ರಾಜ್ಯಾದ್ಯಂತ ಮಸೀದಿಗಳಲ್ಲಿ ಕಾನೂನಿನ ರೀತಿಯಲ್ಲಿ ಧ್ವನಿವರ್ಧಕ ತೆರವಿಗೆ ಸುತ್ತೋಲೆ

ಬೆಂಗಳೂರು: ರಾಜ್ಯಾದ್ಯಂತ ಮಸೀದಿಗಳಲ್ಲಿರುವ‌ ಧ್ವನಿವರ್ಧಕ ತೆರವುಗೊಳಿಸುವ ಕುರಿತಾಗಿ ಸುತ್ತೋಲೆ ಹೊರಡಿಸಿರುವ ಪೊಲೀಸ್ ಮಹಾನಿರ್ದೇಶಕರು, ಕಾನೂನಿನ ಪ್ರಕಾರ ಕಾರ್ಯಪ್ರವೃತ್ತರಾಗಲು ಎಲ್ಲಾ ಜಿಲ್ಲಾ ಪೊಲೀಸ್ ವರಿಷ್ಠರಿಗೆ ಆದೇಶಿಸಿದ್ದಾರೆ. ಧ್ವನಿವರ್ಧಕಗಳಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದ್ದು ಕಾನೂನಿನ ರೀತಿಯಲ್ಲಿ ಕ್ರಮ ಕೈಗೊಳ್ಳುವಂತೆ ವಕೀಲರೊಬ್ಬರು ಇತ್ತೀಚೆಗೆ ಮನವಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಡಿಜಿ & ಐಜಿಪಿ ಪ್ರವೀಣ್ ಸೂದ್ ಸುತ್ತೋಲೆ ಹೊರಡಿಸಿದ್ದಾರೆ. ವಕೀಲ ಹರ್ಷ ಮುತಾಲಿಕ್ ಸಲ್ಲಿಸಿದ್ದ ಆಕ್ಷೇಪಣೆ ಮೇರೆಗೆ ಪೊಲೀಸ್​ ಆಯುಕ್ತರಿಗೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ಹೊರಡಿಸಿದ್ದಾರೆ. ಸುಪ್ರೀಂ ಕೋರ್ಟ್ ಸೂಚನೆಯಂತೆ […]

ರಾಜ್ಯಾದ್ಯಂತ ಮಸೀದಿಗಳಲ್ಲಿ ಕಾನೂನಿನ ರೀತಿಯಲ್ಲಿ ಧ್ವನಿವರ್ಧಕ ತೆರವಿಗೆ ಸುತ್ತೋಲೆ
ಲೌಡ್​ಸ್ಪೀಕರ್​​​ (ಸಂಗ್ರಹ ಚಿತ್ರ)
ಸಾಧು ಶ್ರೀನಾಥ್​

Updated on: Nov 05, 2020 | 5:37 PM

ಬೆಂಗಳೂರು: ರಾಜ್ಯಾದ್ಯಂತ ಮಸೀದಿಗಳಲ್ಲಿರುವ‌ ಧ್ವನಿವರ್ಧಕ ತೆರವುಗೊಳಿಸುವ ಕುರಿತಾಗಿ ಸುತ್ತೋಲೆ ಹೊರಡಿಸಿರುವ ಪೊಲೀಸ್ ಮಹಾನಿರ್ದೇಶಕರು, ಕಾನೂನಿನ ಪ್ರಕಾರ ಕಾರ್ಯಪ್ರವೃತ್ತರಾಗಲು ಎಲ್ಲಾ ಜಿಲ್ಲಾ ಪೊಲೀಸ್ ವರಿಷ್ಠರಿಗೆ ಆದೇಶಿಸಿದ್ದಾರೆ.

ಧ್ವನಿವರ್ಧಕಗಳಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದ್ದು ಕಾನೂನಿನ ರೀತಿಯಲ್ಲಿ ಕ್ರಮ ಕೈಗೊಳ್ಳುವಂತೆ ವಕೀಲರೊಬ್ಬರು ಇತ್ತೀಚೆಗೆ ಮನವಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಡಿಜಿ & ಐಜಿಪಿ ಪ್ರವೀಣ್ ಸೂದ್ ಸುತ್ತೋಲೆ ಹೊರಡಿಸಿದ್ದಾರೆ. ವಕೀಲ ಹರ್ಷ ಮುತಾಲಿಕ್ ಸಲ್ಲಿಸಿದ್ದ ಆಕ್ಷೇಪಣೆ ಮೇರೆಗೆ ಪೊಲೀಸ್​ ಆಯುಕ್ತರಿಗೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ಹೊರಡಿಸಿದ್ದಾರೆ.

ಸುಪ್ರೀಂ ಕೋರ್ಟ್ ಸೂಚನೆಯಂತೆ ಕ್ರಮ ಕೈಗೊಳ್ಳಿ
ಈ ಹಿಂದೆ ಸರ್ವೋಚ್ಛ ನ್ಯಾಯಾಲಯ ಈ ಕುರಿತು ವಿವರವಾದ ಮಾರ್ಗಸೂಚಿ ಹೊರಡಿಸಿದೆ. ಆ ಪ್ರಕಾರ ಹೋದರೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆ ವರೆಗೆ ಧ್ವನಿವರ್ಧಕ ಬಳಸಲು ನಿರ್ಬಂಧ ಇದೆ. ಮತ್ತು ಧ್ವನಿವರ್ಧಕ ಬಳಸುವಾಗ 75 ಡೆಸಿಬಲ್ ಗಿಂತ ಜಾಸ್ತಿ ಶಬ್ದವಿರಬಾರದು ಎಂದು 2005 ರ ಮಾರ್ಗಸೂಚಿ ಹೇಳುತ್ತದೆ.

Published On - 5:36 pm, Thu, 5 November 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us