AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಕೇಸರೀಕರಣ ಚರ್ಚೆ; ಇಲಾಖೆ, ಸರ್ಕಾರದ ಆಂತರಿಕ ವಿಷಯ ಎಂದ ಐಜಿಪಿ ಅಲೋಕ್ ಮೋಹನ್

ಕೇಸರೀಕರಣದ ಬಗ್ಗೆ ಚರ್ಚೆಯಾಗಿರುವುದು ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆಯ ಆಂತರಿಕ ವಿಷಯ ಎಂದು ಐಜಿಪಿ ಅಲೋಕ್ ಮೋಹನ್ ಹೇಳಿದ್ದಾರೆ.

ಪೊಲೀಸ್ ಕೇಸರೀಕರಣ ಚರ್ಚೆ; ಇಲಾಖೆ, ಸರ್ಕಾರದ ಆಂತರಿಕ ವಿಷಯ ಎಂದ ಐಜಿಪಿ ಅಲೋಕ್ ಮೋಹನ್
ಐಜಿಪಿ ಅಲೋಕ್ ಮೋಹನ್
Ganapathi Sharma
|

Updated on: May 25, 2023 | 9:26 PM

Share

ಬೆಂಗಳೂರು: ಕಳೆದ ಕೆಲವು ವರ್ಷಗಳಿಂದ ಪೊಲೀಸರು ಬಿಜೆಪಿ ಪರ ಇದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಆರೋಪ ಮಾಡಿರುವುದಕ್ಕೆ ಸಂಬಂಧಿಸಿ ಸೃಷ್ಟಿಯಾಗಿರುವ ವಿವಾದಕ್ಕೆ ತೇಪೆ ಹಚ್ಚಲು ಇತ್ತೀಚೆಗಷ್ಟೇ ಡಿಜಿ ಮತ್ತು ಐಜಿಪಿಯಾಗಿ ಅಧಿಕಾರ ವಹಿಸಿಕೊಂಡ ಅಲೋಕ್ ಮೋಹನ್ (DG & IGP Alok Mohan) ಮುಂದಾಗಿದ್ದಾರೆ. ಕೇಸರೀಕರಣದ ಬಗ್ಗೆ ಚರ್ಚೆಯಾಗಿರುವುದು ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆಯ ಆಂತರಿಕ ವಿಷಯ ಎಂದು ಅವರು ಗುರುವಾರ ಹೇಳಿದ್ದಾರೆ. ಪೊಲೀಸರು ಮತ್ತು ಸರ್ಕಾರದ ನಡುವಿನ ಸಭೆಯ ಬಗ್ಗೆ ನಾನು ಏನನ್ನೂ ಹೇಳಲಾರೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಪೊಲೀಸ್ ಇಲಾಖೆಯ ಕೇಸರಿಕರಣ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉನ್ನತ ಪೊಲೀಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿರುವುದು ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿತ್ತು. ಮಂಗಳೂರಿನಲ್ಲಿ ಪೊಲೀಸರೇ ಕೇಸರಿ ಶಾಲು ಹಾಕುತ್ತೀರಿ ಅಂದರೆ ಹೇಗೆ? ಈ‌ ಸಭೆಗೂ ಕೇಸರಿ ಶಾಲು ಹಾಕಿಕೊಂಡೇ ಬರಬೇಕಾಗಿತ್ತು. ನಮ್ಮ ಸರ್ಕಾರದಲ್ಲಿ ಪೊಲೀಸ್ ಇಲಾಖೆಯನ್ನು ಕೇಸರೀಕರಣ ಮಾಡಲು ನಾವು ಬಿಡುವುದಿಲ್ಲ ಎಂದು ಡಿಕೆ ಶಿವಕುಮಾರ್ ಇತ್ತೀಚೆಗೆ ಪೊಲೀಸರಿಗೆ ಎಚ್ಚರಿಕೆ ನೀಡಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಬಿಜೆಪಿ ನಾಯಕ ಆರಗ ಜ್ಞಾನೇಂದ್ರ, ಕಾಂಗ್ರೆಸ್ ಸರ್ಕಾರವು ಪೊಲೀಸ್ ಇಲಾಖೆಯನ್ನು ಕಾಂಗ್ರೆಸ್ಸೀಕರಣ ಮಾಡಲು ಹೊರಟಿದೆ ಎಂದು ಟೀಕಿಸಿದ್ದರು.

ಸಾಂವಿಧಾನಾತ್ಮಕವಾಗಿ ಎಲ್ಲಾ ಇಲಾಖೆಗಳಲ್ಲೂ ಪ್ರತೀ ನಾಗರಿಕನಿಗೂ ಧರ್ಮದ ಅನುಷ್ಠಾನದ ಹಕ್ಕಿದೆ. ಹತ್ತಾರು ವರ್ಷಗಳಿಂದ ಎಲ್ಲಾ ಇಲಾಖೆಗಳಲ್ಲೂ ಧಾರ್ಮಿಕ ಆಧಾರದಲ್ಲಿ ಪೂಜೆಗಳು ನಡೆಯುತ್ತಿವೆ. ಇವತ್ತು ಇದನ್ನು ತಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಾ ಇದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟೀಕಿಸಿದ್ದರು. ಇನ್ನೂ ಅನೇಕ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಇದೀಗ ಪ್ರತಿಕ್ರಿಯಿಸಿರುವ ಅಲೋಕ್ ಮೋಹನ್, ಆಂತರಿಕ ವಿಷಯ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೇಸರೀಕರಣ Vs ಕಾಂಗ್ರೆಸ್ಸೀಕರಣ; ರಾಜಕೀಯ ಹಗ್ಗಜಗ್ಗಾಟಕ್ಕೆ ಗುರಿಯಾದ ಪೊಲೀಸ್ ಇಲಾಖೆ

ಈ ಮಧ್ಯೆ, ಅಲೋಕ್ ಮೋಹನ್ ಅವರು ಗುರುವಾರ ಬೆಳಿಗ್ಗೆ ಎಲ್ಲಾ ಶ್ರೇಣಿಯ ಪೊಲೀಸ್ ಸಿಬ್ಬಂದಿಯೊಂದಿಗೆ ಸಭೆ ನಡೆಸಿದರು ಮತ್ತು ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ತಮ್ಮ ಕಾರ್ಯಯೋಜನೆಯ ಬಗ್ಗೆ ಚರ್ಚಿಸಿದರು. ಸಭೆಯ ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ರೌಡಿ ಚಟುವಟಿಕೆಗಳನ್ನು ನಾವು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

ನಗರದಲ್ಲಿ ಡ್ರಗ್ಸ್ ಹಾವಳಿ ಕುರಿತು ಪ್ರತಿಕ್ರಿಯಿಸಿದ ಅವರು, ಬೆಂಗಳೂರು ನಗರವನ್ನು ಡ್ರಗ್ಸ್ ಮುಕ್ತ ಮಾಡುವುದು ನಮ್ಮ ಗುರಿ. ಡ್ರಗ್ಸ್ ಹಾವಳಿ ನಿಯಂತ್ರಿಸಲು ಪ್ರದೇಶವಾರು ಕಾರ್ಯಾಚರಣೆ ನಡೆಸುವ ಮೂಲಕ ಅದನ್ನು ಮಟ್ಟಹಾಕಲು ನಾವು ಯೋಜನೆ ರೂಪಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಅಲೋಕ್ ಮೋಹನ್ ಅವರು ನಗರದಲ್ಲಿ ಟ್ರಾಫಿಕ್ ಸಮಸ್ಯೆ ಕುರಿತು ಮಾತನಾಡಿ, ವಾಹನ ಸಂಚಾರವನ್ನು ಸಮರ್ಥವಾಗಿ ನಿರ್ವಹಿಸಲು ಸ್ಥಳೀಯ ಪೊಲೀಸರನ್ನು ತೊಡಗಿಸಿಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಪೊಲೀಸರು ಸಾರ್ವಜನಿಕ ಸ್ನೇಹಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಅವರು ಭರವಸೆ ನೀಡಿದ್ದಾರೆ.

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!