AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ ಪರಿಹಾರ ನೀಡದ ಕೇಂದ್ರದ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾದ ರಾಜ್ಯ ಸರ್ಕಾರ

ರಾಜ್ಯದಲ್ಲಿ 236 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟ ಆಗಿದೆ. ಹೀಗಾಗಿ 18,177.44 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ. ಆದರೆ ಕೇಂದ್ರ ಸರ್ಕಾರ ಇನ್ನೂ ಬರ ಪರಿಹಾರ ನೀಡಿಲ್ಲ.

ಬರ ಪರಿಹಾರ ನೀಡದ ಕೇಂದ್ರದ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾದ ರಾಜ್ಯ ಸರ್ಕಾರ
ವಿಧಾನಸೌಧ
Anil Kalkere
| Updated By: ವಿವೇಕ ಬಿರಾದಾರ|

Updated on:Mar 23, 2024 | 10:29 PM

Share

ಬೆಂಗಳೂರು, ಮಾರ್ಚ್​ 23: ರಾಜ್ಯದಲ್ಲಿ ತೀವ್ರ ಬರಗಾಲ (Karnataka Drought) ಆವರಿಸಿದೆ. ಹೀಗಾಗಿ ರಾಜ್ಯ ಕಾಂಗ್ರೆಸ್​ ಸರ್ಕಾರ (Congress Government) ಬರ ಪರಿಹಾರಕ್ಕಾಗಿ (Drought Relief Fund) ಕೇಂದ್ರ ಸರ್ಕಾರದ (Union Government) ಮುಂದೆ ಹಲವು ಬಾರಿ ಮನವಿ ಮಾಡಿದೆ. ಆದರೆ ಕೇಂದ್ರ ಸರ್ಕಾರ ಇನ್ನೂವರೆಗೂ ಅನುದಾನ ಜಾರಿ ಮಾಡದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಾನೂನು ಹೋರಾಟಕ್ಕೆ ಮುಂದಾಗಿದ್ದು, ಸುಪ್ರೀಂ ಕೋರ್ಟ್ (Supreme Court) ಮೆಟ್ಟಿಲೇರಲು ನಿರ್ಧರಿಸಿದೆ.

ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದ ಮನವಿ ಏನು?

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಂದಾಯ ಸಚಿವ ಕೃಷ್ಣಭೈರೇಗೌಡ 2023ರ ಡಿಸೆಂಬರ್​ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ, ರಾಜ್ಯದಲ್ಲಿ 236 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟ ಆಗಿದೆ. ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ವಿವರಿಸಿದ್ದರು.

ಹೀಗಾಗಿ ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು. ಇದರಲ್ಲಿ 4663 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, 12,577 ಕೋಟಿ ರೂ. ತುರ್ತು ಪರಿಹಾರ ನೀಡುವಂತೆ ಕೋರಿದ್ದರು. 566 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಮನವಿ ಮಾಡಿದ್ದರು.

ಇದನ್ನೂ ಓದಿ: ದಾವಣಗೆರೆ: ಬರಗಾಲದಿಂದ 1.50 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ನಾಶ, 119 ಕೋಟಿ ರೂ. ನಷ್ಟ

ಜೊತೆಗೆ ಎನ್‌.ಡಿ.ಆರ್‌.ಎಫ್. ನಿಂದ 4663 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಿದ್ದರು. ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡಲು 2015-16 ರ ಕೃಷಿ ಗಣತಿಯನ್ನು ಪರಿಗಣಿಸಲಾಗುತ್ತಿದ್ದು, ಇದು 8 ವರ್ಷ ಹಳೆಯ ಮಾಹಿತಿಯಾಗಿದೆ. ಅಲ್ಲದೆ ರಾಜ್ಯದಲ್ಲಿ ರೈತರ ದತ್ತಾಂಶವನ್ನು ಫ್ರೂಟ್ಸ್‌ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು ಪಿಎಂ-ಕಿಸಾನ್‌ ಯೋಜನೆಗೆ ಇದನ್ನು ಪರಿಗಣಿಸಲಾಗುತ್ತಿದೆ. ಇದರನ್ವಯ ರಾಜ್ಯದಲ್ಲಿ 83 ಲಕ್ಷ ಜನ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಪರಿಹಾರ ವಿತರಣೆಗೆ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡಿದ್ದರು. ಜೊತೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲೂಕುಗಳಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿದ್ದರು.

ಮನವಿ ಸಲ್ಲಿಸಿ ನಾಲ್ಕು ತಿಂಗಳು ಕಳೆದರೂ ಕೇಂದ್ರ ಸರ್ಕಾರ ಇನ್ನೂ ಕೂಡ ಬರ ಪರಿಹಾರ ಘೋಷಣೆ ಮಾಡಿಲ್ಲ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ ಸುಪ್ರೀಂ ಕೋರ್ಟ್ ​ ಮೋರೆ ಹೋಗಲು ನಿರ್ಧರಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:50 pm, Sat, 23 March 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ