Karnataka Rain: ಇಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಮಂಡ್ಯ, ಹಾಸನ, ರಾಮನಗರ, ಚಾಮರಾಜನಗರ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಇಂದಿನಿಂದ ನ. 13ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಇನ್ನು 3 ದಿನ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಇಂದು ಕೊಪ್ಪಳ, ಹಾವೇರಿ, ರಾಯಚೂರು, ಧಾರವಾಡ, ಬೆಳಗಾವಿ ಜಿಲ್ಲೆಗಳ ಕೆಲವು ಕಡೆ ಮಳೆ ಸಾಧ್ಯತೆ ಇದ್ದರೆ, ನ. 12 ಮತ್ತು ನ. 13ರಂದು ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮಳೆಯಿಂದಾಗಿ ಕಬಿನಿ, ಕೆಆರ್ಎಸ್ ಡ್ಯಾಂಗಳು ಭರ್ತಿಯಾಗಿವೆ. ತುಂಗಭದ್ರಾ ಶೇ. 98, ಮಲಪ್ರಭಾ ಶೇ. 92, ಘಟಪ್ರಭಾ ಶೇ. 92, ಭದ್ರಾ ಶೇ. 99, ಲಿಂಗನಮಕ್ಕಿ ಶೇ. 89, ಹಾರಂಗಿ ಶೇ. 95, ಆಲಮಟ್ಟಿ ಶೇ. 89ರಷ್ಟು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ ಬಗ್ಗೆ ಮಾಹಿತಿ ಇಲ್ಲಿದೆ.
ಕೆಆರ್ಎಸ್ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 124.80 ಅಡಿ
ಇಂದಿನ ನೀರಿನ ಮಟ್ಟ- 124.80 ಅಡಿ
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ಒಳಹರಿವು- 10,458 ಕ್ಯೂಸೆಕ್ಸ್
ಇಂದಿನ ಹೊರಹರಿವು- 10,249 ಕ್ಯೂಸೆಕ್ಸ್
ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 18.24 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್
ಇಂದಿನ ಹೊರಹರಿವು- 726 ಕ್ಯೂಸೆಕ್ಸ್
ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 8.09 ಟಿಎಂಸಿ
ಇಂದಿನ ಒಳಹರಿವು- 1070 ಕ್ಯೂಸೆಕ್ಸ್
ಇಂದಿನ ಹೊರಹರಿವು- 800 ಕ್ಯೂಸೆಕ್ಸ್
ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 26.02 ಟಿಎಂಸಿ
ಇಂದಿನ ಒಳಹರಿವು- 2662 ಕ್ಯೂಸೆಕ್ಸ್
ಇಂದಿನ ಹೊರಹರಿವು- 3500 ಕ್ಯೂಸೆಕ್ಸ್
Major Reservoir – Level, Storage, Flows as of 10-11-2021. pic.twitter.com/1KfDQqIVX4
— KSNDMC (@KarnatakaSNDMC) November 10, 2021
ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 19.52 ಟಿಎಂಸಿ
ಇಂದಿನ ಒಳಹರಿವು- 2694 ಕ್ಯೂಸೆಕ್ಸ್
ಇಂದಿನ ಹೊರಹರಿವು- 2042 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 134.76 ಟಿಎಂಸಿ
ಇಂದಿನ ಒಳಹರಿವು- 1443 ಕ್ಯೂಸೆಕ್ಸ್
ಇಂದಿನ ಹೊರಹರಿವು- 5903 ಕ್ಯೂಸೆಕ್ಸ್
ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ: 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 111.99 ಟಿಎಂಸಿ
ಇಂದಿನ ಒಳಹರಿವು- 167 ಕ್ಯೂಸೆಕ್ಸ್
ಇಂದಿನ ಹೊರಹರಿವು- 1479 ಕ್ಯೂಸೆಕ್ಸ್
ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 98.82 ಟಿಎಂಸಿ
ಇಂದಿನ ಒಳಹರಿವು- 10,644 ಕ್ಯೂಸೆಕ್ಸ್
ಇಂದಿನ ಹೊರಹರಿವು- 9754 ಕ್ಯೂಸೆಕ್ಸ್
ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 70.65 ಟಿಎಂಸಿ
ಇಂದಿನ ಒಳಹರಿವು- 3195 ಕ್ಯೂಸೆಕ್ಸ್
ಇಂದಿನ ಹೊರಹರಿವು- 3195 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 34.49 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್
ಇಂದಿನ ಹೊರಹರಿವು- 2194 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 46.65 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್
ಇಂದಿನ ಹೊರಹರಿವು- 4877 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 109.13 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್
ಇಂದಿನ ಹೊರಹರಿವು- 1805 ಕ್ಯೂಸೆಕ್ಸ್
ಇದನ್ನೂ ಓದಿ: Karnataka Dams Water Level: ಮಳೆಯಿಂದ ರಾಜ್ಯದಲ್ಲಿ ಹಳದಿ ಅಲರ್ಟ್ ಘೋಷಣೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
Chennai Rain ತಮಿಳುನಾಡು, ಪುದುಚೇರಿಯಲ್ಲಿ ರೆಡ್ ಅಲರ್ಟ್; ಮಳೆಗೆ ಬಲಿಯಾದವರ ಸಂಖ್ಯೆ 12ಕ್ಕೆ ಏರಿಕೆ