AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ ವಹಿಸಿದ ಸಿಎಂ ಡಿಕೆ ಶಿವಕುಮಾರ್: ತಕ್ಷಣ ಪ್ರವಾಸಕ್ಕೆ ಸೂಚನೆ

ರಾಜ್ಯದ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ನೀಡಿದ್ದಾರೆ. ತಕ್ಷಣ ಜಿಲ್ಲೆಗಳಿಗೆ ತೆರಳಿ ತಾಲೂಕುವಾರು ಪರಿಸ್ಥಿತಿ ಪರಿಶೀಲಿಸಿ ವಾಸ್ತವ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಡಿಸಿಎಂ ಹಾಗೂ ಕಂದಾಯ ಸಚಿವರಾಗಿರು ಡಾ. ಜಿ ಪರಮೇಶ್ವರಗೆ ಸಚಿವರು ವರದಿ ಸಲ್ಲಿಸಬೇಕಿದೆ. ಯಾವ ಜಿಲ್ಲೆಯ ಹೊಣೆ ಯಾರಿಗೆ ವಹಿಸಲಾಗಿದೆ ಎಂಬ ವಿವರ ಇಲ್ಲಿದೆ.

ಬರ ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ ವಹಿಸಿದ ಸಿಎಂ ಡಿಕೆ ಶಿವಕುಮಾರ್: ತಕ್ಷಣ ಪ್ರವಾಸಕ್ಕೆ ಸೂಚನೆ
ಡಿಕೆ ಶಿವಕುಮಾರ್Image Credit source: tv9
ಗಣಪತಿ ಶರ್ಮಾ
|

Updated on: Aug 04, 2026 | 10:13 AM

Share

ಮುಖ್ಯಾಂಶಗಳು

  • ಸಚಿವರಿಗೆ ಜಿಲ್ಲಾವಾರು ಬರ ಅಧ್ಯಯನದ ಹೊಣೆ
  • ತಕ್ಷಣ ಪ್ರವಾಸಕ್ಕೆ ಸಿಎಂ ಖಡಕ್ ಸೂಚನೆ
  • ತಾಲೂಕುವಾರು ವಾಸ್ತವ ವರದಿ ಸಲ್ಲಿಸಲು ಸೂಚನೆ

ಬೆಂಗಳೂರು, ಆಗಸ್ಟ್ 4: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಜಿಲ್ಲಾವಾರು ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜವಾಬ್ದಾರಿ ವಹಿಸಿದ್ದಾರೆ. ತಮಗೆ ವಹಿಸಿರುವ ಜಿಲ್ಲೆಗಳಿಗೆ ತಕ್ಷಣ ಪ್ರವಾಸ ಕೈಗೊಂಡು, ಪ್ರತಿಯೊಂದು ತಾಲೂಕಿನಲ್ಲಿನ ವಾಸ್ತವ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸುವಂತೆ ಸಚಿವರಿಗೆ ಸೂಚನೆ ನೀಡಿದ್ದಾರೆ.

ಸಚಿವರು ಸ್ಥಳೀಯ ಪರಿಸ್ಥಿತಿಯನ್ನು ಪರಿಶೀಲಿಸಿ, ಮಳೆ, ಬೆಳೆ ಹಾನಿ, ಬರದ ಸ್ಥಿತಿ ಸೇರಿದಂತೆ ವಾಸ್ತವಾಂಶಗಳ ವರದಿಯನ್ನು ತಕ್ಷಣ ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಿಗೆ ಸಲ್ಲಿಸುವಂತೆ ಸೂಚಿಸಲಾಗಿದೆ.

ಯಾವ ಜಿಲ್ಲೆಗೆ ಯಾರ ಉಸ್ತುವಾರಿ?

  • ಡಾ. ಜಿ. ಪರಮೇಶ್ವರ್ – ತುಮಕೂರು
  • ಟಿ. ರಘುಮೂರ್ತಿ – ಚಿತ್ರದುರ್ಗ
  • ಬಿ.ಎಸ್. ಸುರೇಶ್ (ಬೈರತಿ) – ಚಿಕ್ಕಬಳ್ಳಾಪುರ
  • ಕೆ.ಹೆಚ್. ಮುನಿಯಪ್ಪ- ಬೆಂಗಳೂರು ಗ್ರಾಮಾಂತರ
  • ರಾಮಲಿಂಗಾರೆಡ್ಡಿ – ಕೋಲಾರ
  • ಹೆಚ್.ಸಿ. ಬಾಲಕೃಷ್ಣ – ಬೆಂಗಳೂರು ದಕ್ಷಿಣ
  • ಬಿ.ಜೆ. ಜಮೀರ್ ಅಹ್ಮದ್ ಖಾನ್ – ವಿಜಯನಗರ
  • ಕೆ.ಜೆ. ಜಾರ್ಜ್ – ಚಿಕ್ಕಮಗಳೂರು
  • ಕೆ.ಎಂ. ಶಿವಲಿಂಗೇಗೌಡ – ಹಾಸನ
  • ಮಧು ಬಂಗಾರಪ್ಪ – ಶಿವಮೊಗ್ಗ
  • ಎಂ.ಬಿ. ಪಾಟೀಲ್ – ವಿಜಯಪುರ, ಬಾಗಲಕೋಟೆ
  • ವಿಜಯಾನಂದ ಕಾಶಪ್ಪನವರ – ದಾವಣಗೆರೆ
  • ಎಸ್.ಎಸ್. ಮಲ್ಲಿಕಾರ್ಜುನ- ದಾವಣಗೆರೆ
  • ರುದ್ರಪ್ಪ ಲಮಾಣಿ – ಹಾವೇರಿ
  • ಬಸವರಾಜ ರಾಯರೆಡ್ಡಿ – ಗದಗ
  • ಸತೀಶ್ ಜಾರಕಿಹೊಳಿ – ಬೆಳಗಾವಿ
  • ಸಂತೋಷ್ ಲಾಡ್- ಧಾರವಾಡ
  • ಲಕ್ಷ್ಮಣ ಸವದಿ – ಉತ್ತರ ಕನ್ನಡ
  • ಪ್ರಿಯಾಂಕ್ ಖರ್ಗೆ – ಕಲಬುರಗಿ
  • ಅಜಯ್ ಧರಂ ಸಿಂಗ್ – ರಾಯಚೂರು
  • ಈಶ್ವರ್ ಖಂಡ್ರೆ – ಬೀದರ್
  • ಪಿ.ಎಂ. ನರೇಂದ್ರಸ್ವಾಮಿ – ಕೊಡಗು
  • ಯು.ಟಿ. ಖಾದರ್ – ದಕ್ಷಿಣ ಕನ್ನಡ, ಉಡುಪಿ
  • ಯತೀಂದ್ರ ಸಿದ್ದರಾಮಯ್ಯ – ಮೈಸೂರು
  • ಚೆಲುವರಾಯಸ್ವಾಮಿ – ಮಂಡ್ಯ
  • ಪುಟ್ಟರಂಗಶೆಟ್ಟಿ – ಚಾಮರಾಜನಗರ
  • ಬಿ. ನಾಗೇಂದ್ರ – ಬಳ್ಳಾರಿ
  • ಶರಣ ಪ್ರಕಾಶ ಪಾಟೀಲ್ – ಯಾದಗಿರಿ
  • ಶಿವರಾಜ್ ಸಂಗಪ್ಪ ತಂಗಡಗಿ- ಕೊಪ್ಪಳ
  • ಕೃಷ್ಣ ಬೈರೇಗೌಡ – ಬೆಂಗಳೂರು ನಗರ

ರಾಜ್ಯದ ಕೆಲವೆಡೆ ಮಳೆ ಹೆಚ್ಚಾಗಿ ಅತಿವೃಷ್ಟಿಯ ಪರಿಸ್ಥಿತಿ ನಿರ್ಮಾಣವಾಗಿದ್ದರೆ, ಮತ್ತೊಂದೆಡೆ ಮಳೆ ಕೊರತೆಯಿಂದ ಬರದ ಆತಂಕ ಎದುರಾಗಿದೆ. ಹೀಗಾಗಿ ಜಿಲ್ಲಾವಾರು ಪರಿಸ್ಥಿತಿಯನ್ನು ಸಚಿವರು ನೇರವಾಗಿ ಪರಿಶೀಲಿಸಿ, ಸರ್ಕಾರಕ್ಕೆ ವಾಸ್ತವ ವರದಿ ಸಲ್ಲಿಸುವುದು ಮಹತ್ವ ಪಡೆದಿದೆ.

ಇದನ್ನೂ ಓದಿ: ಒಂದೆಡೆ ಭೀಕರ ಬರ, ಇನ್ನೊಂದೆಡೆ ಹಕ್ಕಿ ಜ್ವರದ ಭೀತಿ: ಕೊಪ್ಪಳ ಜನತೆಗೆ ಎದುರಾಯ್ತು ಮತ್ತೊಂದು ಕಂಟಕ!

ಸ್ಥಳೀಯ ಅಧಿಕಾರಿಗಳು, ರೈತರು ಹಾಗೂ ಸಾರ್ವಜನಿಕರಿಂದ ಮಾಹಿತಿ ಪಡೆದು ಪರಿಸ್ಥಿತಿಯ ಸಮಗ್ರ ಚಿತ್ರಣವನ್ನು ಸರ್ಕಾರದ ಗಮನಕ್ಕೆ ತರುವಂತೆ ಸಚಿವರಿಗೆ ಸೂಚಿಸಲಾಗಿದೆ. ವರದಿಯ ಆಧಾರದ ಮೇಲೆ ಮುಂದಿನ ಬರ ನಿರ್ವಹಣೆ ಹಾಗೂ ಪರಿಹಾರ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆಯಿದೆ.

ವರದಿ: ಈರಣ್ಣ ಬಸವಾ, ಟಿವಿ9, ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಣ್ಣದ ಬದುಕಿನ ಅನುಭವ ಬಿಚ್ಚಿಟ್ಟ ರಂಗಾಯಣ ರಘು!
ಬಣ್ಣದ ಬದುಕಿನ ಅನುಭವ ಬಿಚ್ಚಿಟ್ಟ ರಂಗಾಯಣ ರಘು!
3705.30 ಕೋಟಿ ರೂ. ಬರ ಪರಿಹಾರಕ್ಕೆ ಸಿಎಂ ಡಿಕೆ ಶಿವಕುಮಾರ್ ಮನವಿ
3705.30 ಕೋಟಿ ರೂ. ಬರ ಪರಿಹಾರಕ್ಕೆ ಸಿಎಂ ಡಿಕೆ ಶಿವಕುಮಾರ್ ಮನವಿ