Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ದ್ವೇಷ ಭಾಷಣ ಮಾಡಿದ್ರ 3 ವರ್ಷ ಜೈಲು: ಹೊಸ ಬಿಲ್ ತರಲು ಸರ್ಕಾರ ಸಿದ್ಧತೆ!

ಪ್ರಸ್ತುತ ರಾಜಕಾರಣದಲ್ಲಿ ಜಾತಿ, ಧರ್ಮ, ಭಾಷೆ ಸೇರಿ ವಿವಿಧ ವಿಷಯಗಳ ಮೇಲೆ ದ್ವೇಷ ಹರಡುವ ಭಾಷಣದ ಅಬ್ಬರ ಜೋರಾಗಿದೆ. ಆಡಳಿತ ಹಾಗೂ ವಿಪಕ್ಷಗಳು ಒಂದಲ್ಲ ಒಂದು ವಿಚಾರದಲ್ಲಿ ಜಾತಿ, ಧರ್ಮ, ಭಾಷೆಗೆ ತಳಕು ಹಾಕಿಕೊಂಡೇ ಟೀಕಿಸುತ್ತಾರೆ. ಇದಕ್ಕೆ ಕರ್ನಾಟಕ ರಾಜಕಾರಣ ಹೊರತಾಗಿಲ್ಲ. ಕರ್ನಾಟಕ ರಾಜ್ಯ ರಾಜಕಾರಣದಲ್ಲೂ ಸಹ ದ್ವೇಷ ಭಾಷಣ ಹೆಚ್ಚಾಗಿದ್ದು, ಇದೀಗ ಇದಕ್ಕೆ ಕಡಿವಾಣ ಹಾಕಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ.

ಕರ್ನಾಟಕದಲ್ಲಿ ದ್ವೇಷ ಭಾಷಣ ಮಾಡಿದ್ರ 3 ವರ್ಷ ಜೈಲು: ಹೊಸ ಬಿಲ್ ತರಲು ಸರ್ಕಾರ ಸಿದ್ಧತೆ!
ಪ್ರಾತಿನಿಧಿಕ ಚಿತ್ರ
Follow us
ರಮೇಶ್ ಬಿ. ಜವಳಗೇರಾ
|

Updated on: Feb 07, 2025 | 9:20 AM

ಬೆಂಗಳೂರು (ಫೆಬ್ರವರಿ .07): ಕರ್ನಾಟಕದಲ್ಲಿ ಜಾತಿ, ಧರ್ಮ, ಭಾಷೆ ಸೇರಿ ವಿವಿಧ ವಿಷಯಗಳ ಮೇಲೆ ದ್ವೇಷ ಹರಡುವ ಭಾಷಣ ಮಾಡುವುದನ್ನು ನಿಯಂತ್ರಿಸಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿದ್ದು, ಈ ಬಗ್ಗೆ ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಹೊಸ ವಿಧೇಯಕ ಮಂಡಿಸಲು ಕಾನೂನು ಇಲಾಖೆ ಮುಂದಾಗಿದೆ. ಹೌದು.. ರಾಜ್ಯದಲ್ಲಿ ದ್ವೇಷ ಭಾಷಣ ಸಾಬೀತಾದರೆ 3 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ನಗದು ದಂಡ ವಿಧಿಸಲು ಅವಕಾಶ ಮಾಡಿಕೊಡುವಂಥ ದ್ವೇಷ ಅಪರಾಧಗಳು ಮತ್ತು ದ್ವೇಷ ಭಾಷಣ (ಹೋರಾಟ, ತಡೆಗಟ್ಟುವಿಕೆ ಮತ್ತು ಶಿಕ್ಷೆ) ವಿಧೇಯಕ-2025 ಕರಡನ್ನು ಕಾನೂನು ಇಲಾಖೆ ಸಿದ್ಧಪಡಿಸುತ್ತಿದೆ.

ಇದರಡಿ ಜಾತಿ, ಧರ್ಮ ಆಧರಿಸಿ ದ್ವೇಷ ಭಾಷಣ ಮಾಡುವುದು ಶಿಕ್ಷಾರ್ಹ ಅಪರಾಧವಾಗಲಿದೆ. ಧಾರ್ಮಿಕ, ಜನಾಂಗೀಯ, ಜಾತಿ ಅಥವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮ ಸ್ಥಳ, ಭಾಷೆ, ಅಂಗವೈಕಲ್ಯ ಬುಡಕಟ್ಟುವಿನ ಕುರಿತು ದ್ವೇಷ ಭಾಷಣ ಮಾಡುವಂತಿಲ್ಲ ಎಂಬುದನ್ನು ಕರಡಿನಲ್ಲಿ ಪ್ರಸ್ತಾಪಿಸಲಾಗಿದೆ. ಈಗಾಗಲೇ ಭಾರತೀಯ ನಾಗರಿಕ ದಂಡ ಸಂಹಿತೆಯಲ್ಲಿ ದ್ವೇಷ ಭಾಷಣ ನಿಷಿದ್ಧವಾದರೂ ಇದಕ್ಕೆ ಕಟ್ಟುನಿಟ್ಟಿನ ಕಡಿವಾಣ ಹಾಕಲು ವಿಸ್ತೃತವಾಗಿ ಕರಡು ಸಿದ್ಧಪಡಿಸಲಾಗಿದೆ ಎಂದು ಕಾನೂನು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ 16ನೇ ಬಜೆಟ್​​ಗೆ ಕೌಂಟ್ ಡೌನ್​: ರಾಜ್ಯದ ಇತಿಹಾಸದಲ್ಲೇ ಮೊದಲ ಬಿಗ್​ ಬಜೆಟ್

ಸದ್ಯಕ್ಕೆ ಕರಡು ಸಿದ್ಧಪಡಿಸಿದ್ದು, ಕರಡು ಪ್ರತಿ ಅಂತಿಮಗೊಳಿಸಿದ ಬಳಿಕ ಸಚಿವ ಸಂಪುಟದ ಅನುಮೋದನೆ ಪಡೆಯಲಾಗುತ್ತೆ. ಬಳಿಕ ಮುಂದಿನ ಬಜೆಟ್‌ ಅಧಿವೇಶನದಲ್ಲಿ ಈ ಬಗ್ಗೆ ವಿಧೇಯಕ ಮಂಡಿಸಲು ಉದ್ದೇಶಿಸಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಸದಸ್ಯರ ಅಭಿಪ್ರಾಯದಂತೆ ಮುಂದುವರೆಯಲು ನಿರ್ಧರಿಸಲಾಗಿದೆ. ಹೀಗಾಗಿ ವಿಧೇಯಕ ಮಂಡನೆಯಾಗುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ನೋಡಬೇಕಿದೆ.

ಕರಡಿನಲ್ಲಿ ಏನಿದೆ?

ಭಾಷೆ, ಧಾರ್ಮಿಕ, ಜನಾಂಗೀಯ, ಜಾತಿ ಅಥವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮ ಸ್ಥಳ ವಿಚಾರವಾಗಿ ದ್ವೇಷ ಭಾಷಣ ಮಾಡುವಂತಿಲ್ಲ. ಜತೆಗೆ ಯಾವುದೇ ವ್ಯಕ್ತಿಗೆ ಹಾನಿ ಮಾಡುವ, ದ್ವೇಷ ಉತ್ತೇಜಿಸುವ, ಅದನ್ನು ಪ್ರಚಾರ ಮಾಡುವ ವ್ಯಕ್ತಿ ಅಥವಾ ಗುಂಪಿಗೆ ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ಹಾಗೂ 5 ಸಾವಿರ ರು.ವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ. ಇನ್ನು ಯಾವುದೇ ಭಾವನಾತ್ಮಕ, ಮಾನಸಿಕ, ದೈಹಿಕ, ಸಾಮಾಜಿಕ ಅಥವಾ ಆರ್ಥಿಕ ಹಾನಿಯೂ ಶಿಕ್ಷೆ ವ್ಯಾಪ್ತಿಗೆ ತರಲು ಕರಡಿನಲ್ಲಿ ಪ್ರಸ್ತಾಪಿಸಲಾಗಿದೆ.

ಯಾವುದೇ ದತ್ತಾಂಶ, ಸಂದೇಶ, ಪಠ್ಯ ಚಿತ್ರಗಳು, ಧ್ವನಿ, ಧ್ವನಿ ಸಂಕೇತಗಳು, ಕಂಪ್ಯೂಟರ್ ಪ್ರೋಗ್ರಾಂ, ಸಾಫ್ಟ್‌ವೇರ್ ಮತ್ತು ಡೇಟಾಬೇಸ್‌ ಕೂಡ ಕಾನೂನು ವ್ಯಾಪ್ತಿಗೆ ತರಲು ಉದ್ದೇಶಿಸಲಾಗಿದೆ. ಇದರಡಿ ಯಾವುದೇ ರೀತಿಯಲ್ಲಿ ದ್ವೇಷ ಹರಡಲು ಬಳಕೆಯಾಗುವ ವ್ಯಕ್ತಿ, ಪ್ರಸಾರ ಮಾಡುವ ವಾಹಿನಿಗಳು, ಸಾಮಾಜಿಕ ಮಾಧ್ಯಮ ವೇದಿಕೆಗಳು, ಸರ್ಚ್‌ ಎಂಜಿನ್‌ಗಳನ್ನು ಕೂಡ ಕಾನೂನು ವ್ಯಾಪ್ತಿಗೆ ತರಲು ಉದ್ದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ