ಕನ್ನಡ ಮಾಧ್ಯಮಕ್ಕೆ ಧಕ್ಕೆ ಆಗದಂತೆ ಕರ್ನಾಟಕ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಭಾಷಾ ಮಾಧ್ಯಮ ಅಳವಡಿಕೆ: ಡಿಡಿಪಿಐಗಳಿಗೆ ಅಧಿಕಾರ

2021-22ನೇ ಸಾಲಿನಲ್ಲಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಹೆಚ್ಚುವರಿಯಾಗಿ ಆಂಗ್ಲ ಮಾಧ್ಯಮ ಬೋಧನೆಗೆ ಅವಕಾಶ ನೀಡುವಂತೆ ವಿವಿಧ ಜಿಲ್ಲಾ ಉಪನಿರ್ದೇಶಕರುಗಳಿಂದ ಪ್ರಸ್ತಾವನೆ ಬಂದಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಇದನ್ನು ಅನುಮೋದಿಸಿ, ಆಯಾ ಡಿಡಿಪಿಐಗಳಿಗೇ ಅಧಿಕಾರ ಕಲ್ಪಿಸಿದೆ.

ಕನ್ನಡ ಮಾಧ್ಯಮಕ್ಕೆ ಧಕ್ಕೆ ಆಗದಂತೆ ಕರ್ನಾಟಕ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಭಾಷಾ ಮಾಧ್ಯಮ ಅಳವಡಿಕೆ: ಡಿಡಿಪಿಐಗಳಿಗೆ ಅಧಿಕಾರ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Aug 04, 2021 | 9:52 AM

ಬೆಂಗಳೂರು: ಕರ್ನಾಟಕ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಭಾಷಾ ಮಾಧ್ಯಮ ಅಳವಡಿಸಿಕೊಳ್ಳುವುದಕ್ಕೆ ಕೊನೆಗೂ ನಿರ್ದಿಷ್ಟ ರೂಪುರೇಷೆಯೊಂದಿಗೆ ಅನುಮತಿ ನೀಡಲಾಗಿದೆ. ಮುಖ್ಯವಾಗಿ ರಾಜ್ಯ ಭಾಷೆ ಕನ್ನಡಕ್ಕೆ ಆಗದಂತೆ ಜೊತೆಗೆ ರಾಜ್ಯ ಸರ್ಕಾರಕ್ಕೆ ಹೆಚ್ಚು‘ವರಿ’ಯಾಗಿ ಆರ್ಥಿಕ ಹೊರೆಯೂ ಆಗದಂತೆ ಆಯಾ ಜಿಲ್ಲೆಗಳ ಶಾಲೆಗಳಲ್ಲಿ ಆಂಗ್ಲ ಭಾಷಾ ಮಾಧ್ಯಮ ಅಳವಡಿಸಿಕೊಳ್ಳುವುದಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರಿಗೆ (ಡಿಡಿಪಿಐ) ಅಧಿಕಾರ ನೀಡಲಾಗಿದೆ.

ಒಟ್ಟು 13 ಷರತ್ತುಗಳನ್ನು ವಿಧಿಸಿ, ಕರ್ನಾಟಕ ರಾಜ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಈಗಿರುವ ಕನ್ನಡ ಮಾಧ್ಯಮ ವಿಭಾಗದ ಜೊತೆಗೆ ಆಂಗ್ಲ ಮಾಧ್ಯಮ ವಿಭಾಗವನ್ನೂ ಆರಂಭಿಸುವ ಅಧಿಕಾರವನ್ನು ಆಯಾ ಜಿಲ್ಲೆಯ ಜಿಲ್ಲಾ ಉಪನಿರ್ದೇಶಕರಿಗೆ (ಡಿಡಿಪಿಐ) ನೀಡಲಾಗಿದೆ.

ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ (2021-22ನೇ ಸಾಲು) ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಹೆಚ್ಚುವರಿಯಾಗಿ ಆಂಗ್ಲ ಮಾಧ್ಯಮ ಬೋಧನೆಗೆ ಅವಕಾಶ ನೀಡುವಂತೆ ವಿವಿಧ ಜಿಲ್ಲಾ ಉಪನಿರ್ದೇಶಕರುಗಳಿಂದ ಪ್ರಸ್ತಾವನೆ ಬಂದಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಇದನ್ನು ಅನುಮೋದಿಸಿ, ಆಯಾ ಡಿಡಿಪಿಐಗಳಿಗೇ ಅಧಿಕಾರ ಕಲ್ಪಿಸಿದೆ.

ಹೆಚ್ಚುವರಿಯಾಗಿ ಆಂಗ್ಲ ಮಾಧ್ಯಮ ಆರಂಭಿಸಲು ಒಂದಷ್ಟು ಪ್ರಮುಖ ಷರತ್ತುಗಳು: ಸರ್ಕಾರಿ ಶಾಲೆಯಲ್ಲಿ 1ರಿಂದ 7 ಅಥವಾ 8ನೇ ತರಗತಿವರೆಗೆ ಶಾಲೆಗಳು ನಡೆಯುತ್ತಿರಬೇಕು. ಶಾಲೆಯಲ್ಲಿ ಆಸಕ್ತ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರಬೇಕು. ಶಾಲೆಯಲ್ಲಿ ಹಾಲಿ ಇರುವ ತರಗತಿ ಕೊಠಡಿ, ಕಟ್ಟಡ ಮತ್ತು ಮೂಲಸೌಕರ್ಯದಲ್ಲೇ ಆಂಗ್ಲ ಮಾಧ್ಯಮದ ಹೆಚ್ಚುವರಿ ವಿಭಾಗ ನಡೆಸಬೇಕು. ಆಯಾ ಶಾಲೆಯಲ್ಲಿ ಈಗಿರುವ ಶಿಕ್ಷಕರನ್ನೇ ಹೊಂದಾಣಿಕೆ ಮಾಡಿಕೊಂಡು ಆಂಗ್ಲ ವಿಭಾಗ ನಡೆಸಬೇಕು. ಇದಕ್ಕೆ ಶಿಕ್ಷಕರು, ಪೋಷಕರು, ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ಸದಸ್ಯರ ಸಹಮತ ಇರಬೇಕು ಎಂಬುದು ಸೇರಿ 13 ಷರತ್ತುಗಳನ್ನು ವಿಧಿಸಲಾಗಿದೆ.

ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಸರ್ಕಾರಿ ಶಾಲೆಗಳು: ದಾಖಲಾತಿ ಪ್ರಮಾಣದಲ್ಲಿ ಹೆಚ್ಚಳ (karnataka ddpi authorised to run english medium schools in government schools all districts)

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್