಶಯದಲ್ಲಿ ಸದ್ಯ 12 ಟಿಎಂಸಿ ನೀರು ಸಂಗ್ರಹವಾಗಿದೆ. ದಿನಕ್ಕೆ ಸುಮಾರು 20 ಸಾವಿರ ಕ್ಯೂಸೆಕ್ ನೀರು ಒಳಹರಿವು ಇದೆ. ಕಳೆದ ವರ್ಷ ಮೇ ತಿಂಗಳಲ್ಲಿ ಜಲಾಶಯ ಖಾಲಿ ಖಾಲಿ ಇದ್ದುದು ಈ ವರ್ಷ ನೀರಿನಿಂದ ಕಂಗೊಳಿಸುತ್ತಿದೆ. 12 ಟಿಎಂ ಸಿ ನೀರು ಸಂಗ್ರಹದಿಂದ ಕೊಪ್ಪಳ ,ಬಳ್ಳಾರಿ,ವಿಜಯನಗರ, ರಾಯಚೂರು ಜಿಲ್ಲೆಯ ರೈತರು ಖುಷಿಯಾಗಿದ್ದಾರೆ.

ಇದನ್ನೂ ಓದಿ: ಭಾರಿ ಮಳೆ ಕಾರಣ ಮೇ ತಿಂಗಳಲ್ಲೇ ಆಲಮಟ್ಟಿ ಡ್ಯಾಂಗೆ 52,650 ಕ್ಯೂಸೆಕ್ ಒಳ ಹರಿವು: ಸಂಭ್ರಮದಲ್ಲಿ ರೈತರು

ಮಹಾರಾಷ್ಟ್ರದಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನಲೆ ಬಾಗಲಕೋಟೆಯ ಚಿಕ್ಕಪಡಸಲಗಿ ಗ್ರಾಮದ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಚಿಕ್ಕಪಡಸಲಗಿ ಶ್ರಮಬಿಂದು ಸಾಗರ ಬ್ಯಾರೇಜ್​ನಲ್ಲಿಯೂ ಒಳಹರಿವು ಹೆಚ್ಚಾಗಿದೆ. ಮೇ ತಿಂಗಳ ಆರಂಭದಲ್ಲಿ ಬತ್ತಿ ಬರಿದಾಗಿದ್ದ ಬ್ಯಾರೇಜ್, ತಿಂಗಳ ಅಂತ್ಯಕ್ಕೆ ಭರ್ತಿ ಆಗುತ್ತಿದೆ. 4 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಬ್ಯಾರೇಜ್ ಇದಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!