AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪರೇಷನ್ ಸಿಂಧೂರ್​​ ಬೆನ್ನಲ್ಲೇ ಕರ್ನಾಟದ ಡ್ಯಾಂಗಳಲ್ಲಿ ಹೈ ಅಲರ್ಟ್: ಬಿಗಿ ಭದ್ರತೆ

ಪಾಕಿಸ್ತಾನದ ಉಗ್ರರ ಮೇಲಿನ ವೈಮಾನಿಕ ದಾಳಿಯ ಹಿನ್ನೆಲೆಯಲ್ಲಿ ದೇಶದ ಡ್ಯಾಂಗಳಲ್ಲಿ ಭದ್ರತೆಗೆ ಸೂಚನೆ ನೀಡಲಾಗಿದೆ. ಹೀಗಾಗಿ ಕರ್ನಾಟಕದ ಅಣೆಕಟ್ಟುಗಳಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ಆಲಮಟ್ಟಿ ಮತ್ತು ಹೇಮಾವತಿ ಅಣೆಕಟ್ಟುಗಳಲ್ಲಿ ಕೈಗಾರಿಕಾ ಭದ್ರತಾ ಪಡೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ, ವಾಹನ ತಪಾಸಣೆ, ಸಿಸಿಟಿವಿ ಕಣ್ಗಾವಲು ಇರಲಿದೆ.

ಆಪರೇಷನ್ ಸಿಂಧೂರ್​​ ಬೆನ್ನಲ್ಲೇ ಕರ್ನಾಟದ ಡ್ಯಾಂಗಳಲ್ಲಿ ಹೈ ಅಲರ್ಟ್: ಬಿಗಿ ಭದ್ರತೆ
ಹೇಮಾವತಿ, ಆಲಮಟ್ಟಿ ಡ್ಯಾಂ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: May 08, 2025 | 2:53 PM

Share

ಬೆಂಗಳೂರು, ಮೇ 08: ಪಾಕ್ ಬೆಂಗಲಿತ ಉಗ್ರರು ಜಮ್ಮು ಕಾಶ್ಮೀರದ ಪೆಹೆಲ್ಗಾಮ್​ನಲ್ಲಿ 26 ಪ್ರವಾಸಿಗರನ್ನು ಹತ್ಯೆ ಮಾಡಿದ್ದಕ್ಕೆ ದೇಶದ ಸೇನೆ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ವೈಮಾನಿಕ ದಾಳಿ ಮಾಡಿ ಪ್ರತೀಕಾರ ತೀರಿಸಿಕೊಂಡಿದೆ. ಸದ್ಯ ಪಾಕಿಸ್ತಾನ ಯುದ್ದದ ಭೀತಿ ಎದುರಿಸುತ್ತಿದೆ. ಆಪರೇಷನ್ ಸಿಂಧೂರ್ (Operation Sindoor)​ ಯಶಸ್ವಿ ಹಿನ್ನಲೆ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗುತ್ತಿದೆ. ಹಾಗಾಗಿ ದೇಶದ ಡ್ಯಾಂಗಳಲ್ಲಿ ಭದ್ರತೆಗೆ ಸೂಚನೆ ಬೆನ್ನಲ್ಲೇ ಇತ್ತ ಕರ್ನಾಟದ ಡ್ಯಾಂಗಳಲ್ಲಿ (Dam) ಬಿಗಿ ಭದ್ರತೆ ಸೂಚಿಸಲಾಗಿದೆ.

ಆಲಮಟ್ಟಿ ಡ್ಯಾಂನಲ್ಲಿ ಭದ್ರತೆ ಬಿರುಸು

ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಡ್ಯಾಂನಲ್ಲಿ ಭದ್ರತೆ ಬಿರುಸುಗೊಂಡಿದೆ. ಈಗಾಗಲೇ ಭದ್ರತೆಯ ನೇತೃತ್ವ ವಹಿಸಿಕೊಂಡಿರುವ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ ಮತ್ತಷ್ಟು ಭದ್ರತೆಯನ್ನು ಹೆಚ್ಚಿಸಿಕೊಂಡಿದೆ.

ಇದನ್ನೂ ಓದಿ: ಭಾರತೀಯ ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಪೂಜೆ ವೇಳೆ ಬಲಭಾಗದಿಂದ ಹೂ ನೀಡಿದ ದೇವರು

ಆಲಮಟ್ಟಿ ಡ್ಯಾಂ ಪ್ರವೇಶ‌ ದ್ವಾರದಿಂದಲೇ ಎಲ್ಲಾ ವಾಹನಗಳ ತಪಾಸಣೆ ಮಾಡಲಾಗುವುದು. ಬಾರೀ ಹಾಗೂ ಗೂಡ್ಸ್ ವಾಹನಗಳಿಗೆ ನಿಷೇಧಿಸಲಾಗಿದೆ, ಓರ್ವ ಡಿವೈಎಸ್​​ಪಿ ನೇತೃತ್ವದಲ್ಲಿ ಒಟ್ಟು 86 ಕೆಎಸ್ಐಎಸ್ಎಫ್ ಅಧಿಕಾರಿಗಳಿಂದ ಆಧುನಿಕ ಶಸ್ತ್ರಾಸ್ತ್ರಗಳ ಸಹಿತ ಭದ್ರತೆ ಒದಗಿಸಲಾಗಿದೆ. ಡ್ಯಾಂ ಆವರಣದಲ್ಲಿ ಸಿಸಿ ಕ್ಯಾಮೆರಾ ಕಣ್ಗಾವಲು ಇರಲಿದೆ. ನಿತ್ಯ 24 ಗಂಟೆಗಳ ಕಾಲ ಮೂರು ಪಾಳಯದಲ್ಲಿ ಭದ್ರತೆ ಇರಲಿದೆ. ಬೋಟ್ ಮೂಲಕ ಡ್ಯಾಂ ಹಿನ್ನೀರಿನಲ್ಲೂ ತಪಾಸಣೆ ಕಟ್ಟೆಚ್ಚರ ವಹಿಸಲಾಗಿದೆ.

ಹೇಮಾವತಿ ಜಲಾಶಯಕ್ಕೆ ಭದ್ರತೆ ನೀಡಿರುವ ಕೈಗಾರಿಕಾ ಭದ್ರತಾ ಪಡೆ

ಅದೇ ರೀತಿಯಾಗಿ ಹಾಸನ ತಾಲ್ಲೂಕಿನ, ಗೊರೂರಿನಲ್ಲಿರುವ ಹೇಮಾವತಿ ಜಲಾಶಯದ ಮೇಲೆ ತೀವ್ರ ನಿಗಾ ಇಡಲು ಭದ್ರತಾ ಪಡೆಗೆ ಭದ್ರತಾ ಇಲಾಖೆ ವಿಶೇಷ ಸೂಚನೆ ನೀಡಿದೆ. ಹೇಮಾವತಿ ಜಲಾಯಶದಲ್ಲಿ ಕೈಗಾರಿಕಾ ಭದ್ರತಾ ಪಡೆಯಿಂದ ಹೈ ಅಲರ್ಟ್ ಘೋಷಿಸಲಾಗಿದೆ. ಓರ್ವ ಪಿಐ, ಓರ್ವ ಪಿಎಸ್​ಐ, ನಾಲ್ವರು ಎಎಸ್​ಐ ಸೇರಿ 22 ಪೊಲೀಸರಿಂದ ಭ ದ್ರತೆ ಒದಗಿಸಲಾಗಿದೆ.

ಇದನ್ನೂ ಓದಿ: ರಾಯಚೂರಿನಲ್ಲಿ ರೈಲ್ವೆ ಇಲಾಖೆಯಿಂದ ಮಾಕ್ ಡ್ರಿಲ್: ತಾಲೀಮು ಪ್ರದರ್ಶನ ಹೇಗಿತ್ತು ನೋಡಿ

ಏರ್‌ಸ್ಟ್ರೈಕ್, ದ್ರೋಣ್ ಅಟ್ಯಾಕ್ ಆಗವ ಸಾಧ್ಯತೆ ಹಿನ್ನೆಲೆಯಲ್ಲಿ ತೀವ್ರ ನಿಗಾವಹಿಸಲು ಸೂಚಿಸಿದ್ದು, ದಾಳಿಯಾದ ವೇಳೆ ತೆಗೆದುಕೊಳ್ಳುವ ಕ್ರಮಗಳ ಬಗ್ಗೆ ಈಗಾಗಲೇ ಅಧಿಕಾರಿಗಳಿಂದ (ಡೆಮೋ) ಐಎಸ್‌ಡಿ ಡಿಜಿ ಮಾಹಿತಿ ಪಡೆದುಕೊಂಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು

ಈ ಬಗ್ಗೆ ಮಂಡ್ಯದಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಆಣೆಕಟ್ಟೆ ಭದ್ರತೆಗೆ ಎಲ್ಲಾ ಕಡೆ ಅಲರ್ಟ್ ಮಾಡಲಾಗಿದೆ. ಯಾವ ಟೈಮ್​​ನಲ್ಲಿ ಏನಾದರೂ ಆಗಬಹುದು ಎಂಬ ಕಾರಣಕ್ಕೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ