Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಂತಕ್ಕೆ ಆತ್ಮಹತ್ಯೆ ಮಾಡಿಕೊಂಡವರನ್ನೆಲ್ಲ ರೈತರು ಎನ್ನಲಾಗುತ್ತದೆಯೇ; ಡಿಕೆ ಶಿವಕುಮಾರ್ ವಿವಾದಿತ ಹೇಳಿಕೆ

DK Sivakumar's controversial statement; ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಡಿಕೆ ಶಿವಕುಮಾರ್, ‘ಎಲ್ಲಿದೆ ಹೇಳಿ ಆತ್ಮಹತ್ಯೆ? ಸ್ವಂತಕ್ಕೆ ಆತ್ಮಹತ್ಯೆ ಮಾಡಿಕೊಂಡವರನ್ನೆಲ್ಲ ರೈತರು ಎನ್ನಲಾಗುತ್ತದೆಯೇ? ಎಲ್ಲ ಸುಳ್ಳು’ ಎಂದು ಹೇಳಿದ್ದಾರೆ. ಡಿಕೆ ಶಿವಕುಮಾರ್ ಹೇಳಿಕೆಯ ವಿಡಿಯೋ ತುಣುಕನ್ನು ‘ಇಂಡಿಯಾ ಟುಡೆ’ ಹಂಚಿಕೊಂಡಿದೆ.

ಸ್ವಂತಕ್ಕೆ ಆತ್ಮಹತ್ಯೆ ಮಾಡಿಕೊಂಡವರನ್ನೆಲ್ಲ ರೈತರು ಎನ್ನಲಾಗುತ್ತದೆಯೇ; ಡಿಕೆ ಶಿವಕುಮಾರ್ ವಿವಾದಿತ ಹೇಳಿಕೆ
ಡಿಕೆ ಶಿವಕುಮಾರ್
Follow us
Ganapathi Sharma
|

Updated on: Sep 06, 2023 | 3:44 PM

ಬೆಂಗಳೂರು, ಸೆಪ್ಟೆಂಬರ್ 6: ಮದ್ಯಪಾನ ಮಾಡಿ ಮೃತಪಟ್ಟಿದ್ದರೂ ಪರಿಹಾರದ ಆಸೆಗೆ ರೈತರ ಆತ್ಮಹತ್ಯೆ ಎಂದು ಬಿಂಬಿಸುತ್ತಾರೆ ಎಂಬ ಸಚಿವ ಶಿವಾನಂದ ಪಾಟೀಲ್​ ಹೇಳಿಕೆಯ ವಿವಾದದ ಕಿಡಿ ಆರುವ ಮುನ್ನವೇ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಸಹ ಅದೇ ರೀತಿಯ ಹೇಳಿಕೆ ನೀಡಿ ಪ್ರತಿಪಕ್ಷಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಸ್ವಂತಕ್ಕೆ ಆತ್ಮಹತ್ಯೆ (ಅನ್ಯ ಕಾರಣಗಳಿಂದ ಎಂಬರ್ಥದಲ್ಲಿ) ಮಾಡಿಕೊಂಡವರನ್ನೆಲ್ಲ ರೈತರು ಎನ್ನಲಾಗುತ್ತದೆಯೇ ಎಂದು ಡಿಕೆ ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ. ಇದಕ್ಕೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಡಿಕೆ ಶಿವಕುಮಾರ್, ‘ಎಲ್ಲಿದೆ ಹೇಳಿ ಆತ್ಮಹತ್ಯೆ? ಸ್ವಂತಕ್ಕೆ ಆತ್ಮಹತ್ಯೆ ಮಾಡಿಕೊಂಡವರನ್ನೆಲ್ಲ ರೈತರು ಎನ್ನಲಾಗುತ್ತದೆಯೇ? ಎಲ್ಲ ಸುಳ್ಳು’ ಎಂದು ಹೇಳಿದ್ದಾರೆ. ಡಿಕೆ ಶಿವಕುಮಾರ್ ಹೇಳಿಕೆಯ ವಿಡಿಯೋ ತುಣುಕನ್ನು ‘ಇಂಡಿಯಾ ಟುಡೆ’ ಹಂಚಿಕೊಂಡಿದ್ದು, ಇದನ್ನು ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಸಮಾಜಾಜಿ ಮಾಧ್ಯಮ ಎಕ್ಸ್​​​​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕರ್ನಾಟಕದ ಸಚಿವರೊಬ್ಬರ ಹೇಳಿಕೆಯ ನಂತರ ಇದೀಗ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರೈತರ ಆತ್ಮಹತ್ಯೆಯನ್ನು ‘ನಕಲಿ’ ಎಂದು ಆರೋಪಿಸಿದ್ದಾರೆ! ನಕಲಿ ಆತ್ಮಹತ್ಯೆಯ ನಂತರ ಪರಿಹಾರ ಪಡೆಯಲು ಬದುಕುವುದು ಹೇಗೆ? ಇದು ಕೇವಲ ವಿಲಕ್ಷಣವಾದ ಕಾಮೆಂಟ್ ಅಲ್ಲ, ರೈತರ ಬಗ್ಗೆ ಭಾರೀ ಅವಹೇಳನಕಾರಿ ಕಾಮೆಂಟ್ ಆಗಿದೆ. ಗ್ರಾಮೀಣ ಸಂಕಷ್ಟ ಮತ್ತು ರೈತರ ಆತ್ಮಹತ್ಯೆಯನ್ನು ಕಾಂಗ್ರೆಸ್‌ ನಿರಾಕರಿಸುವಂತಿಲ್ಲ ಎಂದು ಅಮಿತ್ ಮಾಳವೀಯ ಎಕ್ಸ್​ ಪೋಸ್ಟ್​​ನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಕುಡಿದು ಸತ್ತಿದ್ದರೂ ಪರಿಹಾರದ ಆಸೆಗೆ ಆತ್ಮಹತ್ಯೆ ಅಂತಾರೆ: ಅನ್ನದಾತನ ಬಗ್ಗೆ ಶಿವಾನಂದ ಪಾಟೀಲ್ ಅವಹೇಳನ ಹೇಳಿಕೆ

ಹಾವೇರಿ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಪ್ರತಿಕ್ರಿಯಿಸಿ, ಒಬ್ಬರು ಕುಡಿದು ಕುಡಿದು ಸತ್ತಿದ್ದರು, ಹೃದಯಾಘಾತದಿಂದ ಸತ್ತವರೂ ಇದ್ದಾರೆ. ಆತ್ಮಹತ್ಯೆ ಅಂತ ದೂರು ಕೊಟ್ಟರೆ ಪರಿಹಾರ ಸಿಗುತ್ತೆ ಎಂಬ ದುರಾಸೆ ಸಂಬಂಧಿಕರದ್ದು ಎಂದು ಹೇಳಿದ್ದರು. ಇದಕ್ಕೆ ವ್ಯಾಪಕ ಆಕ್ಷೇಪ ವ್ಯಕ್ತವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ