AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಪೊಲೀಸರಿಗೆ ಭರ್ಜರಿ ಗಿಫ್ಟ್, ಕುಟುಂಬಸ್ಥರ ಜತೆ ಕಾಲ ಕಳೆಯಲು ರಜೆ ಭಾಗ್ಯ

ಪೊಲೀಸರಿಗೆ ಬಿಡುವಿಲ್ಲ ಕೆಲಸ. ಹಗಲು-ರಾತ್ರಿ ಎನ್ನದೆ, ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ನಮ್ಮ ಪೊಲೀಸರಿಗೆ ಮನೆಯವರ ಜೊತೆ ಸಂಭ್ರಮಿಸಲು ಸಮಯವೇ ಇರುವುದಿಲ್ಲ. ಮಗಳ ಬರ್ತ್‌ಡೇ ಅಥವಾ ಸ್ವತಃ ತಮ್ಮದೇ ಮದುವೆ ವಾರ್ಷಿಕೋತ್ಸವವಿದ್ದರೂ ಕರ್ತವ್ಯಕ್ಕೆ ಹಾಜರಾಗಬೇಕಾದ ಅನಿವಾರ್ಯತೆ. ಇದೆಲ್ಲವುದನ್ನು ಗಮನಿಸಿದ ಗೃಹ ಇಲಾಖೆ, ಪೊಲೀಸ್ ಸಿಬ್ಬಂದಿಗೆ ಭರ್ಜರಿ ಗಿಫ್ಟ್ ನೀಡಿದೆ.

ಕರ್ನಾಟಕ ಪೊಲೀಸರಿಗೆ ಭರ್ಜರಿ ಗಿಫ್ಟ್, ಕುಟುಂಬಸ್ಥರ ಜತೆ ಕಾಲ ಕಳೆಯಲು ರಜೆ ಭಾಗ್ಯ
Karnataka Police
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Jan 29, 2026 | 3:15 PM

Share

ಬೆಂಗಳೂರು, (ಜನವರಿ 29)ಕರ್ನಾಟಕ ಪೊಲೀಸ್  (Police) ಸಿಬ್ಬಂದಿಯ ಹುಟ್ಟುಹಬ್ಬ (Birthday) ಹಾಗೂ ವಿವಾಹ ವಾರ್ಷಿಕೋತ್ಸವಕ್ಕೆ (Wedding Anniversary) ಸಾಂದರ್ಭಿಕ ರಜೆ ನೀಡುವಂತೆ ಆದೇಶ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನದಂದು ಕುಟುಂಬದವರ ಜೊತೆ ಕಾಲ ಕಳೆಯಲು ಅನುಕೂಲವಾಗುವಂತೆ ಆ ದಿನ ಕಡ್ಡಾಯ ರಜೆ ನೀಡಿ. ಇದರಿಂದ ಒತ್ತಡದ ಕೆಲಸ ಹಾಗೂ ವ್ಯಯಕ್ತಿಕ ಜೀವನ ಸಮತೋಲನಗೆ ರಜೆ ಸಹಾಯಕವಾಗಲಿದೆ. ಹೀಗಾಗಿ ಸಾಂದರ್ಭಿಕ ರಜೆ ನೀಡುವಂತೆ ಆದೇಶಿಸಿದ್ದಾರೆ.

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನದಂದು ಕುಟುಂಬದವರ ಜೊತೆ ಕಾಲ ಕಳೆಯಲು ಅನುಕೂಲವಾಗುವಂತೆ ಆ ದಿನ ಕಡ್ಡಾಯ ರಜೆ ನೀಡುವ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಒಳಾಡಳಿತ ಇಲಾಖೆಯು ಪೊಲೀಸ್ ಮಹಾನಿರ್ದೇಶಕರಿಗೆ (DG & IGP) ಅಧಿಕೃತ ಪತ್ರ ಬರೆದಿತ್ತು. ಇದನ್ನು ಪರಿಶೀಲಿಸಿದ ಡಿಜಿ ಡಾ ಸಲೀಂ ಅವರು, ಕಡ್ಡಾಯ ರಜೆ ನೀಡಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಎಚ್ಚರ, ಟ್ರಾಫಿಕ್ ಚಲನ್ ಪಾವತಿಗೆಂದು ಸಿಕ್ಕಸಿಕ್ಕ ಲಿಂಕ್ ಕ್ಲಿಕ್ ಮಾಡ್ಬೇಡಿ: 2.32 ಲಕ್ಷ ರೂ. ಕಳಕೊಂಡ ಬೆಂಗಳೂರು ಟೆಕ್ಕಿ

ಯಾರಿಗೆಲ್ಲ ಈ ರಜೆ ಸಿಗಲಿದೆ?

ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪ ಅವರು ನೀಡಿದ ಸಲಹೆಯ ಮೇರೆಗೆ ಈ ನಿರ್ಧಾರಕ್ಕೆ ಚಾಲನೆ ಸಿಕ್ಕಿದೆ. ಪ್ರಮುಖವಾಗಿ ಕೆಳ ಹಂತದ ಸಿಬ್ಬಂದಿಗಳಾದ ಪೊಲೀಸ್ ಕಾನ್ಸ್‌ಟೇಬಲ್ (PC), ಹೆಡ್ ಕಾನ್ಸ್‌ಟೇಬಲ್ (HC) ಸಹಾಯಕ ಪೊಲೀಸ್ ಉಪನಿರೀಕ್ಷಕರು (ASI), ಈ ಶ್ರೇಣಿಯ ಅಧಿಕಾರಿಗಳಿಗೆ ರಜೆ ಸೌಲಭ್ಯ ಸಿಗಲಿದೆ.

ಡಿಜಿ-ಐಜಿಪಿ ಹೊರಡಿಸಿದ ಆದೇಶದಲ್ಲೇನಿದೆ?

ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಜಾರಿಯನ್ನು ಖಚಿತಪಡಿಸಿಕೊಳ್ಳಲು ಕಠಿಣ ಪರಿಸ್ಥಿತಿಗಳಲ್ಲಿ ಕೆಲಸ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗಳಿಗೆ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವಗಳಂತಹ ವೈಯಕ್ತಿಕ ಕಾರ್ಯಕ್ರಮಗಳನ್ನು ಆಚರಿಸುವುದು ಬಹಳ ಮಹತ್ವದ್ದಾಗಿದೆ. ಈ ವಿಶೇಷ ದಿನಗಳಲ್ಲಿ ರಜೆ ಪಡೆಯುವುದರಿಂದ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾವನಾತ್ಮಕವಾಗಿ ಪುನಶ್ಚತನಗೊಳ್ಳಲು, ಕುಟುಂಬದೊಂದಿಗೆ ಸಮಯ ಕಳೆಯಲು ಹಾಗೂ ಕರ್ತವ್ಯ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯವಾಗುತ್ತದೆ. ಇದರಿಂದ ಮನೋಬಲ ವೃದ್ಧಿಯಾಗುತ್ತದೆ. ಒತ್ತಡ ಲಡಿಮೆಯಾಗುತ್ತದೆ ಮತ್ತು ಒಟ್ಟಾರೆ ಕೆಲಸದ ತೃಪ್ತಿ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ.

ಈ ಮಾನವೀಯ ಕಾರ್ಯವು ಅವರ ತ್ಯಾಗಗಳನ್ನು ಗುರುತಿಸುವುದರ ಜೊತೆಗೆ ನಿಷ್ಠೆಯನ್ನು ಬೆಳೆಸುತ್ತದೆ ಮತ್ತು ಪೊಲೀಸ್ ಪಡೆಯ ಬದ್ಧತೆಯನ್ನು ಬಲಪಡಿಸಿ, ಸೇವೆಯಲ್ಲಿ ಉತ್ತಮ ಶಿಸ್ತು ಮತ್ತು ಕಾರ್ಯಕ್ರಮತೆಗೆ ಸಹಕಾರಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ರಜೆ ಕೋರಿದಲ್ಲಿ, ತಪ್ಪದೆ ರಜೆ ಮಂಜೂರು ಮಾಡಲು ಎಲ್ಲಾ ಘಟಕಾಧಿಕಾರಿಗಳಿಗೆ ನಿರ್ದೇಶಿಸಿದೆ ಎಂದು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ರಜೆ ಬಗ್ಗೆ ಪತ್ರದ ಬರೆದಿದ್ದ ಒಳಾಡಳಿತ ಇಲಾಖೆ

ಪೊಲೀಸ್ ಸಿಬ್ಬಂದಿಗೆ ರಜೆ ನೀಡುವ ಕುರಿತಂತೆ ರಾಜ್ಯ ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ರಾಜ್ಯದ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರ್ದೇಶಕರಿಗೆ ಪತ್ರ ಬರೆದಿದ್ದರು. ಅದರಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ನಾಗರೀಕ ಸಮಾಜದ ಸದಸ್ಯ ಮೋಹನ್ ಕುಮಾರ್ ದಾನಪ್ಪ ಎಂಬುವರು ಪತ್ರವನ್ನು ಬರೆದಿರುವುದನ್ನು ಉಲ್ಲೇಖಿಸಿದ್ದರು.

ಮೋಹನ್ ಕುಮಾರ್ ದಾನಪ್ಪ ಅವರು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್ ಟೇಬಲ್ ನಿಂದ ಎಎಸ್‌ಐ ದರ್ಜೆಯವರೆಗಿನ ಸಿಬ್ಬಂದಿಗಳ ಹುಟ್ಟು ಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನದಂದು ಕಡ್ಡಾಯ ರಜೆ ನೀಡುವಂತೆ ಕೋರಿರುವುದಾಗಿ ತಿಳಿಸಿದ್ದರು. ಈ ಪತ್ರದ ಬಗ್ಗೆ ನಿಯಮಾನುಸಾರ ಮುಂದಿನ ಕ್ರಮ ವಹಿಸುವಂತೆ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರಿಗೆ ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಿರ್ದೇಶಿಸಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕುಡಿದು ಅಪಘಾತ ಮಾಡಿದ ಮಯೂರ್ ಪಟೇಲ್​ಗೆ ಹೆಚ್ಚಿತು ಸಂಕಷ್ಟ
ಕುಡಿದು ಅಪಘಾತ ಮಾಡಿದ ಮಯೂರ್ ಪಟೇಲ್​ಗೆ ಹೆಚ್ಚಿತು ಸಂಕಷ್ಟ
ಕೊಲಂಬಿಯಾದಲ್ಲಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು
ಕೊಲಂಬಿಯಾದಲ್ಲಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು
ಯತೀಂದ್ರ ಹಸ್ತಕ್ಷೇಪ ವಿಚಾರ ಸದನದಲ್ಲಿ ಚರ್ಚೆ: ಕೆಜೆ ಜಾರ್ಜ್ ಹೇಳಿದ್ದೇನು?
ಯತೀಂದ್ರ ಹಸ್ತಕ್ಷೇಪ ವಿಚಾರ ಸದನದಲ್ಲಿ ಚರ್ಚೆ: ಕೆಜೆ ಜಾರ್ಜ್ ಹೇಳಿದ್ದೇನು?
ಟ್ರಕ್​ನಲ್ಲಿ ಪ್ಲಾಸ್ಟಿಕ್​ ಬಾಟಲಿಗಳ ನಡುವೆ ಹಸುಗಳನ್ನು ತುಂಬಿ ಕಳ್ಳಸಾಗಣೆ
ಟ್ರಕ್​ನಲ್ಲಿ ಪ್ಲಾಸ್ಟಿಕ್​ ಬಾಟಲಿಗಳ ನಡುವೆ ಹಸುಗಳನ್ನು ತುಂಬಿ ಕಳ್ಳಸಾಗಣೆ
ನಾವು ಈಗ ಸುಧಾರಣಾ ಎಕ್ಸ್​​ಪ್ರೆಸ್​ನಲ್ಲಿದ್ದೇವೆ: ಪ್ರಧಾನಿ ಮೋದಿ
ನಾವು ಈಗ ಸುಧಾರಣಾ ಎಕ್ಸ್​​ಪ್ರೆಸ್​ನಲ್ಲಿದ್ದೇವೆ: ಪ್ರಧಾನಿ ಮೋದಿ
‘ಟಾಕ್ಸಿಕ್’ ವಿಷಯದಲ್ಲಿ ಯಶ್ ಬೆಂಬಲಕ್ಕೆ ನಿಂತ ಮಹಿಳಾ ನಿರ್ದೇಶಕಿ
‘ಟಾಕ್ಸಿಕ್’ ವಿಷಯದಲ್ಲಿ ಯಶ್ ಬೆಂಬಲಕ್ಕೆ ನಿಂತ ಮಹಿಳಾ ನಿರ್ದೇಶಕಿ
ಟ್ರಕ್​ಗಳ ನಡುವೆ ಅಪಘಾತ, ಹೊತ್ತಿಕೊಂಡ ಬೆಂಕಿ, ಚಾಲಕ ಸಜೀವದಹನ
ಟ್ರಕ್​ಗಳ ನಡುವೆ ಅಪಘಾತ, ಹೊತ್ತಿಕೊಂಡ ಬೆಂಕಿ, ಚಾಲಕ ಸಜೀವದಹನ
400 ಕೋಟಿ ದರೋಡೆ ಪ್ರಕರಣಕ್ಕೆ ಸಿಗುತ್ತಾ ಮತ್ತೊಂದು ಟ್ವಿಸ್ಟ್?
400 ಕೋಟಿ ದರೋಡೆ ಪ್ರಕರಣಕ್ಕೆ ಸಿಗುತ್ತಾ ಮತ್ತೊಂದು ಟ್ವಿಸ್ಟ್?
ಮೊದಲ ಎಸೆತಗಳಲ್ಲೇ ವಿಶ್ವ ದಾಖಲೆ ಬರೆದ ಮ್ಯಾಟ್ ಹೆನ್ರಿ
ಮೊದಲ ಎಸೆತಗಳಲ್ಲೇ ವಿಶ್ವ ದಾಖಲೆ ಬರೆದ ಮ್ಯಾಟ್ ಹೆನ್ರಿ
ಸಾರ್ವಜನಿಕ ಸಾಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ಮಹಿಳೆಗೆ ಒದ್ದ ವ್ಯಕ್ತಿ
ಸಾರ್ವಜನಿಕ ಸಾಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ಮಹಿಳೆಗೆ ಒದ್ದ ವ್ಯಕ್ತಿ