
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (KSLSA) ವಾಹನ ಚಾಲಕ (Driver) ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಸಂಬಂಧ ಅಧಿಕೃತ ಅಧಿಸೂಚನೆ ಪ್ರಕಟವಾಗಿದ್ದು, ಒಟ್ಟು 2 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ನಿರ್ಧರಿಸಲಾಗಿದೆ. ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ.
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರದ ವೇತನ ಶ್ರೇಣಿಯ ಪ್ರಕಾರ 34,100 ರಿಂದ 67,600 ರೂ. ವರೆಗೆ ವೇತನ ದೊರೆಯಲಿದೆ. ಇದರೊಂದಿಗೆ ನಿಯಮಾನುಸಾರ ಇತರೆ ಭತ್ಯೆಗಳು ಸಹ ಲಭ್ಯವಾಗಲಿವೆ.
2026ರ ಮೇ 27 ಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ತುಂಬಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ. ಪ್ರವರ್ಗ-2A, 2B, 3A, 3B ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ಎಂದು ನಿಗದಿಪಡಿಸಲಾಗಿದೆ.
ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನಿಗದಿತ ಖಾತೆಗೆ ಪಾವತಿಸಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 500 ರೂ. ಮತ್ತು ಪ್ರವರ್ಗ 2A, 2B, 3A, 3B ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 250ರೂ. ಎಂದು ನಿಗದಿಪಡಿಸಲಾಗಿದೆ. ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ (DD) ಅಥವಾ ಬ್ಯಾಂಕ್ ಮೂಲಕ ಪಾವತಿಸಿ, ಅದರ ಪಾವತಿ ರಸೀದಿಯನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.
ಇದನ್ನೂ ಓದಿ: Kerala: ನಿವೃತ್ತಿಯಾಗುವ ವಯಸ್ಸಲ್ಲಿ ಸಿಕ್ತು ಸರ್ಕಾರಿ ಕೆಲಸ; ಪರೀಕ್ಷೆ ಬರೆದ 20 ವರ್ಷಗಳ ನಂತರ ಬಂದ ನೇಮಕಾತಿ ಪತ್ರ!
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಆಫ್‌ಲೈನ್ ಮೂಲಕ ಸಲ್ಲಿಸಬೇಕು. ಅರ್ಜಿ ನಮೂನೆಯನ್ನು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧಿಕೃತ ಪ್ರಕಟಣೆಯಿಂದ ಪಡೆಯಬಹುದು. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 25 ಆಗಿದೆ. ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.
ಅಧಿಕೃತ ಅಧಿಸೂಚನೆ
ಸರ್ಕಾರಿ ಉದ್ಯೋಗ ಪಡೆಯಲು ಬಯಸುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುವುದು ಉತ್ತಮ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:50 am, Fri, 5 June 26