AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿಗಳಿಗೆ ಗುಡ್​​ನ್ಯೂಸ್: ಆಂಗ್ಲ ಮಾಧ್ಯಮ ಶಾಲೆಗಳ ಮೇಲ್ದರ್ಜೆಗೆ ಮುಂದಾದ ಶಿಕ್ಷಣ ಇಲಾಖೆ

2018-19ನೇ ಸಾಲಿನಲ್ಲಿ 1 ರಿಂದ 7 ನೇ ತರಗತಿಯವರೆಗೆ ಕನ್ನಡ ಶಾಲೆಗಳಲ್ಲಿ ಆಂಗ್ಲ ಮಾಧ್ಯಮವನ್ನ ಆರಂಭಿಸಲಾಗಿದ್ದು, ಈ ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಓದಿದ ಸುಮಾರು 30 ಸಾವಿರ ವಿದ್ಯಾರ್ಥಿಗಳು ಭವಿಷ್ಯ ಅತಂತ್ರರಾಗಿದ್ದಾರೆ. ಪ್ರಾಥಮಿಕ ಶಿಕ್ಷಣವನ್ನು ಇಂಗ್ಲೀಷ್​​ನಲ್ಲಿ ಪಡೆದಿದ್ದು, ಹೈಸ್ಕೂಲ್ ನಲ್ಲಿ ಆಂಗ್ಲ ಮಾಧ್ಯಮ ಇಲ್ಲದಿದ್ದರಿಂದ​​​​ ಮುಂದಿನ ಶೈಕ್ಷಣಿಕ ಭವಿಷ್ಯದ ಬಗ್ಗೆ ಟೆನ್ಷನ್ ಹೆಚ್ಚಾಗಿತ್ತು. ಆದ್ರೆ, ಈಗ ಇದಕ್ಕೆ ಶಿಕ್ಷಣ ಇಲಾಖೆ ಪರ್ಯಾಯ ಕ್ರಮಕ್ಕೆ ಮುಂದಾಗಿದೆ.

ವಿದ್ಯಾರ್ಥಿಗಳಿಗೆ ಗುಡ್​​ನ್ಯೂಸ್: ಆಂಗ್ಲ ಮಾಧ್ಯಮ ಶಾಲೆಗಳ ಮೇಲ್ದರ್ಜೆಗೆ ಮುಂದಾದ ಶಿಕ್ಷಣ ಇಲಾಖೆ
Karnataka Education
ವಿನಯ್​ ಕಾಶಪ್ಪನವರ್​
| Edited By: |

Updated on: Jun 16, 2026 | 7:51 PM

Share

ಬೆಂಗಳೂರು, (ಜೂನ್ 16): 2018-19ರಲ್ಲಿ ಆರಂಭವಾದ 1001 ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ (Karnataka English medium Schools) 7ನೇ ತರಗತಿ ಪೂರೈಸಿದ ಸುಮಾರು 30 ಸಾವಿರ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ. ಸರ್ಕಾರವು 8ನೇ ತರಗತಿಗೆ ಆಂಗ್ಲ ಮಾಧ್ಯಮ ಪ್ರೌಢಶಾಲೆ ಆರಂಭಿಸದ ಕಾರಣ, ಎಲ್ಲಿಗೆ ಪ್ರವೇಶ ಪಡೆಯಬೇಕೆಂಬ ಗೊಂದಲದಲ್ಲಿ ವಿದ್ಯಾರ್ಥಿಗಳು ಮತ್ತು ಪಾಲಕರಿದ್ದರು. ಹೀಗಾಗಿ ಈ ಬಗ್ಗೆ ಟವಿ9 ವರದಿ ಮಾಡಿತ್ತು. ಇದರ ಬೆನ್ನಲ್ಲೇ ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳಿಗೆ ಪರ್ಯಾಯ ಕ್ರಮಕ್ಕೆ ಶಾಲಾ ಶಿಕ್ಷಣ ಇಲಾಖೆ ಮುಂದಾಗಿದ್ದು,  ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ  ಹಾಲಿ ಶಾಲೆಗಳಲ್ಲಿಯೇ 8ನೇ ತರಗತಿಯಿಂದ 10ರವರೆಗೆ ಆಂಗ್ಲ ಮಾಧ್ಯಮ ಶಾಲೆಗಳನ್ನ ಮೇಲ್ದರ್ಜೆಗೆ ಏರಿಸಲು ಮುಂದಾಗಿದೆ. ಈ ಬಗ್ಗೆ ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಕೆ ಮಾಡಿದೆ.

ಇಂಗ್ಲೀಷ್ ಮೀಡಿಯಂ ಶಾಲೆಗಳು ಮೇಲ್ದರ್ಜೆಗೆ

ಎಂಟನೇ ತರಗತಿಯಿಂದ 10ನೇ ತರಗತಿವರೆಗೆ ಆಂಗ್ಲ ಮಾಧ್ಯಮ ಆರಂಭಕ್ಕೆ ಶಿಕ್ಷಣ ಇಲಾಖೆ, ಸರ್ಕಾರಕ್ಕೆ ಪ್ರಸ್ತಾವನೆ ನೀಡಿದೆ. ಎರಡು ಕಿಲೋಮೀಟರ್ ವ್ಯಾಪ್ತಿಯಲ್ಲಿ ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳು ಇದ್ರೆ ಅಲ್ಲಿ ದಾಖಲಾತಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಯಾವ ಭಾಗದಲ್ಲಿ ಎರಡು ಕಿಲೋ ಮೀಟರ್ ವ್ಯಾಪ್ತಿಗಿಂತ ಒಳಗಡೆ ಆಂಗ್ಲ ಮಾಧ್ಯದ ಶಾಲೆಗಳು ಇಲ್ಲವಾದ್ರೆ ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿಯೇ 8ನೇ ತರಗತಿಗೆ ಆಂಗ್ಲ ಮಾಧ್ಯಮ ಮೇಲ್ದರ್ಜೆಗೆ ಮಾಡೋದಕ್ಕೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಶಾಲೆಯಲ್ಲಿ ಓದಿದ 30 ಸಾವಿರ ಮಕ್ಕಳು ಅತಂತ್ರ! ಸರ್ಕಾರದ ಎಡವಟ್ಟಿಗೆ ವಿದ್ಯಾರ್ಥಿಗಳ ಭವಿಷ್ಯದ ಕಥೆ ಏನು?

ಅತಂತ್ರದಲ್ಲಿದ್ದ 30 ಸಾವಿರಕ್ಕೂ ಹೆಚ್ಚು ಮಕ್ಕಳು

2018-19ನೇ ಸಾಲಿನಲ್ಲಿ 1 ರಿಂದ 7 ನೇ ತರಗತಿಯವರೆಗೆ ರಾಜ್ಯಾದ್ಯಂತ 1001 ಕನ್ನಡ ಶಾಲೆಗಳಲ್ಲಿ ಆಂಗ್ಲ ಮಾಧ್ಯಮವನ್ನ ಪ್ರಾಥಮಿಕ ಶಾಲೆಗಳಲ್ಲಿ ಆರಂಭ ಮಾಡಲಾಗಿತ್ತು. ಈಗ 2018-19ನೇ ಸಾಲಿನಲ್ಲಿ ಒಂದನೇ ತರಗತಿ ಪಾಸ್ ಆದ 30 ಸಾವಿರ ವಿದ್ಯಾರ್ಥಿಗಳು 7 ನೇ ತರಗತಿಯವರೆಗೂ ಆಂಗ್ಲ ಮಾಧ್ಯಮದಲ್ಲಿ ಓದಿ ಪಾಸ್ ಆಗಿದ್ದಾರೆ ಮುಂದೆ ಪ್ರೌಢ ಶಿಕ್ಷಣ 8,9 ಹಾಗೂ 10ನೇ ತರಗತಿಯನ್ನ ಆಂಗ್ಲ ಮಾಧ್ಯಮದಲ್ಲಿ ಓದಬೇಕು ಅಂದ್ರೆ ಸರ್ಕಾರದಲ್ಲಿ ಆಂಗ್ಲ ಮಾಧ್ಯಮದ ಶಾಲೆಗಳಿಗೆ ದಾಖಲಾತಿ ಇಲ್ಲದಾಗಿ ಪರದಾಟವಾಗಿತ್ತು. ಖಾಸಗಿಯಲ್ಲಿ ದಾಖಲಾತಿಗೆ ಆರ್ಥಿಕ ಸಮಸ್ಯೆಯಿಂದ ಪೋಷಕರು ಪರದಾಟವಾಗಿತ್ತು. ಈ ಬಗ್ಗೆ ಟಿವಿ9 ಸುದ್ದಿ ಪ್ರಸಾರ ಬಳಿಕ ಶಿಕ್ಷಣ ಇಲಾಖೆ ಅಲರ್ಟ್ ಆಗಿದೆ.

1ರಿಂದ 7 ನೇ ತರಗತಿಯವರೆಗೆ ಮಾತ್ರ ಆಂಗ್ಲ ಮಾಧ್ಯಮ

ಸರ್ಕಾರದಲ್ಲಿ ಕೇವಲ ಒಂದನೇ ತರಗತಿಯಿಂದ 7 ನೇ ತರಗತಿಯವರೆಗೆ ಮಾತ್ರ ಆಂಗ್ಲ ಮಾಧ್ಯಮದ ಶಾಲೆಗಳಿದ್ದು, ಪ್ರೌಢ ಶಾಲೆಗಳಾ 8 ರಿಂದ 10 ನೇ ತರಗತಿಗೆ ಪ್ರೌಢ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಾಲೆಗಳು ಇಲ್ಲ. ಹೀಗಾಗಿ ಖಾಸಗಿ ಶಾಲೆಗಳಿಗೆ ದಾಖಲಾತಿ ಮಾಡಿಕೊಳ್ಳಲು ಅರ್ಥಿಕ ಶಕ್ತಿ ಪೋಷಕರ ಬಳಿ ಇಲ್ಲ. ಹೀಗಾಗಿ ಸರ್ಕಾರಿ ಶಾಲೆಯ ಸುಮಾರು 30 ಸಾವಿರ ವಿದ್ಯಾರ್ಥಿಗಳು ಮುಂದಿನ ದಾರಿ ಗೊತ್ತಾಗದೇ ಅತಂತ್ರರಾಗಿದ್ದರು. 8ನೇ ತರಗತಿಗೆ ಯಾವ ಶಾಲೆ ಮತ್ತು ಯಾವ ಮಾಧ್ಯಮದಲ್ಲಿ ಓದಬೇಕು ಎನ್ನುವ ಗೊಂದಲ ಎದುರಾಗಿತ್ತು. ಈಗ ಶಾಲಾ ಶಿಕ್ಷಣ ಇಲಾಖೆ ಎಂಟನೇ ತರಗತಿ ಆಂಗ್ಲ ಮಾಧ್ಯಮ ಆರಂಭಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಒಟ್ಟಿನಲ್ಲಿ 30 ಸಾವಿರ ವಿದ್ಯಾರ್ಥಿಗಳ ಭವಿಷ್ಯದ ದೃಷ್ಠಿಯಿಂದ ಶಾಲಾ ಶಿಕ್ಷಣ ಹಾಲಿ ಶಾಲೆಗಳಲ್ಲಿಯೇ ಎಂಟನೇ ತರಗತಿಯಿಂದ 10ರವರೆಗೆ ಆಂಗ್ಲ ಮಾಧ್ಯಮ ಶಾಲೆಗಳನ್ನ ಮೇಲ್ದರ್ಜೆಗೆ ಏರಿಸಲು ಮುಂದಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ