AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ VIP ಸಂಚಾರ ವೇಳೆ ಸೈರನ್ ಬಳಕೆ ನಿಷೇಧ: ಪೊಲೀಸ್ ಮಹಾನಿರ್ದೇಶಕ ಮಹತ್ವದ ಆದೇಶ

ಕರ್ನಾಟಕದಲ್ಲಿ ವಿವಿಐಪಿ (VIP) ಸಂಚಾರ ವೇಳೆ ಸೈರನ್ ಬಳಕೆಗೆ ಬ್ರೇಕ್ ಹಾಕಲಾಗಿದೆ. ಗಣ್ಯರ ಕಾರುಗಳ ಮುಂಗಾವಲು ಹಾಗೂ ಬೆಂಗಾವಲು ವಾಹನಗಳಿಗೆ ಸೈರನ್ ಬಳಸದಂತೆ ಕರ್ನಾಟಕ ಪೊಲೀಸ್ ನಿರ್ದೇಶಕ ಆದೇಶ ಹೊರಡಿಸಿದ್ದಾರೆ. ಸೈರನ್ ಬಳಕೆಯಿಂದ ಗಣ್ಯ ವ್ಯಕ್ತಿಗಳಿಗೆ ಅಪಾಯ ಉಂಟಾಗುವ ಸಾಧ್ಯತೆ ಇರುತ್ತದೆ ಎನ್ನುವ ಕಾರಣಕ್ಕೆ ಈ ಕ್ರಮಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕರ್ನಾಟಕದಲ್ಲಿ VIP ಸಂಚಾರ ವೇಳೆ ಸೈರನ್ ಬಳಕೆ ನಿಷೇಧ: ಪೊಲೀಸ್ ಮಹಾನಿರ್ದೇಶಕ ಮಹತ್ವದ ಆದೇಶ
Siren
Shivaprasad B
| Updated By: ರಮೇಶ್ ಬಿ. ಜವಳಗೇರಾ|

Updated on:Jul 21, 2025 | 3:49 PM

Share

ಬೆಂಗಳೂರು, (ಜುಲೈ 21): ಕರ್ನಾಟಕದಲ್ಲಿ ಗಣ್ಯ ವ್ಯಕ್ತಿಗಳು( VIP) ಸಂಚಾರ ವೇಳೆ ಸೈರನ್ (siren) ಬಳಕೆ ನಿಷೇಧಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕ(ಡಿಜಿ, ಐಜಿಪಿ ) ಡಾ.ಎಂ.ಎ.ಸಲೀಂ(Karnataka DG And IGP M A Saleem) ಅವರು ಇಂದು (ಜುಲೈ 21) ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಸುರಕ್ಷತೆ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣ ದೃಷ್ಟಿಯಿಂದ ಸೈರನ್​ ನಿಷೇಧಿಸಲಾಗಿದೆ. ಹಾಗೇ ಸೈರನ್ ಬಳಕೆ ಮಾಡುವುದರಿಂದ ಗಣ್ಯ ವ್ಯಕ್ತಿಗಳು ಯಾವ ರಸ್ತೆಯಲ್ಲಿ ಚಲಿಸುತ್ತಿದ್ದಾರೆ ಎಂಬ ಬಗ್ಗೆ ಅನಧಿಕೃತ ವ್ಯಕ್ತಿಗಳಿಗೆ ಮಾಹಿತಿ ರವಾನೆ. ಈ ಹಿನ್ನೆಲೆಯಲ್ಲಿ ಸೈರನ್ ಬಳಕೆಯಿಂದ ಗಣ್ಯ ವ್ಯಕ್ತಿಗಳಿಗೆ ಅಪಾಯ ಉಂಟಾಗುವ ಸಾಧ್ಯತೆ ಇರುತ್ತದೆ. ಇದರಿಂದ ವಿಐಪಿ ಸಂಚಾರದ ಸಂದರ್ಭದಲ್ಲಿ ವಾಹನಗಳ ಸೈರನ್ ಬಳಕೆಗೆ ಕಡಿವಾಣ ಹಾಕುವಂತೆ ಡಿಜಿ, ಐಜಿಪಿ ಆದೇಶಿಸಿದ್ದಾರೆ.

ಸಾರ್ವಜನಿಕ ರಸ್ತೆಗಳ ಮೇಲೆ ಹಠಾತ್ತಾಗಿ ಸೈರನ್ ಬಳಸುವುದರಿಂದ ಇತರ ವಾಹನ ಚಾಲಕರಿಗೆ ತೊಂದರೆಯಾಗುತ್ತದೆ. ಸೈರನ್ ಬಳಕೆಯಿಂದ ವಾಹನವನ್ನು ಅಡ್ಡಾದಿಡ್ಡಿಯಾಗಿ ಚಲಿಸಿ ಬೆಂಗಾವಲು ಅಪಘಾತ ಉಂಟಾಗುವ ಸಾಧ್ಯತೆ ಇರುತ್ತದೆ. ವಿಐಪಿ ಸಂಚಾರದ ವೇಳೆ, ತುರ್ತು ಚಲನವಲನದ ಅವಶ್ಯಕತೆಗಳಿಗೆ ವೈರ್‌ಲೆಸ್ ಕಮ್ಯುನಿಕೇಶನ್ ಮುಖಾಂತರ ಮಾಹಿತಿ ವಿನಿಮಯ ಮಾಡಬೇಕು. ಸೈರನ್‌ಗಳನ್ನು ಕೇವಲ ಅಂಬ್ಯುಲೆನ್ಸ್, ಪೊಲೀಸ್ , ಅಗ್ನಿಶಾಮಕ ವಾಹನಗಳು ತುರ್ತು ಪರಿಸ್ಥಿತಿಗಳಲ್ಲಿ ಮಾತ್ರ ಬಳಸಬೇಕೆಂದು ಡಿಜಿ, ಐಜಿಪಿ ಎಂ.ಎ.ಸಲೀಂ  ಆದೇಶದಲ್ಲಿ ಸೂಚಿಸಿದ್ದಾರೆ.

ಇದನ್ನೂ ಓದಿ: ಇಡೀ ಬೆಂಗಳೂರಿನಲ್ಲಿ 3% ಮಾತ್ರ ಹಸಿರು ಪರಿಸರ: ಐಐಎಸ್ಸಿ ತಜ್ಞರ ವರದಿಯ ಶಾಕಿಂಗ್ ಅಂಶ ಬಹಿರಂಗ

ಸುಪ್ರೀಂಕೋರ್ಟ್ ಆದೇಶದ ಪ್ರಕಾರ ತುರ್ತು ಸೇವೆಯ ವಾಹನಗಳನ್ನು ಬಿಟ್ಟು ಇನ್ಯಾರೂ ಸೈರನ್ ಬಳಸುವಂತಿಲ್ಲ. ಹಾಗೆಯೇ ಪೊಲಿಸ್ ಸೈರನ್ ಬಳಸುವಂತಿಲ್ಲ. ತುರ್ತು ಸಂದರ್ಭಗಳಲ್ಲಿ ಮಾತ್ರ, ಪೊಲೀಸ್ ಅಂಬ್ಯುಲೆನ್ಸ್, ಅಗ್ನಿ ಶಾಮದಳ ವಾಹನಗಳು ಮಾತ್ರ ಈ ಸೈರನ್ ಬಳಕೆ ಮಾಡಬಹುದಾಗಿದೆ. ಇನ್ನು ನಿಯಮ ಉಲ್ಲಂಘಿಸಿದರೆ ಮೋಟರ್ ವಾಹನ ಕಾ್ಯದೆ 190(2( ಪ್ರಕಾರ ದಂಡ ಜತೆಗೆ ಮೂರು ತಿಂಗಳು ಜೈಲು ಶಿಕ್ಷೆಯನ್ನು ವಿಧಿಸಬಹುದು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:40 pm, Mon, 21 July 25

ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
ಬಿಬಿಎಂಪಿ ಚುನಾವಣೆ ಆದಷ್ಟು ಬೇಗ ನಡೆಯಲಿದೆ: ರಿಜ್ವಾನ್ ಅರ್ಷದ್
ಬಿಬಿಎಂಪಿ ಚುನಾವಣೆ ಆದಷ್ಟು ಬೇಗ ನಡೆಯಲಿದೆ: ರಿಜ್ವಾನ್ ಅರ್ಷದ್
ನಿಂತಿದ್ದ ಖಾಸಗಿ ಶಾಲಾ ಬಸ್​​​​ಗೆ ಬೆಂಕಿ; ವ್ಯಕ್ತಿ ಅನುಮಾನಾಸ್ಪದ ಸಾವು
ನಿಂತಿದ್ದ ಖಾಸಗಿ ಶಾಲಾ ಬಸ್​​​​ಗೆ ಬೆಂಕಿ; ವ್ಯಕ್ತಿ ಅನುಮಾನಾಸ್ಪದ ಸಾವು