Karnataka Dams Water Level: ರಾಜ್ಯಾದ್ಯಂತ ಮಳೆ ಅವಾಂತರ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

| Updated By: preethi shettigar

Updated on: Nov 20, 2021 | 7:10 AM

Karnataka Reservoir Water Level Today: ರಾಜ್ಯದಲ್ಲಿ ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು, ಬೆಂಗಳೂರು ಸೇರಿದಂತೆ ಎಲ್ಲ ಜಿಲ್ಲೆಗಳಲ್ಲೂ ಮಳೆ ಅಬ್ಬರಿಸುತ್ತಿದೆ. ಇದರಿಂದ ಡ್ಯಾಂಗಳಲ್ಲಿ ನೀರಿನ ಒಳಹರಿವು ಹೆಚ್ಚಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ.

Karnataka Dams Water Level: ರಾಜ್ಯಾದ್ಯಂತ ಮಳೆ ಅವಾಂತರ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ತುಂಗಾಭದ್ರಾ ಡ್ಯಾಂ
Follow us on

Karnataka Rain: ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸುರಿಯುವ ಭೀತಿ ಎದುರಾಗಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಕೂಡ ಹಳದಿ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ, ಕಬಿನಿ, ಭದ್ರಾ, ತುಂಗಾಭದ್ರಾ ಮತ್ತು ಕೆಆರ್​ಎಸ್​ ಡ್ಯಾಂಗಳು ಸಂಪೂರ್ಣವಾಗಿ ಭರ್ತಿಯಾಗಿದೆ. ಮಲಪ್ರಭಾ ಶೇ. 90, ಘಟಪ್ರಭಾ ಶೇ. 87, ಲಿಂಗನಮಕ್ಕಿ ಶೇ. 88, ಹಾರಂಗಿ ಶೇ. 96, ಆಲಮಟ್ಟಿ ಶೇ. 83ರಷ್ಟು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 124.80 ಅಡಿ
ಇಂದಿನ ನೀರಿನ ಮಟ್ಟ- 124.80 ಅಡಿ
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ಒಳಹರಿವು- 18,678 ಕ್ಯೂಸೆಕ್ಸ್​
ಇಂದಿನ ಹೊರಹರಿವು- 18,469 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 18.10 ಟಿಎಂಸಿ
ಇಂದಿನ ಒಳಹರಿವು- 78 ಕ್ಯೂಸೆಕ್ಸ್​
ಇಂದಿನ ಹೊರಹರಿವು- 408 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 8.09 ಟಿಎಂಸಿ
ಇಂದಿನ ಒಳಹರಿವು- 614 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1600 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 26.74 ಟಿಎಂಸಿ
ಇಂದಿನ ಒಳಹರಿವು- 4397 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 2320 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 19.52 ಟಿಎಂಸಿ
ಇಂದಿನ ಒಳಹರಿವು- 4689 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4488 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 133.86 ಟಿಎಂಸಿ
ಇಂದಿನ ಒಳಹರಿವು- 1864 ಕ್ಯೂಸೆಕ್ಸ್​
ಇಂದಿನ ಹೊರಹರಿವು- 6379 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ: 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 110.37 ಟಿಎಂಸಿ
ಇಂದಿನ ಒಳಹರಿವು- 701 ಕ್ಯೂಸೆಕ್ಸ್​
ಇಂದಿನ ಹೊರಹರಿವು- 2874 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 100.86 ಟಿಎಂಸಿ
ಇಂದಿನ ಒಳಹರಿವು- 32,672 ಕ್ಯೂಸೆಕ್ಸ್​
ಇಂದಿನ ಹೊರಹರಿವು- 32,672 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 71.33 ಟಿಎಂಸಿ
ಇಂದಿನ ಒಳಹರಿವು- 4745 ಕ್ಯೂಸೆಕ್ಸ್​
ಇಂದಿನ ಹೊರಹರಿವು- 7127 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್​
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 33.91 ಟಿಎಂಸಿ
ಇಂದಿನ ಒಳಹರಿವು- 3397 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1869 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್​
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 44.17 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 2651 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 102.11 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 6975 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dam Water Level: ವ್ಯಾಪಕ ಮಳೆಯಿಂದ 4 ಡ್ಯಾಂಗಳು ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Weather Today: ಬೆಂಗಳೂರು, ಮಲೆನಾಡು ಸೇರಿ 11 ಜಿಲ್ಲೆಗಳಲ್ಲಿ ಇಂದು ವಿಪರೀತ ಮಳೆ; ಆರೆಂಜ್ ಅಲರ್ಟ್​ ಘೋಷಣೆ