Karnataka Rain Today: ಇಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಹೆಚ್ಚಾಗಲಿದ್ದು, ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಇಂದಿನಿಂದ ಆ. 16ರವರೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ತಮಿಳುನಾಡು, ಕೇರಳ ಹಾಗೂ ಕರ್ನಾಟಕದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಕೂಡ ಇಂದು ಮಳೆ ಮುಂದುವರೆಯಲಿದೆ. ತುಂಗಾ (Tunga River), ಭದ್ರಾ (Bhadra), ಲಿಂಗನಮಕ್ಕಿ (Linganamakki Dam), ಕೆಆರ್ಎಸ್ (KRS Dam) ಸೇರಿದಂತೆ ಬಹುತೇಕ ಡ್ಯಾಂಗಳ ನೀರಿನ ಮಟ್ಟ ಕೊಂಚ ಕಡಿಮೆಯಾಗಿದೆ. ಹಾರಂಗಿ ಜಲಾಶಯದ ನೀರಿನ ಮಟ್ಟ ಏರಿಕೆಯಾಗಿದೆ. ಇಂದು ಕೂಡ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ (Karnataka Dam Water Level) ಕುರಿತು ಮಾಹಿತಿ ಇಲ್ಲಿದೆ.
ಕೆಆರ್ಎಸ್ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ-38.04 ಮೀಟರ್
ಇಂದಿನ ನೀರಿನ ಮಟ್ಟ- 44.30 ಟಿಎಂಸಿ
ಗರಿಷ್ಠ ಸಾಮರ್ಥ್ಯ: 49.45 ಟಿಎಂಸಿ
ಇಂದಿನ ಒಳಹರಿವು- 5991 ಕ್ಯೂಸೆಕ್ಸ್
ಇಂದಿನ ಹೊರಹರಿವು- 5503 ಕ್ಯೂಸೆಕ್ಸ್
ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 15.54 ಟಿಎಂಸಿ
ಇಂದಿನ ಒಳಹರಿವು-1800 ಕ್ಯೂಸೆಕ್ಸ್
ಇಂದಿನ ಹೊರಹರಿವು-000 ಕ್ಯೂಸೆಕ್ಸ್
ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ-7.35 ಟಿಎಂಸಿ
ಇಂದಿನ ಒಳಹರಿವು- 3322 ಕ್ಯೂಸೆಕ್ಸ್
ಇಂದಿನ ಹೊರಹರಿವು- 2816 ಕ್ಯೂಸೆಕ್ಸ್
ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 35.57 ಟಿಎಂಸಿ
ಇಂದಿನ ಒಳಹರಿವು- 3828 ಕ್ಯೂಸೆಕ್ಸ್
ಇಂದಿನ ಹೊರಹರಿವು-4105 ಕ್ಯೂಸೆಕ್ಸ್
ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 18.40 ಟಿಎಂಸಿ
ಇಂದಿನ ಒಳಹರಿವು- 4695 ಕ್ಯೂಸೆಕ್ಸ್
ಇಂದಿನ ಹೊರಹರಿವು- 2556 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 129.21 ಟಿಎಂಸಿ
ಇಂದಿನ ಒಳಹರಿವು- 11,174 ಕ್ಯೂಸೆಕ್ಸ್
ಇಂದಿನ ಹೊರಹರಿವು- 5188 ಕ್ಯೂಸೆಕ್ಸ್
ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ: 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 107.39 ಟಿಎಂಸಿ
ಇಂದಿನ ಒಳಹರಿವು- 5550 ಕ್ಯೂಸೆಕ್ಸ್
ಇಂದಿನ ಹೊರಹರಿವು- 3408 ಕ್ಯೂಸೆಕ್ಸ್
ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ-497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 99.39 ಟಿಎಂಸಿ
ಇಂದಿನ ಒಳಹರಿವು- 29,244 ಕ್ಯೂಸೆಕ್ಸ್
ಇಂದಿನ ಹೊರಹರಿವು- 10,988 ಕ್ಯೂಸೆಕ್ಸ್
ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 69.74 ಟಿಎಂಸಿ
ಇಂದಿನ ಒಳಹರಿವು- 5909 ಕ್ಯೂಸೆಕ್ಸ್
ಇಂದಿನ ಹೊರಹರಿವು- 5609 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 34.31 ಟಿಎಂಸಿ
ಇಂದಿನ ಒಳಹರಿವು- 1544 ಕ್ಯೂಸೆಕ್ಸ್
ಇಂದಿನ ಹೊರಹರಿವು- 1544 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 50.09 ಟಿಎಂಸಿ
ಇಂದಿನ ಒಳಹರಿವು- 4459 ಕ್ಯೂಸೆಕ್ಸ್
ಇಂದಿನ ಹೊರಹರಿವು- 1586 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 118.39 ಟಿಎಂಸಿ
ಇಂದಿನ ಒಳಹರಿವು- 24,098 ಕ್ಯೂಸೆಕ್ಸ್
ಇಂದಿನ ಹೊರಹರಿವು- 2582 ಕ್ಯೂಸೆಕ್ಸ್
ಬಂಗಾಳಕೊಲ್ಲಿಯಲ್ಲಿ ಪ್ರಬಲ ಮಾರುತಗಳ ಪ್ರಭಾವದಿಂದ ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಈಗಾಗಲೇ ಉತ್ತರ ಭಾರತದ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ದಕ್ಷಿಣ ಭಾರತದಲ್ಲೂ ಮಳೆಯಾಗುತ್ತಿದ್ದು, ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: Karnataka Dams Water Level: ನದಿಗಳಲ್ಲಿ ತಗ್ಗಿದ ನೀರಿನ ಹರಿವು; ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
(Karnataka Dams Water Level Today Karnataka Reservoir Water Level on August 14 IMD Karnataka Rain)