Karnataka Rain: ಕರ್ನಾಟಕದಲ್ಲಿ ಇಂದು ಮತ್ತು ನಾಳೆ ಮಳೆಯ ಅಬ್ಬರ ಜೋರಾಗಲಿದೆ. ರಾಜ್ಯದಲ್ಲಿ ಸುರಿದ ಮಳೆಯಿಂದ ಭದ್ರಾ, ಕೆಆರ್‌ಎಸ್, ತುಂಗಾಭದ್ರಾ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ಕರ್ನಾಟಕದ ಕಾವೇರಿ ನದಿಗೆ ಅಡ್ಡಲಾಗಿರುವ ಕೃಷ್ಣರಾಜ ಸಾಗರ (ಕೆಆರ್‌ಎಸ್) ಅಣೆಕಟ್ಟಿನ ನೀರಿನ ಮಟ್ಟ ನಿನ್ನೆ ಭರ್ತಿಯಾಗಿದ್ದು, ಗರಿಷ್ಠ 124.80 ಅಡಿಗಳನ್ನು ತಲುಪಿದೆ. 2010ರ ನಂತರ ಇದೇ ಮೊದಲ ಬಾರಿಗೆ ಮಳೆಗಾಲದ ಅವಧಿಯಲ್ಲಿ ಅಕ್ಟೋಬರ್ ಕೊನೆಯ ವಾರದಲ್ಲಿ ಅಣೆಕಟ್ಟು ತನ್ನ ಸಂಪೂರ್ಣ ಜಲಾಶಯದ ಮಟ್ಟವನ್ನು ತಲುಪಿದೆ. ಮಲಪ್ರಭಾ ಶೇ. 97, ಘಟಪ್ರಭಾ ಶೇ. 98, ಲಿಂಗನಮಕ್ಕಿ ಶೇ. 91, ಹಾರಂಗಿ ಶೇ. 97, ಕಬಿನಿ ಶೇ. 98, ಆಲಮಟ್ಟಿ ಶೇ. 96, ಕೆಆರ್‌ಎಸ್ ಶೇ. 99ರಷ್ಟು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ ಬಗ್ಗೆ ಮಾಹಿತಿ ಇಲ್ಲಿದೆ.
ಕೆಆರ್‌ಎಸ್ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 124.80 ಅಡಿ
ಇಂದಿನ ನೀರಿನ ಮಟ್ಟ- 124.80 ಅಡಿ
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ಒಳಹರಿವು- 8,767 ಕ್ಯೂಸೆಕ್ಸ್
ಇಂದಿನ ಹೊರಹರಿವು- 3615 ಕ್ಯೂಸೆಕ್ಸ್
ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 18.56 ಟಿಎಂಸಿ
ಇಂದಿನ ಒಳಹರಿವು- 94 ಕ್ಯೂಸೆಕ್ಸ್
ಇಂದಿನ ಹೊರಹರಿವು- 784 ಕ್ಯೂಸೆಕ್ಸ್
ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 8.21 ಟಿಎಂಸಿ
ಇಂದಿನ ಒಳಹರಿವು- 852 ಕ್ಯೂಸೆಕ್ಸ್
ಇಂದಿನ ಹೊರಹರಿವು- 1133 ಕ್ಯೂಸೆಕ್ಸ್
ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 27.02 ಟಿಎಂಸಿ
ಇಂದಿನ ಒಳಹರಿವು- 2308 ಕ್ಯೂಸೆಕ್ಸ್
ಇಂದಿನ ಹೊರಹರಿವು- 3625 ಕ್ಯೂಸೆಕ್ಸ್
ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 19.21 ಟಿಎಂಸಿ
ಇಂದಿನ ಒಳಹರಿವು- 3195 ಕ್ಯೂಸೆಕ್ಸ್
ಇಂದಿನ ಹೊರಹರಿವು- 2000 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 138.59 ಟಿಎಂಸಿ
ಇಂದಿನ ಒಳಹರಿವು- 1545 ಕ್ಯೂಸೆಕ್ಸ್
ಇಂದಿನ ಹೊರಹರಿವು- 5095 ಕ್ಯೂಸೆಕ್ಸ್
ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ: 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 114.23 ಟಿಎಂಸಿ
ಇಂದಿನ ಒಳಹರಿವು- 1041 ಕ್ಯೂಸೆಕ್ಸ್
ಇಂದಿನ ಹೊರಹರಿವು- 1483 ಕ್ಯೂಸೆಕ್ಸ್
ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 100.86 ಟಿಎಂಸಿ
ಇಂದಿನ ಒಳಹರಿವು- 22,270 ಕ್ಯೂಸೆಕ್ಸ್
ಇಂದಿನ ಹೊರಹರಿವು- 22,270 ಕ್ಯೂಸೆಕ್ಸ್
ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 71.54 ಟಿಎಂಸಿ
ಇಂದಿನ ಒಳಹರಿವು- 3507 ಕ್ಯೂಸೆಕ್ಸ್
ಇಂದಿನ ಹೊರಹರಿವು- 3507 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 36.76 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್
ಇಂದಿನ ಹೊರಹರಿವು- 994 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 50.14 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್
ಇಂದಿನ ಹೊರಹರಿವು- 2875 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 118.56 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್
ಇಂದಿನ ಹೊರಹರಿವು- 11736 ಕ್ಯೂಸೆಕ್ಸ್
ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು, ಸಿಡಿಲು ಹೆಚ್ಚಾಗಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಲಿದೆ. ಮುಂದಿನ ಎರಡು ದಿನಗಳವರೆಗೆ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಕರ್ನಾಟಕ, ಕೇರಳ, ತಮಿಳುನಾಡು, ಪುದುಚೆರಿ, ಆಂಧ್ರಪ್ರದೇಶದಲ್ಲಿ ಇಂದಿನಿಂದ ನವೆಂಬರ್ 1ರವರೆಗೂ ಭಾರೀ ಮಳೆಯಾಗಲಿದೆ. ಇಂದಿನಿಂದ ನವೆಂಬರ್ 1ರವರೆಗೆ ದಕ್ಷಿಣ ಭಾರತದ ಹಲವಾರು ರಾಜ್ಯಗಳಲ್ಲಿ ಆರೆಂಜ್ ಅಲರ್ಟ್ ನೀಡಿದೆ.
ಇದನ್ನೂ ಓದಿ: Karnataka Dams Water Level: ಕೆಆರ್‌ಎಸ್ ಡ್ಯಾಂ ಭರ್ತಿಗೆ ಕ್ಷಣಗಣನೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ