AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಭೇಟಿಯಾದ ಡಿಕೆ ಶಿವಕುಮಾರ್: ಏನೇನು ಚರ್ಚೆ ನಡೆಯಿತು? ಡಿಸಿಎಂ ಹೇಳಿದ್ದಿಷ್ಟು

ದೆಹಲಿ ಪ್ರವಾಸದಲ್ಲಿರುವ ಡಿಸಿಎಂ ಡಿಕೆ ಶಿವಕುಮಾರ್ ಬುಧವಾರ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿ ವಿವಿಧ ವಿಚಾರಗಳ ಬಗ್ಗೆ ಚರ್ಚಿಸಿದರು. ನಂತರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ಯಾವೆಲ್ಲ ವಿಚಾರಗಳ ಬಗ್ಗೆ ಚರ್ಚಿಸಾಗಿದೆ ಎಂಬ ಮಾಹಿತಿ ನೀಡಿದ್ದಾರೆ. ಆ ವಿವರ ಇಲ್ಲಿದೆ.

ಪ್ರಧಾನಿ ಮೋದಿ ಭೇಟಿಯಾದ ಡಿಕೆ ಶಿವಕುಮಾರ್: ಏನೇನು ಚರ್ಚೆ ನಡೆಯಿತು? ಡಿಸಿಎಂ ಹೇಳಿದ್ದಿಷ್ಟು
ಡಿಕೆ ಶಿವಕುಮಾರ್
ಹರೀಶ್ ಜಿ.ಆರ್​.
| Edited By: |

Updated on: Jul 31, 2024 | 12:29 PM

Share

ನವದೆಹಲಿ, ಜುಲೈ 31: ಈ ಬಾರಿ ಕೇಂದ್ರ ಬಜೆಟ್​ನಲ್ಲಿ ಕರ್ನಾಟಕಕ್ಕೆ ಹೆಚ್ಚಿನ ಅನುದಾನ ಸಿಕ್ಕಿಲ್ಲ. ಹೀಗಾಗಿ ಬೆಂಗಳೂರು ಅಭಿವೃದ್ಧಿ ಯೋಜನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಜತೆ ಚರ್ಚೆ ನಡೆಸಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ನವದೆಹಲಿಯಲ್ಲಿ ಪ್ರಧಾನಿಯವರನ್ನು ಬೇಟಿ ಮಾಡಿ ಮಾತುಕತೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಗಿಫ್ಟ್​​ ಸಿಟಿ’ ಬಗ್ಗೆ ಮಾತನಾಡಿದ್ದಾಗ ಅದನ್ನು ನೀಡಲ್ಲ ಎಂದಿದ್ದರು. ಹೀಗಾಗಿ ಬೇರೆ ಅಭಿವೃದ್ಧಿ ಯೋಜನೆಗಳಿಗೆ ನೆರವು ನೀಡುವಂತೆ ಮನವಿ ಮಾಡಲಾಗಿದೆ ಎಂದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆಯೂ ಚರ್ಚೆ ನಡೆಯಿತು. 5300 ಕೋಟಿ ರೂ. ಬಜೆಟ್​​​ನ ಭದ್ರಾ ಮೇಲ್ಡಂಡೆ ಯೋಜನೆಯ ಹಣ ಬಂದಿಲ್ಲ. ಅದನ್ನು ಪರಿಶೀಲಿಸುವ ಬಗ್ಗೆ ಪ್ರಧಾನಿ ಭರವಸೆ ನೀಡಿದ್ದಾರೆ. ಕಾವೇರಿ ನದಿ ನೀರು, ಮಹದಾಯಿ ಯೋಜನೆ ಬಗ್ಗೆಯೂ ಪ್ರಸ್ತಾಪ ಎಂದು ಶಿವಕುಮಾರ್ ತಿಳಿಸಿದರು.

ಬಿಜೆಪಿ ಪಾದಯಾತ್ರೆಗೆ ಜೆಡಿಎಸ್​ ನಾಯಕರ ವಿರೋಧ ವಿಚಾರವಾಗಿ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಬಿಜೆಪಿ ಪಾದಯಾತ್ರೆ ಬಗ್ಗೆ ಗೊತ್ತಿಲ್ಲ. ಆ ಬಗ್ಗೆ ಇಲ್ಲಿ ಮಾತನಾಡುವುದಿಲ್ಲ, ಬೆಂಗಳೂರಿನಲ್ಲಿ ಮಾತನಾಡುತ್ತೇನೆ ಎಂದರು.

ಇದನ್ನೂ ಓದಿ: ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಕಾನೂನು ತಜ್ಞರಿಂದ ವರದಿ ಪಡೆದ ರಾಜ್ಯಪಾಲ

ಪಾದಯಾತ್ರೆಗೆ ಪ್ರತಿಯಾಗಿ ನಾವು ಏನು ಬೇಕೋ ಆ ಸಿದ್ಧತೆ ಮಾಡಿಕೊಂಡಿದ್ದೇವೆ. ಹೆಚ್​ಡಿ ಕುಮಾರಸ್ವಾಮಿ ಹೇಳಿಕೆ ಬಗ್ಗೆ ನಾನು ಮಾತನಾಡಲ್ಲ. ಅವರು ಎನ್‌ಡಿಎ, ನಾವು ‘ಇಂಡಿಯಾ’. ಎಲ್ಲದಕ್ಕೂ ಕಾಲ ಉತ್ತರ ಕೊಡಲಿದೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?