ಮೇಕೆದಾಟುನಿಂದ ಕಾವೇರಿ ನೀರನ್ನು ಬೆಂಗಳೂರಿಗೆ ತರುತ್ತೇವೆ; ಡಿಸಿಎಂ ಡಿಕೆ ಶಿವಕುಮಾರ್ ಪುನರುಚ್ಚಾರ

ಬೆಂಗಳೂರಿಗೆ ನೀರಿನ ಅವಶ್ಯಕತೆ ತುಂಬಾ ಇದೆ. ಹೀಗಾಗಿಯೇ ನಾವು ಮೇಕೆದಾಟು ಪಾದಯಾತ್ರೆ ಮಾಡಿದ್ದೆವು. ಕಾವೇರಿ ನೀರು ತಮಿಳುನಾಡು ಮೂಲಕ ಸಮುದ್ರಕ್ಕೆ ಸೇರುತ್ತಿದೆ. ವ್ಯರ್ಥವಾಗಿ ಹೋಗುವ ಕಾವೇರಿ ನೀರನ್ನು ಬೆಂಗಳೂರಿಗೆ ತರಬೇಕಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಮೇಕೆದಾಟುನಿಂದ ಕಾವೇರಿ ನೀರನ್ನು ಬೆಂಗಳೂರಿಗೆ ತರುತ್ತೇವೆ; ಡಿಸಿಎಂ ಡಿಕೆ ಶಿವಕುಮಾರ್ ಪುನರುಚ್ಚಾರ
ಡಿಕೆ ಶಿವಕುಮಾರ್
Edited By:

Updated on: Jun 27, 2023 | 3:48 PM

ಬೆಂಗಳೂರು: ಕಾವೇರಿ ನೀರು (Kaveri Water) ತಮಿಳುನಾಡು ಮೂಲಕ ಸಮುದ್ರಕ್ಕೆ ಸೇರುತ್ತಿದೆ. ವ್ಯರ್ಥವಾಗಿ ಹೋಗುವ ಕಾವೇರಿ ನೀರನ್ನು ಬೆಂಗಳೂರಿಗೆ ತರಬೇಕಿದೆ. ಹೀಗಾಗಿ ಮೇಕೆದಾಟುವಿನಿಂದ ಕಾವೇರಿ ನೀರನ್ನು ಬೆಂಗಳೂರಿಗೆ ತರುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಆ ಮೂಲಕ ಮೇಕೆದಾಟು (Mekedatu) ಯೋಜನೆ ಜಾರಿ ಮಾಡಿಯೇ ಸಿದ್ಧ ಎಂದು ಪರೋಕ್ಷವಾಗಿ ಪುನರುಚ್ಚರಿಸಿದ್ದಾರೆ.

ವಿಧಾನಸೌಧ ಬ್ಯಾಂಕ್ವೆಟ್ ಹಾಲ್​​ನಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಬೆಂಗಳೂರಿಗೆ ನೀರಿನ ಅವಶ್ಯಕತೆ ತುಂಬಾ ಇದೆ. ಹೀಗಾಗಿಯೇ ನಾವು ಮೇಕೆದಾಟು ಪಾದಯಾತ್ರೆ ಮಾಡಿದ್ದೆವು. ಕಾವೇರಿ ನೀರು ತಮಿಳುನಾಡು ಮೂಲಕ ಸಮುದ್ರಕ್ಕೆ ಸೇರುತ್ತಿದೆ. ವ್ಯರ್ಥವಾಗಿ ಹೋಗುವ ಕಾವೇರಿ ನೀರನ್ನು ಬೆಂಗಳೂರಿಗೆ ತರಬೇಕಿದೆ. ಈ ಹಿಂದೆ ಇದ್ದ ಬೊಮ್ಮಾಯಿ ಸರ್ಕಾರ ಈ ಕೆಲಸವನ್ನು ಮಾಡಿಲ್ಲ. ನಾವು ಮೇಕೆದಾಟುವಿನಿಂದ ಕಾವೇರಿ ನೀರನ್ನು ಬೆಂಗಳೂರಿಗೆ ತರುತ್ತೇವೆ ಎಂದು ಹೇಳಿದ್ದಾರೆ.

ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಡಿಕೆ ಶಿವಕುಮಾರ್ ಅವರು ಮೇಕದಾಟು ಯೋಜನೆ ಬಗ್ಗೆ ಹೇಳಿಕೆ ನೀಡಿದ್ದರು. ಇದಕ್ಕೆ ತಮಿಳುನಾಡು ಸರ್ಕಾರದಿಂದ ಆಕ್ಷೇಪವೂ ವ್ಯಕ್ತವಾಗಿತ್ತು.

ಇದನ್ನೂ ಓದಿ: Mekedatu project ಮೇಕೆದಾಟು ಬಗ್ಗೆ ತಮಿಳುನಾಡು ಸರ್ಕಾರದಿಂದ ಹೊಸ ಕ್ಯಾತೆ ; ಯೋಜನೆ ಬಗ್ಗೆ ನಿರ್ಧಾರ ಕೈಗೊಳ್ಳುವಂತೆ ಸುಪ್ರೀಂಗೆ ಮನವಿ

‘ಪ್ರತಿಮೆಗಿಂತ ಪ್ರಗತಿಯಲ್ಲಿ ನಂಬಿಕೆ ಇಟ್ಟವರು ನಾವು’

ಪ್ರತಿಮೆಗಿಂತ ಪ್ರಗತಿಯಲ್ಲಿ ನಂಬಿಕೆ ಇಟ್ಟುಕೊಂಡ ಜನ ನಾವು. ಕೆಂಪೇಗೌಡ ಜಯಂತಿ ಕೇವಲ ಬೆಂಗಳೂರಿಗೆ ಸೀಮಿತ ಆಗಬಾರದು. ರಾಜ್ಯಮಟ್ಟದಲ್ಲಿ ಕೆಂಪೇಗೌಡ ಜಯಂತಿಯನ್ನು ಆಚರಣೆ ಮಾಡಬೇಕು. ಟೀಕೆ ಮಾಡುವವರು ಮಾಡುತ್ತಾ ಇರಲಿ. ಬಾವುಟ ಕಟ್ಟೋರು ಕಟ್ತಿರಲಿ, ಸೌಂಡ್ ಮಾಡೋರು ಮಾಡುತ್ತಿರಲಿ. ಧರಣಿ ಕೂರುತ್ತೇನೆ ಅನ್ನೋ ನಾಯಕರು ಧರಣಿ ಕೂರಲಿ. ನಾನು ಮಾತ್ರ ನಿಲ್ಲೋನಲ್ಲ, ಮುಂದಕ್ಕೆ ಹೋಗ್ತಾ ಇರುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:46 pm, Tue, 27 June 23

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us