ಭೀಕರ ಬರಗಾಲದಿಂದ ರಾಜ್ಯದ ರೈತರಿಗೆ 30 ಸಾವಿರ ಕೋಟಿ ರೂ. ನಷ್ಟ: ಸಿಎಂ ಸಿದ್ದರಾಮಯ್ಯ

|

Updated on: Oct 16, 2023 | 7:15 AM

ರೈತರಿಗೆ ಕುಡಿಯುವ ನೀರು, ಮೇವು, ಜಾನುವಾರುಗಳಿಗೆ ನೀರು, ಉದ್ಯೋಗಾವಕಾಶಗಳು ಮತ್ತು ಇತರ ಪರಿಹಾರ ಕ್ರಮಗಳು ಸೇರಿದಂತೆ ಅವರ ತುರ್ತು ಅಗತ್ಯಗಳನ್ನು ಪರಿಹರಿಸಲು ಇನ್‌ಪುಟ್ ಸಬ್ಸಿಡಿ ನೀಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಭೀಕರ ಬರಗಾಲದಿಂದ ರಾಜ್ಯದ ರೈತರಿಗೆ 30 ಸಾವಿರ ಕೋಟಿ ರೂ. ನಷ್ಟ: ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Follow us on

ಮೈಸೂರು ಅ.16: ಈ ವರ್ಷದ ಭೀಕರ ಬರಗಾಲದಿಂದ (Drought) ರಾಜ್ಯದ ರೈತರು (Farmers) 30 ಸಾವಿರ ಕೋಟಿ ರೂಪಾಯಿ ನಷ್ಟ ಅನುಭವಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ತಿಳಿಸಿದ್ದಾರೆ. ಬರದಿಂದಾಗಿ 42 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಲ್ಲಿ ಬೆಳೆದ ಬೆಳೆ ನಷ್ಟವಾಗಿದೆ ಮತ್ತು ರಾಜ್ಯದ 236 ತಾಲೂಕುಗಳ ಪೈಕಿ 216 ತಾಲೂಕುಗಳನ್ನು ಬರ ಪೀಡಿತ ಪ್ರದೇಶಗಳೆಂದು ಅಧಿಕೃತವಾಗಿ ಘೋಷಿಸಲಾಗಿದೆ ಎಂದರು.

ಇದಕ್ಕೂ ಮೊದಲು ರಾಜ್ಯ ಸರ್ಕಾರ 195 ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿಯನ್ನು ಘೋಷಿಸಿತ್ತು ಎಂದು ಮುಖ್ಯಮಂತ್ರಿಗಳು ಪ್ರಸ್ತಾಪಿಸಿದರು. ಆದರೆ, ಸಂಪುಟ ಉಪಸಮಿತಿ ಸಭೆಯ ನಂತರ ಹೆಚ್ಚುವರಿಯಾಗಿ 21 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿದ್ದು, ಒಟ್ಟು 216 ತಾಲೂಕುಗಳು ಈ ಬಿಕ್ಕಟ್ಟನ್ನು ಎದುರಿಸುತ್ತಿವೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (NDRF) ಮಾರ್ಗಸೂಚಿಗೆ ಅನುಗುಣವಾಗಿ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ 4,860 ಕೋಟಿ ರೂಪಾಯಿ ನೆರವು ಕೋರಿದೆ. ಕೇಂದ್ರ ಸರ್ಕಾರದ ತಂಡ ಈಗಾಗಲೇ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಗದಗ: ಭೀಕರ ಬರಕ್ಕೆ ಬರಡಾದ ಅನ್ನದಾತನ ಬದುಕು! ಬರಗಾಲ ಘೋಷಣೆ ಮಾಡಿ ಸರ್ಕಾರ ಗಪ್ ಚುಪ್; ನೇಗಿಲಯೋಗಿ ವಿಲವಿಲ

ರೈತರಿಗೆ ಕುಡಿಯುವ ನೀರು, ಮೇವು, ಜಾನುವಾರುಗಳಿಗೆ ನೀರು, ಉದ್ಯೋಗಾವಕಾಶಗಳು ಮತ್ತು ಇತರ ಪರಿಹಾರ ಕ್ರಮಗಳು ಸೇರಿದಂತೆ ಅವರ ತುರ್ತು ಅಗತ್ಯಗಳನ್ನು ಪರಿಹರಿಸಲು ಇನ್‌ಪುಟ್ ಸಬ್ಸಿಡಿ ನೀಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಒತ್ತಿ ಹೇಳಿದರು.

ಈ ವರ್ಷದ ಬರವು ಒಂದು ವಿಶಿಷ್ಟವಾದ ಸವಾಲನ್ನು ಪ್ರಸ್ತುತಪಡಿಸುತ್ತದೆ. ಇದು “ಹಸಿರು ಬರ” ಎಂದು ಹೇಳಬಹದು. ಜಮೀನುಗಳಲ್ಲಿ ಬೆಳೆಗಳನ್ನು ಬೆಳೆಯಲಾಗಿದೆ, ಆದರೆ ಯಾವುದೇ ಫಸಲು ಇಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ