AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಧಾನ ಯಶಸ್ವಿ: ಮುಷ್ಕರ ಹಿಂಪಡೆದ ವೈದ್ಯರು, ನಿಟ್ಟುಸಿರುಬಿಟ್ಟ ರೋಗಿಗಳು

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆಯಿಂದ (ಮಾರ್ಚ್ 11) ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ಇದಕ್ಕೆ ಇದೀಗ ರಾಜ್ಯ ಸರ್ಕಾರ ಮಣಿದಿದೆ. ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಜೊತೆ ನಡೆದ ಸಂಧಾನ ಸಭೆ ಯಶಸ್ವಿಯಾಗಿದೆ. ಹೀಗಾಗಿ ವೈದ್ಯಾಧಿಕಾರಿಗಳು ತಮ್ಮ ಮುಷ್ಕರವನ್ನು ವಾಪಸ್ ಪಡೆದುಕೊಂಡಿದ್ದಾರೆ. ಹಾಗಾದ್ರೆ, ಸರ್ಕಾರ ಏನೆಲ್ಲಾ ಭರವಸೆ ಈಡೇರಿಸಿದೆ ಎನ್ನುವ ವಿವರ ಇಲ್ಲಿದೆ.

ಸಂಧಾನ ಯಶಸ್ವಿ: ಮುಷ್ಕರ ಹಿಂಪಡೆದ ವೈದ್ಯರು, ನಿಟ್ಟುಸಿರುಬಿಟ್ಟ ರೋಗಿಗಳು
ವೈದ್ಯಾಧಿಕಾರಿಗಳ ಜತೆ ಸಭೆ
ವಿನಯ್​ ಕಾಶಪ್ಪನವರ್​
| Edited By: |

Updated on:Mar 10, 2026 | 9:09 PM

Share

ಬೆಂಗಳೂರುಮ (ಮಾರ್ಚ್ 11): ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವೈದ್ಯಾಧಿಕಾರಿಗಳ ಸಂಘ (Karnataka Doctors association)  ನಾಳಿನ (ಮಾರ್ಚ್ 11)  ಮುಷ್ಕರವನ್ನು (Strike) ಹಿಂಪಡೆದುಕೊಂಡಿದೆ. ಖಾಲಿ ಹುದ್ದೆಗಳ ಭರ್ತಿ ಸೇರಿ 14 ಬೇಡಿಕೆಗಳ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಓಪಿಡಿ ಬಂದ್ ಮಾಡಿ ಸರ್ಕಾರಿ ವೈದ್ಯಾಧಿಕಾರಿಗಳು ಮುಷ್ಕರಕ್ಕೆ ಕರೆ ನೀಡಿದ್ದರು. ಇದರಿಂದ ರಾಜ್ಯದಲ್ಲಿ ಹೆಲ್ತ್ ಎಮರ್ಜೆನ್ಸಿ ಉಂಟಾಗಬಹುದು ಎಂದು ಎಚ್ಚೆತ್ತ ರಾಜ್ಯ ಸರ್ಕಾರ, ವೈದ್ಯಾಧಿಕಾರಿಗಳ ಸಂಘದ ಜತೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ.  14 ಬೇಡಿಕೆಗಳ ಪೈಕಿ 13 ಬೇಡಿಕೆ ಈಡೇರಿಸುವುದಾಗಿ ಸರ್ಕಾರ ಭರವಸೆ ನಿಡಿದೆ. ಈ ಹಿನ್ನೆಲೆಯಲ್ಲಿ ಮಾರ್ಚ್ 11ರ ಮುಷ್ಕರವನ್ನು ವೈದ್ಯಾಧಿಕಾರಿಗಳ ಸಂಘ ವಾಪಸ್ ಪಡೆದುಕೊಂಡಿದೆ.

ಇಂದು ನಡೆದ ಸಂಧಾನ ಸಭೆಯಲ್ಲಿ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಇಟ್ಟಿರುವ 14 ಬೇಡಿಕೆಗಳ ಪೈಕಿ 13 ಬೇಡಿಕೆ ಈಡೇರಿಸುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದೆ. ಮುಂದಿನ 3 ತಿಂಗಳಲ್ಲಿ ಎಲ್ಲ ಬೇಡಿಕೆ ಈಡೇರಿಸುವುದಾಗಿ ತಿಳಿಸಿದೆ. ಸರ್ಕಾರದ ಈ ಭರವಸೆಗೆ ವೈದ್ಯಾಧಿಕಾರಿಗಳ ಸಂಘ ಸಹ ಒಪ್ಪಿಕೊಂಡಿದ್ದು, ನಾಳೆಯ(ಮಾರ್ಚ್ 11) ಮುಷ್ಕರ ಹಿಂಪಡೆದುಕೊಂಡಿದೆ. ಇದರಿಂದ ರೋಗಿಗಳು ನಿಟ್ಟುಸಿರುಬಿಡುವಂತಾಗಿದೆ.

ಇದನ್ನೂ ಓದಿ: ಬೀದಿ ನಾಯಿಗಳ ನಿಯಂತ್ರಣಕ್ಕೆ ಶಿಕ್ಷಕರನ್ನು ನೇಮಿಸಲು ಹೊರಟ ಸರ್ಕಾರ: ಹೊರಟ್ಟಿ ಆಕ್ರೋಶ

ಆರೋಗ್ಯ ಸಚಿವರು ಹೇಳಿದ್ದೇನು?

ಇನ್ನು ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಿಎಂ ಸೂಚನೆ ಮೇರೆಗೆ ವೈದ್ಯಾಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದೇವೆ. CNR ಮಾಡುತ್ತೇವೆ ಎಂದು ಹೇಳಿದ್ದೇವೆ. ಜೇಷ್ಠತಾ ಪಟ್ಟಿಯೂ ರೆಡಿ ಇದೆ. ಪಿಜಿ ಕೋರ್ಸ್ ಮಾಡಿ ಎಂದು ಹೇಳಿದ್ದರು ಅದಕ್ಕೂ ಒಪ್ಪಿದ್ದೇವೆ. ಉಳಿದಂತೆ ಹಲವು ವಿಚಾರಗಳನ್ನು ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಔಷಧಿಗಳ ಪೂರೈಕೆಗೆ ಖರೀದಿಗೆ ಹಣ ಕೊಟ್ಟಿದ್ದೇವೆ. ಔಷಧಿಗಳನ್ನು ನಮ್ಮ ಕಡೆಯಿಂದ ಸರಬರಾಜು ಆಗುತ್ತಿದೆ. ಔಷಧಿ ಎಲ್ಲಿಂದ ಬರುತ್ತೆ ಅನ್ನೋದು ಮುಖ್ಯ ಅಲ್ಲ. ಜನರಿಗೆ ಔಷಧಿ ಸಿಗಬೇಕು, ಎಲ್ಲದಕ್ಕೂ ಅವರೂ ಒಪ್ಪಿದ್ದಾರೆ. ಬಹುತೇಕ ಎಲ್ಲಾ ಬೇಡಿಕೆ ಈಡೇರಿಸುವುದರ ಬಗ್ಗೆ ಮಾತನಾಡಿದ್ದೇವೆ ಎಂದು ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:59 pm, Tue, 10 March 26

Follow Us
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ