ಇದೇ ತಿಂಗಳ 25ಕ್ಕೆ ಹಾಲಿ ಸಿಬಿಐ ನಿರ್ದೇಶಕರ ಅವಧಿ ಮುಕ್ತಾಯ, ಮುಂಚೂಣಿಯಲ್ಲಿ ಡಿಜಿಪಿ ಪ್ರವೀಣ್ ಸೂದ್ ಹೆಸರು
ಇದೇ ತಿಂಗಳು 25ಕ್ಕೆ ಹಾಲಿ ಸಿಬಿಐ ನಿರ್ದೇಶಕರ ಅವಧಿ ಮುಕ್ತಾಯವಾಗುವ ಹಿನ್ನಲೆ ಈ ಹುದ್ದೆಗೆ ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರ ಹೆಸರು ಮುಂಚೂಣಿಯಲ್ಲಿದೆ.
ಬೆಂಗಳೂರು: ಇದೇ ತಿಂಗಳು 25ಕ್ಕೆ ಹಾಲಿ ಸಿಬಿಐ (CBI) ನಿರ್ದೇಶಕರ (Director) ಅವಧಿ ಮುಕ್ತಾಯವಾಗುವ ಹಿನ್ನಲೆ ಈ ಹುದ್ದೆಗೆ ಕರ್ನಾಟಕ ಪೊಲೀಸ್ ಮಹಾನಿರ್ದೇಶಕ (DGP) ಪ್ರವೀಣ್ ಸೂದ್ (Praveen Sood) ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ನಾಳೆ (ಮೇ.15) ಆದೇಶ ಹೊರಡಿಸುವ ಸಾಧ್ಯತೆ ಇದೆ. ಸದ್ಯ ಸಿಬಿಐ ನಿರ್ದೇಶಕರ ಹುದ್ದೆಗೆ ಕರ್ನಾಟಕ (Karnataka), ದೆಹಲಿ (Dehli) ಸೇರಿದಂತೆ ಮೂರು ರಾಜ್ಯಗಳ ಮೂವರು ಐಪಿಎಸ್ ಅಧಿಕಾರಿಗಳ ಹೆಸರು ಪ್ರಸ್ತಾಪವಾಗಿದೆ ಎನ್ನಲಾಗುತ್ತಿದೆ. ಈ ಪಟ್ಟಿಯಲ್ಲಿ ರಾಜ್ಯ ಡಿಜಿಪಿ ಪ್ರವೀಣ್ ಸೂದ್ ಅವರ ಹೆಸರು ಕೂಡ ಇದೆ ಎಂದು ತಿಳಿದುಬಂದಿದೆ.
ಸಿಬಿಐ ನಿರ್ದೇಶಕರ ನೇಮಕ ಪ್ರಕ್ರಿಯೆ
ಸಿಬಿಐ ನಿರ್ದೇಶಕರ ಹುದ್ದೆಗೆ ನೇಮಕ ಪ್ರಕ್ರಿಯೆ ಬಹಳ ಉನ್ನತ ಮಟ್ಟದಲ್ಲಿ ನಡೆಯುತ್ತೆ. ಈ ಸಂಬಂಧ ಪ್ರಧಾನ ಮಂತ್ರಿ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಹಾಗು ಲೋಕಸಭೆಯ ವಿರೋಧ ಪಕ್ಷದ ನಾಯಕ ಒಳಗೊಂಡ ಉನ್ನತ ಮಟ್ಟದ ಸಮಿತಿ ಚರ್ಚಿಸಿ ನಿರ್ಧಾರ ಮಾಡುತ್ತದೆ.
ಸೇವಾ ಹಿರಿತನ, ಸಮಗ್ರತೆ ಮತ್ತು ಭ್ರಷ್ಟಾಚಾರ ಪ್ರಕರಣಗಳ ತನಿಖೆಯ ಅನುಭವದ ಆಧಾರದ ಮೇಲೆ ಐಪಿಎಸ್ ಅಧಿಕಾರಿಗಳ ಪಟ್ಟಿಯನ್ನು ಗೃಹ ಖಾತೆಯು ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ ನೀಡುತ್ತದೆ. ಈ ಪಟ್ಟಿಯನ್ನು ಆಯ್ಕೆ ಸಮಿತಿಗೆ ಕಳುಹಿಸಲಾಗುತ್ತದೆ.
ಪ್ರವೀಣ ಸೂದ್ ಅವರು ಕರ್ನಾಟಕ ಕೇಡರ್‌ನ 1986-ಬ್ಯಾಚ್‌ನ IPS ಅಧಿಕಾರಿ. ಮೂರು ವರ್ಷಗಳ ಹಿಂದೆ ರಾಜ್ಯದ ಡಿಜಿಪಿಯಾಗಿ ನೇಮಕಗೊಂಡರು. ಅವರು ಹಿಮಾಚಲ ಪ್ರದೇಶದ ಮತ್ತು IIT-ದೆಹಲಿಯಲ್ಲಿ ತಮ್ಮ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:15 am, Sun, 14 May 23