AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನರ್ಹರ ಬಳಿ 14 ಲಕ್ಷ ಪಡಿತರ ಕಾರ್ಡ್​! ರದ್ದಾಗಲಿದೆ ಇನ್ನಷ್ಟು ಮಂದಿಯ ರೇಷನ್

ಕರ್ನಾಟಕದಲ್ಲಿ ಅನರ್ಹರೂ ಕೂಡ ಬಿಪಿಎಲ್ ಪಡಿತರ ಕಾರ್ಡ್​ ಹೊಂದಿದ್ದು, ಸರ್ಕಾರದಿಂದ ಬಡವರಿಗೆ ದೊರೆಯುವ ಅನೇಕ ಸವಲತ್ತುಗಳನ್ನು ಪಡೆಯುತ್ತಿರುವುದನ್ನು ಗಮನಿಸಿರುವ ಆಹಾರ ಇಲಾಖೆ ಕಠಿಣ ಕ್ರಮ ಆರಂಭಿಸಿದೆ. ವಿವಿಧ ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಿ ಅನರ್ಹರ ಕಾರ್ಡ್​​ಗಳನ್ನು ರದ್ದುಗೊಳಿಸಲಾಗುತ್ತಿದೆ. ಇದೀಗ ಒಟ್ಟು 14 ಲಕ್ಷ ಕಾರ್ಡ್​​ಗಳನ್ನು ಗುರುತಿಸಿರುವ ಬಗ್ಗೆ ಇಲಾಖೆ ಮಾಹಿತಿ ನೀಡಿದೆ.

ಅನರ್ಹರ ಬಳಿ 14 ಲಕ್ಷ ಪಡಿತರ ಕಾರ್ಡ್​! ರದ್ದಾಗಲಿದೆ ಇನ್ನಷ್ಟು ಮಂದಿಯ ರೇಷನ್
ರದ್ದಾಗಲಿದೆ ಇನ್ನಷ್ಟು ರೇಷನ್ ಕಾರ್ಡ್: ಲಿಸ್ಟಲ್ಲಿ ನಿಮ್ಮದೂ ಇದೆಯೇ ನೋಡಿ, ಅಹರ್ನತೆ ಮಾನದಂಡ ಇಲ್ಲಿದೆ
Ganapathi Sharma
|

Updated on: Oct 22, 2024 | 9:40 AM

Share

ಬೆಂಗಳೂರು, ಅಕ್ಟೋಬರ್ 22: ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ರಾಜ್ಯದಲ್ಲಿ ಸುಮಾರು 14 ಲಕ್ಷ ಅನರ್ಹ ಪಡಿತರ ಚೀಟಿಗಳನ್ನು ಗುರುತಿಸಿದೆ ಎಂದು ಸಚಿವ ಕೆಎಚ್ ಮುನಿಯಪ್ಪ ಮಾಹಿತಿ ನೀಡಿದ್ದಾರೆ. ಅವರು ನೀಡಿದ ಮಾಹಿತಿಯ ಪ್ರಕಾರ, ಅಧಿಕಾರಿಗಳು 13.87 ಲಕ್ಷ ಅನರ್ಹ ಕಾರ್ಡ್‌ಗಳನ್ನು ಗುರುತಿಸಿದ್ದು, ಅವುಗಳಲ್ಲಿ 3.64 ಲಕ್ಷ ರದ್ದುಗೊಳಿಸಲಾಗಿದೆ. ಇದರಲ್ಲಿ ಸರ್ಕಾರಿ ನೌಕರರ 2,964 ಕಾರ್ಡ್‌ಗಳನ್ನು ರದ್ದುಗೊಳಿಸಲಾಗಿದೆ.

ರಾಜ್ಯದಲ್ಲಿ 4.35 ಕೋಟಿ ಫಲಾನುಭವಿಗಳು 1.51 ಕೋಟಿ ಪಡಿತರ ಕಾರ್ಡ್ ಮೂಲಕ ಸರ್ಕಾರದ ಸವಲತ್ತುಗಳನ್ನು ಪಡೆಯುತ್ತಿದ್ದಾರೆ ಎಂದು ಮುನಿಯಪ್ಪ ತಿಳಿಸಿದ್ದಾರೆ.

ಅಹರ್ನತೆಗೆ ಮಾನದಂಡವೇನು?

6 ತಿಂಗಳವರೆಗೆ ಪಡಿತರ ಪಡೆಯದಿರುವವರು, ಒಂದು ವರ್ಷದವರೆಗೆ ನೇರ ನಗದು ವರ್ಗಾವಣೆ ಸೌಲಭ್ಯ ಪಡೆಯದಿರುವವರು ಮತ್ತು ನಿಗದಿಪಡಿಸಿದ್ದಕ್ಕಿಂತ ಹೆಚ್ಚಿನ ವಾರ್ಷಿಕ ಆದಾಯ ಹೊಂದಿರುವವರನ್ನು ಅನರ್ಹರೆಂದು ಪರಿಗಣಿಸಲಾಗುತ್ತಿದೆ. ಅನರ್ಹ ಪಡಿತರ ಚೀಟಿಗಳ ಸಂಖ್ಯೆ 20 ಲಕ್ಷಕ್ಕಿಂತ ಹೆಚ್ಚಿರಬಹುದು ಎಂದು ಸಚಿವರು ಅಂದಾಜಿಸಿದ್ದಾರೆ.

ಅರ್ಹ ಫಲಾನುಭವಿಗಳು ಸೌಲಭ್ಯ ಪಡೆಯದೇ ಕಾರ್ಡ್​ ರದ್ದಾದಲ್ಲಿ ಮುಂದಿನ ದಿನಗಳಲ್ಲಿ ಹೊಸ ಕಾರ್ಡ್‌ಗಳನ್ನು ಪಡೆಯಲು ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ಅನ್ನಭಾಗ್ಯ ಹಣ ವರ್ಗಾವಣೆ ಮುಂದುವರಿಕೆ

ಪ್ರತಿ ಅನ್ನಭಾಗ್ಯ ಫಲಾನುಭವಿಗೆ ಐದು ಕೆಜಿ ಅಕ್ಕಿ ಬದಲಿಗೆ 170 ರೂ.ಗಳ ನೇರ ನಗದು ವರ್ಗಾವಣೆ (ಡಿಬಿಟಿ) ಮುಂದುವರಿಯಲಿದೆ ಎಂದು ಮುನಿಯಪ್ಪ ತಿಳಿಸಿದರು. ರಾಜ್ಯಕ್ಕೆ ಕೆಜಿ ಅಕ್ಕಿಯನ್ನು 28 ರೂ.ಗೆ ಮಾರಾಟ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದೂ ಅವರು ಹೇಳಿದರು. ಹೆಚ್ಚುವರಿಯಾಗಿ ಅಗತ್ಯವಿರುವ 20,000 ಮೆಟ್ರಿಕ್ ಟನ್ ಅಕ್ಕಿಯನ್ನು ರಾಜ್ಯ ಸರ್ಕಾರ ಬೇರೆಡೆಗಳಿಂದ ಸಂಗ್ರಹಿಸಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕಾರು, ಟ್ರ್ಯಾಕ್ಟರ್​​ ಇದ್ದೂ ಬಿಪಿಎಲ್​ ಕಾರ್ಡ್ ಹೊಂದಿದವರಿಗೆ ಸರ್ಕಾರದಿಂದ ಖಡಕ್​ ಸೂಚನೆ

2023-24ರಲ್ಲಿ ಕರ್ನಾಟಕಕ್ಕೆ ವಾರ್ಷಿಕ 27.48 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಕೆಜಿಗೆ 34.6 ರೂಪಾಯಿಗೆ ನೀಡಲು ಕೇಂದ್ರ ನಿರಾಕರಿಸಿತ್ತು. ಹೀಗಾಗಿ ರಾಜ್ಯ ಸರ್ಕಾರವು ಚುನಾವಣಾ ಪೂರ್ವ ಭರವಸೆಯಂತೆ 5 ಕೆಜಿ ಅಕ್ಕಿ ಬದಲಿಗೆ 170 ರೂಪಾಯಿ ನೀಡಲು ನಿರ್ಧರಿಸಿತ್ತು.

ಇದನ್ನೂ ಓದಿ: ಆಹಾರ ವ್ಯರ್ಥ ಮಾಡ್ತೀರಾ? ಹಾಗಿದ್ರೆ ಎಚ್ಚರ! ಬರಲಿದೆ ಹೊಸ ಕಾನೂನು

ಹೋಟೆಲ್, ಸಮುದಾಯ ಭವನಗಳಲ್ಲಿ ಆಹಾರ ಪೋಲು ಮಾಡುವುದನ್ನು ತಡೆಯಲು ಕಾನೂನು ರೂಪಿಸುವಂತೆಯೂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುನಿಯಪ್ಪ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ