ಎಷ್ಟು ಬೇಗ ರಾಹುಲ್ ಗಾಂಧಿಯನ್ನು ಸಂಸದ ಸ್ಥಾನದಿಂದ ತೆಗೆದರೋ ಅಷ್ಟೇ ಬೇಗ ತೀರ್ಪು ಬಂದಿದೆ; ಡಿಕೆ ಶಿವಕುಮಾರ್

ಇಡೀ ದೇಶದಲ್ಲಿ ಸುಪ್ರೀಂಕೋರ್ಟ್ ದೊಡ್ಡದು. ಯಾರಿಗಾದರೂ ಅನ್ಯಾಯವಾದರೆ ಸರಿಪಡಿಸುವ ಶಕ್ತಿ ಆ ಪೀಠಕ್ಕೆ ಇದೆ. ಇದಕ್ಕೆ ಇಂದಿನ ತೀರ್ಪೇ ಸಾಕ್ಷಿಯಾಗಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಎಷ್ಟು ಬೇಗ ರಾಹುಲ್ ಗಾಂಧಿಯನ್ನು ಸಂಸದ ಸ್ಥಾನದಿಂದ ತೆಗೆದರೋ ಅಷ್ಟೇ ಬೇಗ ತೀರ್ಪು ಬಂದಿದೆ; ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
Follow us
ಪ್ರಸನ್ನ ಗಾಂವ್ಕರ್​
| Updated By: Ganapathi Sharma

Updated on: Aug 04, 2023 | 9:40 PM

ಬೆಂಗಳೂರು: ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ನೀಡಿರುವ ಶಿಕ್ಷೆಗೆ ಸುಪ್ರೀಂ ಕೋರ್ಟ್​​ ತಡೆಯೊಡ್ಡಿರುವುದನ್ನು ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಸ್ವಾಗತಿಸಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಇದು ಪ್ರಜಾಪ್ರಭುತ್ವಕ್ಕೆ ಸಿಕ್ಕ ಗೆಲುವು ಎಂದು ಬಣ್ಣಿಸಿದ್ದು, ಜನರ ಆಯ್ಕೆಯನ್ನು ಪ್ರಶ್ನಿಸಿ ಹೊರಟಿದ್ದವರಿಗೆ ತಕ್ಕ ಉತ್ತರ ಸಿಕ್ಕಿದೆ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ಅವರನ್ನು ಎಷ್ಟು ಬೇಗ ಸಂಸದ ಸ್ಥಾನದಿಂದ ತೆಗೆದರೋ ಅಷ್ಟೇ ಬೇಗ ತೀರ್ಪು ಬಂದಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ರಾಹುಲ್ ಗಾಂಧಿ ಜೈಲು ಶಿಕ್ಷೆಗೆ ಸುಪ್ರೀಂಕೋರ್ಟ್​ ತಡೆ ನೀಡಿರುವುದು ಪ್ರಜಾಪ್ರಭುತ್ವಕ್ಕೆ ಸಿಕ್ಕ ಗೆಲುವು. ಜನರ ಆಯ್ಕೆಯನ್ನು ಪ್ರಶ್ನಿಸಿ ಹೊರಟಿದ್ದವರಿಗೆ ತಕ್ಕ ಉತ್ತರ ಸಿಕ್ಕಿದೆ. ಇಡೀ ದೇಶದಲ್ಲಿ ಸುಪ್ರೀಂಕೋರ್ಟ್ ದೊಡ್ಡದು. ಯಾರಿಗಾದರೂ ಅನ್ಯಾಯವಾದರೆ ಸರಿಪಡಿಸುವ ಶಕ್ತಿ ಆ ಪೀಠಕ್ಕೆ ಇದೆ. ಇದಕ್ಕೆ ಇಂದಿನ ತೀರ್ಪೇ ಸಾಕ್ಷಿಯಾಗಿದೆ ಎಂದು ಅವರು ಹೇಳಿದರು.

ದೇಶ, ಜನರ ಧ್ವನಿಯಾಗಿರುವ ರಾಹುಲ್ ಗಾಂಧಿಯನ್ನು ಹತ್ತಿಕ್ಕಲು ಆಗುವುದಿಲ್ಲ. ರಾಹುಲ್ ಗಾಂಧಿಗೆ ಸಂಬಂಧವೇ ಇಲ್ಲದಿದ್ದರೂ ಕೇಸ್ ಫೈಲ್ ಮಾಡಿಸಿದ್ದರು. ದೇಶದ ಜನತೆ ಈಗಾಗಲೇ ಅರ್ಥ ಮಾಡಿಕೊಂಡಿದ್ದಾರೆ. ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಇಡೀ ಪ್ರಪಂಚವೇ ನೋಡುತ್ತಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ಉಪನಾಮ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಬಿಗ್ ರಿಲೀಫ್; ಶಿಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

ಮಾನನಷ್ಟ ಮೊಕದ್ದಮೆ ಸಂಬಂಧ ಶಿಕ್ಷೆಯನ್ನು ತಡೆಹಿಡಿಯಲು ನಿರಾಕರಿಸಿದ ಗುಜರಾತ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಶಿಕ್ಷೆಗೆ ಮಧ್ಯಂತರ ತಡೆ ನೀಡಿದೆ. ಗುಜರಾತ್ ಸರ್ಕಾರದ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು 2019 ರಲ್ಲಿ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ