Karnataka Rain: ಬೀದರ್ ಜಿಲ್ಲೆಯಲ್ಲಿ ಸತತವಾಗಿ ಧಾರಾಕಾರ ಮಳೆ ಸುರಿಯುತ್ತಿದೆ. ಇದರಿಂದ ಕಾರಂಜಾ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, 5050 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. 7.69 ಟಿಎಂಸಿ ಸಾಮರ್ಥ್ಯವಿರುವ ಕಾರಂಜಾ ಜಲಾಶಯದಲ್ಲಿ ಸದ್ಯ 7.24 ಟಿಎಂಸಿ ನೀರು ಸಂಗ್ರಹವಾಗಿದೆ. ಕಾರಂಜಾ ಜಲಾಶಯಕ್ಕೆ ಒಳಹರಿವು ಹೆಚ್ಚಾಗುತ್ತಿದಂತೆ ಜಲಾಶಯಕ್ಕೆ ಯಾವುದೇ ಅಪಾಯವಾಗಬಾರದು ಎಂದು ಅಧಿಕಾರಿಗಳು ನಿನ್ನೆ 5050 ಕ್ಯೂಸೆಕ್ ನೀರು ಹೊರ ಬಿಟ್ಟಿದ್ದಾರೆ. ಇದರಿಂದ ಮಾಂಜ್ರಾ ನದಿ ತೀರದಲ್ಲಿ ಪ್ರವಾಹ ಉಂಟಾಗುವ ಭೀತಿ ಎದುರಾಗಿದೆ. ಗುಲಾಬ್ ಚಂಡಮಾರುತದ ಪರಿಣಾಮದಿಂದ ಕರ್ನಾಟಕದಲ್ಲಿ ಮತ್ತಷ್ಟು ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ ಬಗ್ಗೆ ಮಾಹಿತಿ ಇಲ್ಲಿದೆ.
ಕೆಆರ್ಎಸ್ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 38.04 ಮೀಟರ್
ಇಂದಿನ ನೀರಿನ ಮಟ್ಟ- 36.16 ಟಿಎಂಸಿ
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ಒಳಹರಿವು- 4785 ಕ್ಯೂಸೆಕ್ಸ್
ಇಂದಿನ ಹೊರಹರಿವು- 9274 ಕ್ಯೂಸೆಕ್ಸ್
ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 19.66 ಟಿಎಂಸಿ
ಇಂದಿನ ಒಳಹರಿವು- 1150 ಕ್ಯೂಸೆಕ್ಸ್
ಇಂದಿನ ಹೊರಹರಿವು- 805 ಕ್ಯೂಸೆಕ್ಸ್
ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 8.32 ಟಿಎಂಸಿ
ಇಂದಿನ ಒಳಹರಿವು- 822 ಕ್ಯೂಸೆಕ್ಸ್
ಇಂದಿನ ಹೊರಹರಿವು- 1450 ಕ್ಯೂಸೆಕ್ಸ್
ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 31.06 ಟಿಎಂಸಿ
ಇಂದಿನ ಒಳಹರಿವು- 2278 ಕ್ಯೂಸೆಕ್ಸ್
ಇಂದಿನ ಹೊರಹರಿವು- 5150 ಕ್ಯೂಸೆಕ್ಸ್
ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 18.82 ಟಿಎಂಸಿ
ಇಂದಿನ ಒಳಹರಿವು- 1684 ಕ್ಯೂಸೆಕ್ಸ್
ಇಂದಿನ ಹೊರಹರಿವು- 3796 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 142.08 ಟಿಎಂಸಿ
ಇಂದಿನ ಒಳಹರಿವು- 5399 ಕ್ಯೂಸೆಕ್ಸ್
ಇಂದಿನ ಹೊರಹರಿವು- 5247 ಕ್ಯೂಸೆಕ್ಸ್
ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ: 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 116.95 ಟಿಎಂಸಿ
ಇಂದಿನ ಒಳಹರಿವು- 2804 ಕ್ಯೂಸೆಕ್ಸ್
ಇಂದಿನ ಹೊರಹರಿವು- 2811 ಕ್ಯೂಸೆಕ್ಸ್
ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ-497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 100.43 ಟಿಎಂಸಿ
ಇಂದಿನ ಒಳಹರಿವು- 10,145 ಕ್ಯೂಸೆಕ್ಸ್
ಇಂದಿನ ಹೊರಹರಿವು- 10,591 ಕ್ಯೂಸೆಕ್ಸ್
ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 70.51 ಟಿಎಂಸಿ
ಇಂದಿನ ಒಳಹರಿವು- 3007 ಕ್ಯೂಸೆಕ್ಸ್
ಇಂದಿನ ಹೊರಹರಿವು- 3621 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 37.31 ಟಿಎಂಸಿ
ಇಂದಿನ ಒಳಹರಿವು- 574 ಕ್ಯೂಸೆಕ್ಸ್
ಇಂದಿನ ಹೊರಹರಿವು- 1694 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 51.00 ಟಿಎಂಸಿ
ಇಂದಿನ ಒಳಹರಿವು- 3727 ಕ್ಯೂಸೆಕ್ಸ್
ಇಂದಿನ ಹೊರಹರಿವು- 3727 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 123.08 ಟಿಎಂಸಿ
ಇಂದಿನ ಒಳಹರಿವು- 6426 ಕ್ಯೂಸೆಕ್ಸ್
ಇಂದಿನ ಹೊರಹರಿವು- 6426 ಕ್ಯೂಸೆಕ್ಸ್
ಬೆಂಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮಳೆ ಹೆಚ್ಚಾಗಿದೆ. ಬೆಂಗಳೂರು ಮಾತ್ರವಲ್ಲದೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯದಲ್ಲಿ ಇಂದು ಮಳೆಯಾಗಲಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ.
ಇದನ್ನೂ ಓದಿ: Karnataka Dams Water Level: ಬೀದರ್ನ ಕಾರಂಜಾ ಡ್ಯಾಂ ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
Karnataka Rain: ಕೊಡಗು, ಮಲೆನಾಡಿನಲ್ಲಿ ಇನ್ನೂ 3 ದಿನ ಮಳೆ ಹೆಚ್ಚಳ; ಹಲವೆಡೆ ಇಂದು ಹಳದಿ ಅಲರ್ಟ್ ಘೋಷಣೆ
(Karnataka Dams Water Level Cyclone Gulab Karnataka Rain on Sunday Karnataka Reservoir Water Level Today)