Karnataka Reservoirs Water Level Today: ಜುಲೈ ತಿಂಗಳ ಅಂತ್ಯದಲ್ಲಿ ಇದ್ದಕ್ಕಿದ್ದಂತೆ ಸುರಿದ ಭಾರೀ ಮಳೆಯಿಂದ ಕರ್ನಾಟಕದ ಬಹುತೇಕ ಎಲ್ಲ ನದಿಗಳೂ ಉಕ್ಕಿ ಹರಿದಿತ್ತು. ಇದರಿಂದ ರಾಜ್ಯದ ಜಲಾಶಯಗಳಿಗೆ ಭಾರೀ ಪ್ರಮಾಣದ ನೀರು ಹರಿದುಬಂದಿದ್ದು, ತುಂಗಾ (Tunga River), ಭದ್ರಾ (Bhadra), ಲಿಂಗನಮಕ್ಕಿ (Linganamakki Dam), ಕೆಆರ್ಎಸ್ (KRS Dam) ಸೇರಿದಂತೆ ಅನೇಕ ಅಣೆಕಟ್ಟುಗಳ ಗೇಟ್ ಓಪನ್ ಮಾಡಲಾಗಿತ್ತು. ಇದೀಗ ಎರಡು ದಿನಗಳಿಂದ ಮತ್ತೆ ಕರ್ನಾಟಕದಲ್ಲಿ ಸಾಧಾರಣವಾದ ಮಳೆ ಶುರುವಾಗಿದ್ದು, ಮಲೆನಾಡು, ಕರಾವಳಿ, ಕೊಡಗು, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಮಳೆ ಮುಂದುವರೆಯಲಿದೆ. ಹೀಗಾಗಿ, ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Dam Water Level) ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.
ಕೆಆರ್ಎಸ್ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ-38.04 ಮೀಟರ್
ಇಂದಿನ ನೀರಿನ ಮಟ್ಟ- 36.63 ಮೀಟರ್
ಗರಿಷ್ಠ ಸಾಮರ್ಥ್ಯ: 49.45 ಟಿಎಂಸಿ
ಇಂದಿನ ಒಳಹರಿವು-25,066 ಕ್ಯೂಸೆಕ್ಸ್
ಇಂದಿನ ಹೊರಹರಿವು- 5452 ಕ್ಯೂಸೆಕ್ಸ್
ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 15.10 ಟಿಎಂಸಿ
ಇಂದಿನ ಒಳಹರಿವು-2400 ಕ್ಯೂಸೆಕ್ಸ್
ಇಂದಿನ ಹೊರಹರಿವು-000 ಕ್ಯೂಸೆಕ್ಸ್
ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ-7.23 ಟಿಎಂಸಿ
ಇಂದಿನ ಒಳಹರಿವು-8304 ಕ್ಯೂಸೆಕ್ಸ್
ಇಂದಿನ ಹೊರಹರಿವು-4743 ಕ್ಯೂಸೆಕ್ಸ್
ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 35.50 ಟಿಎಂಸಿ
ಇಂದಿನ ಒಳಹರಿವು-7516 ಕ್ಯೂಸೆಕ್ಸ್
ಇಂದಿನ ಹೊರಹರಿವು-6005 ಕ್ಯೂಸೆಕ್ಸ್
ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 18.30 ಟಿಎಂಸಿ
ಇಂದಿನ ಒಳಹರಿವು-10,840 ಕ್ಯೂಸೆಕ್ಸ್
ಇಂದಿನ ಹೊರಹರಿವು-11450 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 127.67 ಟಿಎಂಸಿ
ಇಂದಿನ ಒಳಹರಿವು- 14,645 ಕ್ಯೂಸೆಕ್ಸ್
ಇಂದಿನ ಹೊರಹರಿವು- 6060 ಕ್ಯೂಸೆಕ್ಸ್
ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ: 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 106.76 ಟಿಎಂಸಿ
ಇಂದಿನ ಒಳಹರಿವು-8272 ಕ್ಯೂಸೆಕ್ಸ್
ಇಂದಿನ ಹೊರಹರಿವು-2728 ಕ್ಯೂಸೆಕ್ಸ್
ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ-497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 96.86 ಟಿಎಂಸಿ
ಇಂದಿನ ಒಳಹರಿವು- 72,369 ಕ್ಯೂಸೆಕ್ಸ್
ಇಂದಿನ ಹೊರಹರಿವು- 69,805 ಕ್ಯೂಸೆಕ್ಸ್
ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 69.45 ಟಿಎಂಸಿ
ಇಂದಿನ ಒಳಹರಿವು- 12,411 ಕ್ಯೂಸೆಕ್ಸ್
ಇಂದಿನ ಹೊರಹರಿವು-13,604 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 34.05 ಟಿಎಂಸಿ
ಇಂದಿನ ಒಳಹರಿವು- 4572 ಕ್ಯೂಸೆಕ್ಸ್
ಇಂದಿನ ಹೊರಹರಿವು- 1516 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 49.52 ಟಿಎಂಸಿ
ಇಂದಿನ ಒಳಹರಿವು- 6842 ಕ್ಯೂಸೆಕ್ಸ್
ಇಂದಿನ ಹೊರಹರಿವು- 1799 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ (Almatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 117.38 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-92.33 ಟಿಎಂಸಿ
ಇಂದಿನ ಒಳಹರಿವು-82,828 ಕ್ಯೂಸೆಕ್ಸ್
ಇಂದಿನ ಹೊರಹರಿವು-76,960 ಕ್ಯೂಸೆಕ್ಸ್
ಇಂದು ಕರಾವಳಿಯಲ್ಲಿ ಭಾರೀ ಮಳೆಯಾಗಲಿದ್ದು, ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇಂದು ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗುವ ನಿರೀಕ್ಷೆ ಇದೆ. ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೂ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲೂ ಈ ವಾರ ಮಳೆಯ ಆರ್ಭಟ ಹೆಚ್ಚಾಗಲಿದೆ. ಬೆಂಗಳೂರಿನಲ್ಲೂ ಇನ್ನೆರಡು ದಿನ ಮತ್ತೆ ಮಳೆಯಾಗುವ ನಿರೀಕ್ಷೆಯಿದೆ.
ಇದನ್ನೂ ಓದಿ: ಆಗಸ್ಟ್ 9 ಮಲೆನಾಡಿಗರ ಪಾಲಿಗೆ ಕರಾಳ ದಿನ; 2 ವರ್ಷ ತುಂಬಿ 3ನೇ ಮಳೆಗಾಲ ಬಂದ್ರೂ ಸಂತ್ರಸ್ತರ ಕಣ್ಣೀರು ತಪ್ಪಲಿಲ್ಲ
ಪ್ರವಾಹ ಸಂತ್ರಸ್ತರ ಸಹಾಯಕ್ಕೆ ಹೋಗಿ ತಾನೇ ನೆರೆಯಲ್ಲಿ ಸಿಲುಕಿದ ಗೃಹ ಸಚಿವ; ಏರ್ಲಿಫ್ಟ್ ಮೂಲಕ ಮಂತ್ರಿಯ ರಕ್ಷಣೆ!
(Karnataka Dams Water Level on August 10 Karnataka Reservoir Water Level Today Increases after Moderate Rain)
Published On - 6:20 am, Tue, 10 August 21