35 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಕರ್ನಾಟಕ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

ಕೊನೆಗೂ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಮತ್ತು ಪ್ರೌಢಶಾಲೆಗಳಿಗೆ ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಹಸಿರು ನಿಶಾನೆ ತೋರಿದೆ. ಜ್ಞಾನ, ಗಣಿತ ಮತ್ತು ಇಂಗ್ಲಿಷ್ ವಿಷಯಗಳ ಶಿಕ್ಷಕರನ್ನೇ ಹೆಚ್ಚಾಗಿ ನೇಕಮಕ ಮಾಡಿಕೊಳ್ಳುವಂತೆಯೂ ಸೂಚನೆ ನೀಡಲಾಗಿದೆ. ಆಯಾ ಶಾಲೆಯಲ್ಲಿ ನೇಮಕ ಪ್ರಕ್ರಿಯೆಗೆಂದೇ ಒಬ್ಬರನ್ನು ನೇಮಿಸಿಕೊಳ್ಳಲು ಮುಖ್ಯಶಿಕ್ಷಕರಿಗೆ ಅನುಮತಿ ನೀಡಲಾಗಿದೆ.

35 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಕರ್ನಾಟಕ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್
35 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಕರ್ನಾಟಕ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್
Follow us
Ganapathi Sharma
|

Updated on:Jun 14, 2024 | 10:18 AM

ಬೆಂಗಳೂರು, ಜೂನ್ 14: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 35,000 ಮತ್ತು ಪ್ರೌಢಶಾಲೆಗಳಿಗೆ 10,000 ಅತಿಥಿ ಶಿಕ್ಷಕರ ನೇಮಕಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (DSEL) ಇತ್ತೀಚೆಗೆ ಅನುಮೋದನೆ ನೀಡಿದೆ. ರಾಜ್ಯದ ಸುಮಾರು 49,679 ಸರ್ಕಾರಿ ಶಾಲೆಗಳಲ್ಲಿ (Government Schools) ಖಾಲಿ ಇರುವ ಹುದ್ದೆಗಳ ನೇಮಕಾತಿ ಬಹಳ ಸಮಯದಿಂದ ಬಾಕಿ ಉಳಿದಿತ್ತು. ಹೊಸ ಶೈಕ್ಷಣಿಕ ವರ್ಷವು ಈಗಾಗಲೇ ಜೂನ್ ಮೊದಲ ವಾರದಲ್ಲಿ ಪ್ರಾರಂಭವಾಗಿದ್ದರೂ, 2024-25 ಕ್ಕೆ ಈ ಖಾಲಿ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲು ಸರ್ಕಾರ ಉದ್ದೇಶಿಸಿದೆ ಎಂದು ವರದಿಯಾಗಿದೆ.

ಶಿಕ್ಷಣ ಇಲಾಖೆಯ ಮೂಲಗಳ ಪ್ರಕಾರ, ಅತಿಥಿ ಶಿಕ್ಷಕರ ತಾತ್ಕಾಲಿಕ ನೇಮಕಾತಿ ಇಲ್ಲಿಯವರೆಗೆ ಭರದಿಂದ ಸಾಗಿದೆ. ನೇಮಕ ಪ್ರಕ್ರಿಯೆಯನ್ನು ವೇಗಗೊಳಿಸಲು ಶಾಲಾ ಮಟ್ಟದಲ್ಲಿ ವ್ಯಕ್ತಿಯೊಬ್ಬರನ್ನು ನೇಮಕ ಮಾಡಿಕೊಳ್ಳುವಂತೆ ಇಲಾಖೆಯು ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಿದೆ.

ಹೆಚ್ಚಾಗಿ ವಿಜ್ಞಾನ, ಗಣಿತ ಮತ್ತು ಇಂಗ್ಲಿಷ್ ಅನ್ನು ನಿಭಾಯಿಸುವುದು ವಿದ್ಯಾರ್ಥಿಗಳಿಗೆ ಕಷ್ಟವಾಗುವುದರಿಂದ ಆ ವಿಷಯಗಳ ಶಿಕ್ಷಕರನ್ನೇ ಹೆಚ್ಚು ನೇಮಕ ಮಾಡಿಕೊಳ್ಳುವಂತೆ ಮುಖ್ಯ ಶಿಕ್ಷಕರಿಗೆ ಸೂಚಿಸಿದ್ದೇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧಿಕಾರಿ ಬಿಬಿ ಕಾವೇರಿ ತಿಳಿಸಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್​​ಪ್ರೆಸ್’ ವರದಿ ಮಾಡಿದೆ. ವಿಜ್ಞಾನ, ಗಣಿತ ಮತ್ತು ಇಂಗ್ಲಿಷ್​ನಲ್ಲಿ ವಿದ್ಯಾರ್ಥಿಗಳು ಕಡಿಮೆ ಸಾಧನೆ ಮಾಡುವುದು ಕಂಡುಬಂದಿದೆ. ಈ ವಿಷಯಗಳಲ್ಲೇ ಹೆಚ್ಚಿನ ವೈಫಲ್ಯಗಳನ್ನು ಕಾಣುತ್ತಿದ್ದೇವೆ. ಹೀಗಾಗಿ ಈ ವಿಷಯಗಳ ಶಿಕ್ಷಕರ ನೇಮಕಕ್ಕೆ ಒತ್ತು ನೀಡಲು ಸೂಚಿಸಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ವಿವಿಧ ವಿಷಯಗಳ ಖಾಲಿ ಹುದ್ದೆಗಳು ತಾಲೂಕಿನಿಂದ ತಾಲೂಕಿಗೆ ಬದಲಾಗುತ್ತವೆ ಮತ್ತು ಸಾರ್ವಜನಿಕ ಶಿಕ್ಷಣದ ಉಪ ನಿರ್ದೇಶಕರು (ಡಿಡಿಪಿಐಗಳು) ನೇಮಕಾತಿಗೆ ಜವಾಬ್ದಾರರಾಗಿರುತ್ತಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಭಾರತೀಯ ವಿಶ್ವವಿದ್ಯಾನಿಲಯಗಳು ವರ್ಷಕ್ಕೆ ಎರಡು ಬಾರಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಬಹುದು: ಯುಜಿಸಿ

ಮಂಜೂರಾದ ಎಲ್ಲ ಅತಿಥಿ ಶಿಕ್ಷಕರನ್ನು ಶೀಘ್ರವೇ ನೇಮಕ ಮಾಡಲಾಗುವುದು ಎಂದು ಆಯುಕ್ತರು ಭರವಸೆ ನೀಡಿದ್ದಾರೆ. ಮುಖ್ಯ ಶಿಕ್ಷಕರು ವಿಷಯಗಳ ಅರ್ಹತೆಯ ಆಧಾರದ ಮೇಲೆ ನೇಮಕ ಮಾಡಿಕೊಳ್ಳುತ್ತಾರೆ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ಗೌರವಧನವನ್ನು ಮಾಸಿಕ 10,000 ರೂ. ಮತ್ತು ಪ್ರೌಢಶಾಲೆಗಳಿಗೆ 10,500 ರೂ. ನಿಗದಿಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಶಿಕ್ಷಕರ ಮೇಲಿನ ಹೊರೆ ಇಳಿಸುವ ಸರ್ಕಾರದ ಕ್ರಮ ಸ್ವಾಗತಾರ್ಹವಾದರೂ ಖಾಯಂ ಅಧ್ಯಾಪಕರ ನೇಮಕಕ್ಕೆ ಇಲಾಖೆ ಗಮನಹರಿಸಬೇಕು ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ ನಾಗೇಶ್ ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:18 am, Fri, 14 June 24